ಸೆಪ್ಟೆಂಬರ್ 17 ರಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಬೆಂಗಳೂರು, ಸೆಪ್ಟೆಂಬರ್.16: ಪೆಟ್ರೋಲ್, ಡೀಸೆಲ್ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರ ಮೇಲಿನ ಹೊರೆ ತಗ್ಗಿಸಲು ರಾಜ್ಯದ ಜನತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಹೌದು, ಜನರನ್ನು ಆತಂಕಕ್ಕೆ ದೂಡಿದ್ದ ತೈಲ ಬೆಲೆ ಇದೀಗ ರಾಜ್ಯದಲ್ಲಿ ಇಳಿಕೆಯಾಗುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2 ರಿಂದ 3ರೂ.ನಷ್ಟು ಇಳಿಕೆಗೆ ಸಿಎಂ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾಳೆಯಿಂದ ಅಂದರೆ ಸೋಮವಾರ (ಸೆಪ್ಟೆಂಬರ್ .17) ರಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದೆ.

ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶವೊಂದೇ ಬಾಕಿ ಇದೆ.

Kumaraswamy has instructed that petrol, diesel prices will be reduced

ಇತ್ತೀಚೆಗಷ್ಟೇ ಆಂಧ್ರ ಪ್ರದೇಶ ಹಾಗೂ ರಾಜಸ್ಥಾನ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡಿದ ಬೆನ್ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ತಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನ ಇಳಿಕೆ ಮಾಡಿದ್ದರು.

ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 1 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದ್ದರು. ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಡೀಸೆಲ್ ಹಾಗೂ ಪೆಟ್ರೋಲ್ ಪ್ರತಿ ಲೀಟರ್ ಗೆ 2 ರೂಪಾಯಿ ಇಳಿಸಿದ್ದರು.

ಇನ್ನು ರಾಜಸ್ಥಾನದ ಮುಖ್ಯಮಂತ್ರಿ ವಸುಂದರಾ ರಾಜೆ ಸಹ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 2.5 ರೂ.ಗೆ ಇಳಿಕೆ ಮಾಡಿದ್ದರು. ಹಾಗೆಯೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಇಳಿಕೆ ಮಾಡುತ್ತಾರಾ ಎಂದು ಜನತೆ ಕಾಯುತ್ತಿದ್ದರು.

ಇದೀಗ ಕುಮಾರಸ್ವಾಮಿ ಅವರು ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿರುವುದು ರಾಜ್ಯದ ಜನತೆಗೆ ಇನ್ನಿಲ್ಲದ ಸಂತೋಷವನ್ನುಂಟು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+