• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ: ಸಿಎಂ

By Manjunatha
|

ಬೆಂಗಳೂರು, ಆಗಸ್ಟ್ 27: ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳು ಇಂದು ವಿಧಾನಸೌಧಕ್ಕೆ ಭೇಟಿ ನೀಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು.

ಟೊಯೋಟ ಕಿರ್ಲೋಸ್ಕರ್‌ ಸಂಸ್ಥೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡುವಂತೆ ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು, ಟೊಯೋಟ ಅಧಿಕಾರಿಗಳ ಬಳಿ ಮನವಿ ಮಾಡಿದರು.

414 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಟೊಯೋಟ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕಿಟೋ ತಚಿಬಾನ ಹಾಗೂ ನಿರ್ದೇಶಕ ಮತ್ತು ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ಇನ್ನೂ ಹಲವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು.

ವಾಹನಗಳ ಮೇಲಿನ ತೆರಿಗೆ ವೆಚ್ಚ ಶೇ. 43 ರಷ್ಟು ಹೆಚ್ಚಿಸಲಾಗಿದ್ದು, ಜಿ.ಎಸ್.ಟಿ ಕಡಿಮೆ ಮಾಡಿಸುವಂತೆ ಸಂಸ್ಥೆಯ ನಿರ್ದೇಶಕರು ಮನವಿ ಮಾಡಿದರು. ಈ ಬಗ್ಗೆ ಮನವಿಯನ್ನು ಸಲ್ಲಿಸಿದಲ್ಲಿ ಕೇಂದ್ರ ಸರ್ಕಾರದೊoದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

English summary
Toyota Kirloskar officers today met CM Kumaraswamy in vidhana soudha. CM Kumaraswamy requested Toyota officers to give job to local peoples.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X