ಮಹೇಂದ್ರ ಕುಮಾರ್ ನಿಧನಕ್ಕೆ ಮಾಜಿ ಸಿಎಂ ಎಚ್‌ಡಿಕೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ
ಬೆಂಗಳೂರು, ಏ. 25: ಭಜರಂಗ ದಳದ ಮಾಜಿ ಸಂಚಾಲಕ, ಪ್ರಗತಿಪರ ಚಿಂತಕ ನಾಯಕ ಮಹೇಂದ್ರ ಕುಮಾರ್ ನಿಧನಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದದಾರೆ.
Recommended Video
ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ. ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನನ್ನೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು. ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ನಾನು ಹತ್ತಿರದಿಂದ ಕಂಡಿದ್ದೆ. ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ: ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಹಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ದುಃಖಪಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪದಲ್ಲಿ ತಿಳಿಸಿದ್ದಾರೆ.

ಆರಂಭದಲ್ಲಿ ಭಜರಂಗ ದಳದಲ್ಲಿ ಸಕ್ರೀಯರಾಗಿದ್ದ ಮಹೇಂದ್ರ ಕುಮಾರ್ ಅವರು ನಂತರ ಭಜರಂಗದಳಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ಸೇರಿದ್ದರು. ನಂತರದ ದಿನಗಳಲ್ಲಿ ಸಂಘ ಪರಿವಾರ ಕಟು ಟೀಕಾಕಾರರಾಗಿ ಸಾಮಾಜಿಕ, ಜಾಗೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 'ನಮ್ಮ ಧ್ವನಿ' ಎಂಬ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿದ್ದ ಮಹೇಂದ್ರ ಕುಮಾರ್, ಸಮಾಜದ ಪರ ದನಿಯಾಗಿದ್ದರು. ಕೇಂದ್ರ ಸರ್ಕಾರರ ಸಿಎಎ ಕಾಯ್ದೆ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು.












Click it and Unblock the Notifications