ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದಿನ ನಾಲ್ಕು ವರ್ಷ ಕುಮಾರಸ್ವಾಮಿ ಸಿಎಂ: ಪರಮೇಶ್ವರ್

|
Google Oneindia Kannada News

ಬೆಂಗಳೂರು, ಮೇ 24: ಮುಂದಿನ ನಾಲ್ಕು ವರ್ಷ ಕುಮಾರಸ್ವಾಮಿ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದರು.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರವು ತನ್ನ ಕಾರ್ಯವನ್ನು ಮುಂದುವರೆಸಲಿದ್ದು, ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲಿದೆ ಎಂದು ಅವರು ಹೇಳಿದರು.

ನಿನ್ನೆ ಬಂದಿರುವ ಫಲಿತಾಂಶ ರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದ್ದು, ಅದು ಕೇಂದ್ರ ಸರ್ಕಾರವನ್ನು ನಿರ್ಧರಿಸುವ ಚುನಾವಣೆ ರಾಜ್ಯವನ್ನಲ್ಲ, ರಾಜ್ಯದ ಮೇಲೆ ಫಲಿತಾಂಶವು ಯಾವ ಪರಿಣಾಮವೂ ಅದು ಬೀರುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ನಿನ್ನೆಯ ಫಲಿತಾಂಶ ಮೈತ್ರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಬಿಜೆಪಿಯು ಆಪರೇಷನ್ ಕಮಲ ಮಾಡಲು ನಡೆಸುತ್ತಿರುವ ಪ್ರಯತ್ನಗಳು ಯಶಸ್ಸು ನೀಡುವುದಿಲ್ಲ ಎಂದು ಅವರು ಹೇಳಿದರು.

ಮುಂದಿನ ಕ್ರಮ ಕೈಗೊಳ್ಳುತ್ತೇವೆ: ಪರಮೇಶ್ವರ್

ಮುಂದಿನ ಕ್ರಮ ಕೈಗೊಳ್ಳುತ್ತೇವೆ: ಪರಮೇಶ್ವರ್

ಫಲಿತಾಂಶ ಏನೇ ಆಗಿರಲಿ, ಅದರ ಸರಿ-ತಪ್ಪುಗಳ ಬಗ್ಗೆ ವಿಶ್ಲೇಷಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ, ಆದರೆ ಕಾಂಗ್ರೆಸ್‌ ಬೆಂಬಲ ಕುಮಾರಸ್ವಾಮಿ ಅವರಿಗೆ ಇದ್ದು ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಪರಮೇಶ್ವರ್ ಹೇಳಿದರು.

ಸಭೆಗೆ ಬಾರದ ಸಿದ್ದರಾಮಯ್ಯ

ಸಭೆಗೆ ಬಾರದ ಸಿದ್ದರಾಮಯ್ಯ

ಇಂದು ಬೆಳಿಗ್ಗೆ ಅನೌಪಚಾರಿಕವಾಗಿ ಸಚಿವ ಸಂಪುಟ ಸಭೆ ನಡೆಯಿತು. ಸಂಪುಟಸಭೆಯಲ್ಲಿ ಎಲ್ಲಾ ಸದಸ್ಯರು ಕುಮಾರಸ್ವಾಮಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಪರಮೇಶ್ವರ್, ಎಂ.ಬಿ.ಪಾಟೀಲ್ ಸೇರಿ ಹಲವುರ ಪಾಲ್ಗೊಂಡಿದ್ದರು. ಆದರೆ ಸಭೆಗೆ ಸಿದ್ದರಾಮಯ್ಯ ಬರಲಿಲ್ಲ.

ಸಂಪುಟ ಸಭೆ ಸದಸ್ಯರ ವಿಶ್ವಾಸವಿದೆ: ಎಚ್‌ಡಿಕೆ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಚಿವ ಸಂಪುಟದ ಅನೌಪಚಾರಿಕ ಸಭೆಯಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಚರ್ಚಿಸಲಾಯಿತು. ಸಂಪುಟದ ಎಲ್ಲ ಸಹೋದ್ಯೋಗಿಗಳು ನನ್ನ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರಿಗೆ ಹಾಗೂ ಮಿತ್ರ ಪಕ್ಷ ಕಾಂಗ್ರೆಸ್ ನ ಎಲ್ಲ ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.

ಸಚಿವ ಸಂಪುಟ ಸಭೆ

ಸಚಿವ ಸಂಪುಟ ಸಭೆ

ನಿನ್ನೆಯ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೀನಾಯ ಸೋಲು ಕಂಡಿದ್ದು, ಸೋಲಿಗೆ ಮೈತ್ರಿಯೇ ಕಾರಣ ಎಂಬ ಮಾತುಗಳು ಹರಿದಾಡುತ್ತಿದೆ. ಹಾಗಾಗಿಯೇ ಇಂದು ಅನೌಪಚಾರಿಕ ಸಚಿವ ಸಂಪುಟ ಸಭೆ ಕರೆದು ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಾಯಿತು.

English summary
G Parameshwar said Kumaraswamy will be Karnataka's CM for rest 4 years. He talked in pressmeet. He said congress supporting Kumaraswamy it will not change.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X