ಕುಂದಗೋಳ ಕ್ಷೇತ್ರದ ಮಾಜಿ ಶಾಸಕ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಅ. 22: ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಎಸ್ ಅಕ್ಕಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
Recommended Video
ಬೆಂಗಳೂರಿನ ಕೆಪಿಸಿಸಿ ಮುಖ್ಯ ಕಚೇರಿಯಲ್ಲಿಂದು(ಅ. 22) ಅಕ್ಕಿ ಅವರನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು. ಕೆಪಿಎಂಸಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಕ್ಕಿ ಅವರ ಜೊತೆಗೆ ನೂರಾರು ಬೆಂಬಲಿಗರು ಕೂಡಾ ಕಾಂಗ್ರೆಸ್ ಸೇರ್ಪಡೆಗೊಂಡರು.
''ಕಾರ್ಯಕರ್ತರು, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ಅವರ ಅಣತಿಯಂತೆ ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಸಾಮಾನ್ಯ ಕಾರ್ಯಕರ್ತನಂತೆ ಕರ್ತವ್ಯ ನಿರ್ವಹಿಸಿ, ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ'' ಎಂದು ಅಕ್ಕಿ ಅವರು ಪ್ರತಿಕ್ರಿಯಿಸಿದ್ದಾರೆ.

1994ರ ಚುನಾವಣೆಯಲ್ಲಿ ಜನತಾದಳದ ಎಂ.ಎಸ್. ಅಕ್ಕಿ ಮೊದಲ ಬಾರಿಗೆ ಜಯ ದಾಖಲಿಸಿದ್ದರೆ. 2004ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಪಕ್ಷದ ಅಭ್ಯರ್ಥಿ ಎಮ್.ಎಸ್.ಅಕ್ಕಿ 28,184 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು.
ಕೆಪಿಸಿಸಿ ಅಧ್ಯಕ್ಷ @DKShivakumar ಅವರ ನೇತೃತ್ವದಲ್ಲಿ ಕುಂದಗೋಳ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಅವರು ಎಲ್ಲಾ ಪದಾಧಿಕಾರಿಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
— Karnataka Congress (@INCKarnataka) October 22, 2020
ಕಾರ್ಯಾಧ್ಯಕ್ಷ @SaleemAhmadINC, ಕೆಪಿಎಂಸಿ ಅಧ್ಯಕ್ಷೆ @DrPushpaAmarnat, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು ಮುಖಂಡರ ಉಪಸ್ಥಿತಿ. pic.twitter.com/57FbzaNazY
ರಾಜರಾಜೇಶ್ವರಿ ನಗರ, ಶಿರಾ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದ್ದು, ಜೆಡಿಎಸ್ ತೊರೆದು ಕಾಂಗ್ರೆಸ್, ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications