ಜಮೀರ್ ಅಹಮದ್ ವಿರುದ್ಧ ಲಹರಿ ವೇಲು ಬಿಜೆಪಿ ಅಭ್ಯರ್ಥಿ?
Recommended Video

ಬೆಂಗಳೂರು, ಅಕ್ಟೋಬರ್ 03 : 2018ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಮುಂದಾಗಿದೆ. ಇದರ ಭಾಗವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಲಹರಿ ವೇಲು ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ.
ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕರು ಜೆಡಿಎಸ್‌ನ ಜಮೀರ್ ಅಹಮದ್ ಖಾನ್. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಜಮೀರ್, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸಿದ್ಧತೆ ಆರಂಭಿಸಿದ್ದಾರೆ.
ಲಹರಿ ವೇಲು ಎಂದೇ ಖ್ಯಾತರಾಗಿರುವ ಲಹರಿ ಆಡಿಯೋ ಸಂಸ್ಥೆಯ ಮಾಲೀಕರಾದ ವೇಲು ಆಗಸ್ಟ್ 28ರಂದು ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಚಾಮರಾಜಪೇಟೆಯಲ್ಲಿ ಚಿರಪರಿಚಿತರಾಗಿರುವ ಲಹರಿ ವೇಲು ಅವರನ್ನು ಜಮೀರ್ ಅಹಮದ್ ಖಾನ್ ಎದುರು ಚುನಾವಣೆಗೆ ನಿಲ್ಲಿಸುವ ಬಗ್ಗೆ ಬಿಜೆಪಿ ವಯಲದಲ್ಲಿ ಚಿಂತನೆ ನಡೆದಿದೆ.
ಜಮೀರ್ ಅಹಮದ್ ಖಾನ್ ವಿರುದ್ಧ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ತಂತ್ರ ರೂಪಿಸಿದೆ. ಇಬ್ಬರು ಮುಸ್ಲಿಂ ಅಭ್ಯರ್ಥಿಗಳ ನಡುವೆ ಲಹರಿ ವೇಲು ಅವರನ್ನು ಕಣಕ್ಕಿಳಿಸಿದರೆ, ಮತ ವಿಭಜನೆಯಾಗಿ ಜಯಗಳಿಸಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ...

ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದ್ದಾರೆ
ಚಾಮರಾಜಪೇಟೆ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಬಾರಿಸಿರುವ ಜಮೀರ್ ಅಹಮದ್ ಖಾನ್ ಅವರನ್ನು ಈ ಬಾರಿ ಸೋಲಿಸಬೇಕು ಎಂಬುದು ಬಿಜೆಪಿಯ ಯೋಚನೆ. 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಮೀರ್ ಅಹಮದ್ 56,339 ಮತಗಳನ್ನು ಪಡೆದು ಜಯಗಳಿಸಿದ್ದರು.

1994ರ ನಂತರ ಗೆಲು ಕಂಡಿಲ್ಲ
ಚಾಮರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ 1994ರ ನಂತರ ಗೆಲುವು ಕಂಡಿಲ್ಲ. 2013ರ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವಿ.ಗಣೇಶ್ 17,720 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಈ ಬಾರಿ ಕ್ಷೇತ್ರದಲ್ಲಿ ಗೆಲ್ಲಲು ಪಕ್ಷ ತಂತ್ರ ರೂಪಿಸುತ್ತಿದೆ.

ಹೊಸ ಮುಖದಿಂದ ಗೆಲುವು ಸಾಧ್ಯ?
ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿರುವ ಜಮೀರ್ ಅಹಮದ್ ಖಾನ್ ಸೋಲಿಸಲು ಪ್ರಬಲ ಅಭ್ಯರ್ಥಿಯ ಅಗತ್ಯವಿದೆ. ಆದ್ದರಿಂದ, ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಆದ್ದರಿಂದ, ತಿಂಗಳ ಹಿಂದಷ್ಟೇ ಬಿಜೆಪಿ ಸೇರಿರುವ ಲಹರಿ ವೇಲು ಅವರಿಗೆ ಟಿಕೆಟ್ ನೀಡುವ ಆಲೋಚನೆ ಇದೆ.

ಆರ್‌ಎಸ್‌ಎಸ್ ಮುಖ್ಯಸ್ಥರ ಭೇಟಿ
ಆ.28ರಂದು ಬಿಜೆಪಿ ಸೇರಿರುವ ಲಹರಿ ವೇಲು ಅವರು ಪಕ್ಷದಲ್ಲಿ ಸಕ್ರಿಯವಾಗುತ್ತಿದ್ದಾರೆ. ಈಗಾಗಲೇ ನಾಗ್ಪುರಕ್ಕೆ ಭೇಟಿ ನೀಡಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಆದರೆ, ಲಹರಿ ವೇಲು ಅವರನ್ನು ಕಣಕ್ಕಿಳಿಸುವ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ.

ಜೆಡಿಎಸ್ ಅಭ್ಯರ್ಥಿ ಯಾರು?
ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಜಮೀರ್ ಸೋಲಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಂತ್ರ ರೂಪಿಸಿದ್ದಾರೆ. ಮುಸ್ಲಿಂ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ನೀಡಲು ಗೌಡರು ನಿರ್ಧರಿಸಿದ್ದಾರೆ. ಆದರೆ, ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications