• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಎಸ್‌ವೈ ವಿಶ್ವಾಸಮತ ಯಾಚನೆ ಹಿನ್ನೆಲೆ ಕುಮಾರಸ್ವಾಮಿ ಮಹತ್ವದ ಸಭೆ

|
   ಬಿ ಎಸ್ ವೈ ವಿಶ್ವಾಸಮತಯಾಚನೆಗೂ ಮುಂಚೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಸಭೆ | Oneindia Kannada

   ಬೆಂಗಳೂರು, ಜುಲೈ 29: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸಮತ ಯಾಚನೆ ಮಾಡಲಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಜೆಡಿಎಸ್ ಮಹತ್ವದ ಸಭೆ ಕರೆದಿದೆ.

   ಶಾಸಕರ ಮಹತ್ವ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ, ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ದಳಪತಿಗಳ ಸಭೆ ಬಿಜೆಪಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಕುರಿತು ಚರ್ಚೆ ನಡೆಯಲಿದೆ. ಇಂದಿನಿಂದ ಸದನದಲ್ಲಿ ತಾನು ಏನು ಮಾಡಬೇಕು, ವಿರೋಧ ಪಕ್ಷವಾದ ಕಾಂಗ್ರೆಸ್ ಜೊತೆಯಲ್ಲಿ ಇದ್ದು ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಾ ಎನ್ನುವ ಕುರಿತು ಚರ್ಚೆ ನಡೆಯಲಿದೆ.

   LIVE: ಶಕ್ತಿಸೌಧದಲ್ಲಿ ವಿಶ್ವಾಸ, ನ್ಯಾಯಾಲಯದಲ್ಲಿ ಅತೃಪ್ತರ ಅವಿಶ್ವಾಸLIVE: ಶಕ್ತಿಸೌಧದಲ್ಲಿ ವಿಶ್ವಾಸ, ನ್ಯಾಯಾಲಯದಲ್ಲಿ ಅತೃಪ್ತರ ಅವಿಶ್ವಾಸ

   ಬಿಜೆಪಿಯ ಕೆಲ ನಿರ್ಧಾರಗಳ ಖಂಡಿಸಿ ಜನಪರ ನಿಲ್ಲುವ ಕುರಿತು ಚರ್ಚೆ ನಡೆಯಲಿದೆ. ಬಿಜೆಪಿಯ ಫೈನಾನ್ಸ್ ಬಿಲ್ ಪಾಸ್ ಗೆ ವಿರೋಧ ಮಾಡದೆ ಇರೋ ಬಗ್ಗೆಯೂ ಕೂಡ ಚರ್ಚೆ ನಡೆಯಲಿದೆ. ಅಲ್ಲದೆ ಇಂದಿನಿಂದ ಆರಂಭವಾಗುವ ಸದನದಲ್ಲಿ ತಾವು ಏನೂ ಮಾಡಬೇಕು ಎಂಬುದರ ಬಗ್ಗೆ ಶಾಸಕರಿಗೆ ತಿಳಿಸಲಿದ್ದಾರೆ. ಜೆಡಿಎಸ್ ಮೂವರು ಶಾಸಕರ ಅರ್ಹತೆ ಮಾಡಿರುವ ಬಗ್ಗೆ ಚರ್ಚೆ ನಡೆಯಲಿದೆ.

   ಆ ಮೂರು ಕ್ಷೇತ್ರದಲ್ಲಿ ಮುಂದಿನ ರಾಜಕೀಯ ನೆಡೆ ಕುರಿತು ಶಾಸಕರ ಜೊತೆ ಮಾಜಿ ಸಿಎಂ ಮುಕ್ತವಾಗಿ ಚರ್ಚೆ ನಡೆಸಲಿದ್ದಾರೆ. ಸಭೆ ಮುಗಿದ ಬಳಿಕ ವಿಧಾನಸೌಧಕ್ಕೆ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

   ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹೇಗೆ? ಸದನದ ಘಟನಾವಳಿಗಳುವಿಶ್ವಾಸಮತ ಯಾಚನೆ ಪ್ರಕ್ರಿಯೆ ಹೇಗೆ? ಸದನದ ಘಟನಾವಳಿಗಳು

   ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಹೀಗೆ ಎಲ್ಲ 14 ಶಾಸಕರನ್ನೂ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.

   17 ಶಾಸಕರು ಅನರ್ಹ, ಸದನದ ಬಲಾಬಲ, ಬಿಎಸ್ವೈಗೆ ಶ್ರೀರಕ್ಷೆ!17 ಶಾಸಕರು ಅನರ್ಹ, ಸದನದ ಬಲಾಬಲ, ಬಿಎಸ್ವೈಗೆ ಶ್ರೀರಕ್ಷೆ!

   ಅದಕ್ಕೂ ಮೊದಲು ಸುದ್ದಿಗೋಷ್ಠಿ ಕರೆದಿದ್ದ ಸ್ಪೀಕರ್ ಅವರು ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರನ್ನು ಅನರ್ಹ ಗೊಳಿಸಿದ್ದರು.

   English summary
   Former Chief Minister HD Kumaraswamy holding legislative party meeting before the BS Yeddyurappa vote of confidence motion.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X