ಶಿವಾನಂದ್ ತಗಡೂರರ ಸಹಾಯ ಅಪಾರ; ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ

ಪತ್ರಕರ್ತರ ಸಮುದಾದ ಹಿತಾಸಕ್ತಿಗೆ ನಿರಂತರವಾಗಿ ಪ್ರತಿನಿಧಿಸುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ್ ಅವರಿಗೆ ಅಖಿಲ ಭಾರತ ಶರಣು ಸಾಹಿತ್ಯ ಸಮ್ಮೆಳನದಲ್ಲಿ ಸನ್ಮಾನ ಮಾಡುವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಕೋವಿಡ್್ನಂತಹ ಸಂಕಷ್ಟದ ಸಮಯದಲ್ಲಿ ಶಿವಾನಂದ್ ಅವರು ಪತ್ರಕರ್ತರ ಪರವಾಗಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿಕೊಳ್ಳುತ್ತ ಶರಣ ಸಾಹಿತ್ಯ ಸಾಹಿತ್ಯ ಪರಿಷತ್ತು ವತಿಯಿಂದ ಅವರನ್ನು ಶಾಲು ಹೊದಿಸಿ ಸ್ಮರಣೆ ಕಾಣಿಕೆಯನ್ನು ನೀಡಿ ಸನ್ಮಾನಿಸಲಾಗಿದೆ.

ಪತ್ರಕರ್ತರ ಸಮುದಾಯಕ್ಕೆ ಧ್ವನಿಯಾಗಿ ನಿಂತಿರುವ ಮತ್ತು ವಿಶೇಷವಾಗಿ ಕೋವಿಡ್ ಕಾಲಘಟ್ಟದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಸಲ್ಲಿಸಿದ ಸೇವೆಯು ಶ್ಲಾಘನೀಯ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ ಅವರು ಸ್ಮರಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ನಾಗರಾಜಮೂರ್ತಿ ಮಾತನಾಡಿದರು.

Shivanand Tagadur

ಶಿವಾನಂದ್ ತಗಡೂರ್ ಅವರ ಸೇವೆ

ಶಿವಾನಂದ್ ತಗಡೂರ್ ಅವರು ನಿರಂತರವಾಗಿ ಪತ್ರಿಕೋದ್ಯಮದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದು, ವಿಶೇಷವಾಗಿ ಕೋವಿಡ್್ನಂತಹ ಅವಧಿಯಲ್ಲಿ ಅವರ ನಾಯಕತ್ವ ಮತ್ತು ಅವರ ಸೇವೆ ಪತ್ರಕರ್ತರ ಸಮುದಾಯಕ್ಕೆ ಅಪಾರವಾದ ಸಹಾಯ ದೊರೆಕಿತ್ತು ಎಂದು ಪ್ರಶಂಸಿಸಿದರು. ಅವರ ಸೇವೆಯನ್ನು ಗಮನಿಸಿ ಸಮ್ಮೇಳನದಲ್ಲಿ ಸನ್ಮಾನ ಮಾಡಿರುವುದು ಮಾಧ್ಯಮ ಕ್ಷೇತ್ರಕ್ಕೆ ಸಂದ ಗೌರವ ಎಂದು ಹೇಳಿದರು.

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಶರಣ ಸಾಹಿತ್ಯ ಪರಿಷತ್ತಿನ ಸಮ್ಮೇಳನಾಧ್ಯಕ್ಷರಾದ ನಾಡೋಜ ಗೊ.ರು. ಚನ್ನಬಸಪ್ಪ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶಿವಾನಂದ ತಗಡೂರು ಅವರನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಚನ್ನಬಸವ ಸ್ವಾಮೀಜಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ, ಡಾ. ಅವಿನಾಶ್ ಕವಿ, ಪಾಲನೇತ್ರ ಸೇರಿದಂತೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಗಣ್ಯರು ಉಪಸ್ಥಿತರಿದ್ದರು. ಶಿವಾನಂದ್ ತಗಡೂರ್ ಅವರಿಗೆ ಶುಭಾಶಯವನ್ನು ಕೋರಿದರು. ಸಮ್ಮೇಳನವು ಶರಣ ಸಾಹಿತ್ಯದ ಮೌಲ್ಯಗಳು ಹಾಗೂ ಸಮಾಜಮುಖಿ ಸೇವೆಯ ಮಹತ್ವವನ್ನು ತಿಳಿಸುವ ಮೂಲಕ ಯಶಸ್ವಿಯಾಗಿ ನಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+