ಭಾರತ ಬಂದ್ : ಟೌನ್‌ಹಾಲ್‌ನಿಂದ ಫ್ರೀಂಡಂಪಾರ್ಕ್‌ ವರೆಗೆ ಪ್ರತಿಭಟನಾ ರ‍್ಯಾಲಿ

ಬೆಂಗಳೂರು, ಜನವರಿ 9: ವಿವಿಧ ಕಾರ್ಮಿಕ ಸಂಘಟನೆಗಳು 12 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರ, ಟೌನ್‌ಹಾಲ್‌ನಿಂದ ಇದೀಗ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ.

ಈ ಪ್ರತಿಭಟನೆಯಲ್ಲಿ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಪ್ರತಿಭಟನಾ ಕಾರರು ವಿಧಾನಸೌಧ ಮಾರ್ಗದಲ್ಲಿ ತೆರಳದಂತೆ ಫ್ರೀಡಂಪಾರ್ಕ್‌ ಬಳಿ ಬ್ಯಾರಿಕೇಡ್ ಹಾಕಿ ತಡೆ ಹಿಡಿಯಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆ ನಡೆದ ಭಾರತ್​ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸಲು ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು ಇಂದು ಬಂದ್​ಗೆ ಕರೆ ಕೊಟ್ಟಿದ್ದವು.

Labour protest March from town hall to freedom park

ಕಾರ್ಪೊರೇಟ್ ಕಂಪನಿಗಳ ಪರ ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ, ಗುತ್ತಿಗೆ ಕಾರ್ಮಿಕ ಪದ್ಧತಿ ನಿಷೇಧ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಒತ್ತಾಯ, ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು 6 ಸಾವಿರ ಮಾಸಿಕ ನಿವೃತ್ತಿ ವೇತನ ನೀಡಬೇಕೆಂದು ಆಗ್ರಹಿಸಿ ಬಂದ್​ಗೆ ಕರೆ ಕೊಟ್ಟಿದ್ದರು.

ಇನ್ನು ಚಾಮರಾಜನಗರ, ಬಾಗಲಕೋಟೆ,ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆ ಪ್ರತಿಭಟನೆ ನಡೆಯುತ್ತಿದೆ. ಚಾಮರಾಜನಗರದಲ್ಲಿ ಡಿಸಿ ಕಚೇರಿ ಎದುರು ಪ್ರತಿಭಟನೆ ಸಂದರ್ಭದಲ್ಲಿ ಕಾರ್ಮಿಕರ ಪ್ರತಿಭಟನೆ ವೇಳೆ ಐವರು ಅಸ್ವಸ್ಥಗೊಂಡಿದ್ದಾರೆ, ಕುಸಿದು ಬಿದ್ದ ಅಂಗನವಾಡಿ ಕಾರ್ಯಕರ್ತೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲ್ಲಯ್ಯನಪುರದ ಗೌರಮ್ಮ, ಚಂದಕವಾಡಿಯ ಲಕ್ಷ್ಮಿ, ಕಮರವಾಡಿಯ ಸುಶೀಲಾ, ಚಾಮರಾಜನಗರ ಪದ್ಮಾ, ಸ್ವಸ್ಥಗೊಂಡ ಕಾರ್ಯಕರ್ತೆಯರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+