• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಂದಗೋಳ ಕ್ಷೇತ್ರದ ಮಾಜಿ ಶಾಸಕ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ

|

ಬೆಂಗಳೂರು, ಅ. 22: ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಎಸ್ ಅಕ್ಕಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

   ಮುಂದೆ ಜೆಡಿಎಸ್ ಕಥೆ ಏನು? | Ramachandrappa | Oneindia Kannada

   ಬೆಂಗಳೂರಿನ ಕೆಪಿಸಿಸಿ ಮುಖ್ಯ ಕಚೇರಿಯಲ್ಲಿಂದು(ಅ. 22) ಅಕ್ಕಿ ಅವರನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು. ಕೆಪಿಎಂಸಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಕ್ಕಿ ಅವರ ಜೊತೆಗೆ ನೂರಾರು ಬೆಂಬಲಿಗರು ಕೂಡಾ ಕಾಂಗ್ರೆಸ್ ಸೇರ್ಪಡೆಗೊಂಡರು.

   ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ ಮಾವ

   ''ಕಾರ್ಯಕರ್ತರು, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ಅವರ ಅಣತಿಯಂತೆ ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಸಾಮಾನ್ಯ ಕಾರ್ಯಕರ್ತನಂತೆ ಕರ್ತವ್ಯ ನಿರ್ವಹಿಸಿ, ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ'' ಎಂದು ಅಕ್ಕಿ ಅವರು ಪ್ರತಿಕ್ರಿಯಿಸಿದ್ದಾರೆ.

   1994ರ ಚುನಾವಣೆಯಲ್ಲಿ ಜನತಾದಳದ ಎಂ.ಎಸ್. ಅಕ್ಕಿ ಮೊದಲ ಬಾರಿಗೆ ಜಯ ದಾಖಲಿಸಿದ್ದರೆ. 2004ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಪಕ್ಷದ ಅಭ್ಯರ್ಥಿ ಎಮ್.ಎಸ್.ಅಕ್ಕಿ 28,184 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು.

   ರಾಜರಾಜೇಶ್ವರಿ ನಗರ, ಶಿರಾ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದ್ದು, ಜೆಡಿಎಸ್ ತೊರೆದು ಕಾಂಗ್ರೆಸ್, ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ.

   English summary
   Kundagol constituency former JDS MLA M.S Akki today(Oct 22) joined Congress in presence of KPCC president D.K Shivakumar at KPCC office in Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X