Pahalgam Terror Attack: ಉಗ್ರರ ದಾಳಿ; ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 23 : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು (ಬುಧವಾರ) ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಪಹಲ್ಗಮ್ ಉಗ್ರರ ಕೃತ್ಯ: ಜಮೀರ್ ಅಹಮದ್ ಖಾನ್ ಖಂಡನೆ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ವಾಗಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಮಂದಿ ಬಲಿಯಾಗಿರುವುದು ನೋವು ತಂದಿದೆ. ಅತೀವ ನೋವು ತಂದಿದೆ. ಪಹಲ್ಗಾಮ್ ಉಗ್ರರ ದಾಳಿ ಈ ಹಿಂದಿನ ಶಕ್ತಿಗಳನ್ನು ಭಾರತೀಯರೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಜಮ್ಮು- ಕಾಶ್ಮೀರ ದಲ್ಲಿ 370 ವಿಧಿ ರದ್ದು ಗೊಂಡ ನಂತರ ಶಾಂತಿ ನೆಲೆಸಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಚಾರದಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. ಕೃತ್ಯದಲ್ಲಿ ಬಲಿಯಾದವರ ಕುಟುಂಬ ಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ಪ್ರಾರ್ಥಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications