ಕೆರೆ ಅಭಿವೃದ್ಧಿ ಪ್ರಾಧಿಕಾರದ ಗೆಜೆಟೆಡ್ ಆಫಿಸರ್ ಆತ್ಮಹತ್ಯೆ
ಬೆಂಗಳೂರು, ಫೆ. 4: ಕೆರೆ ಅಭಿವೃದ್ಧಿ ಪ್ರಾಧಿಕಾರದ ಮ್ಯಾನೇಜರ್ ವೀಣಾ ಹೆಗಡೆ ಸೀರೆಯಿಂದ ನೇಣುಬಿಗಿದುಕೊಂಡು ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನ ಸಂಗಂರಸ್ತೆಯ ಮನೆ ಆತ್ಮಹತ್ಯೆ ಮಮಾಡಿಕೊಂಡಿದ್ದಾರೆ.
ಸಂಗಂ ರಸ್ತೆಯ ಚೆಟ್ಟಿಗಾರ್ಡನ್‌ನಲ್ಲಿ ವಾಸಿಸುತ್ತಿದ್ದ ವೀಣಾ ಹೆಗಡೆ (48) ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗದ ಹಿನ್ನೆಲೆಯಲ್ಲಿ ರಾತ್ರಿ 12ರ ವೇಳೆ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ವಿಕ್ರಮ ಹೆಗಡೆ ಸೇರಿ ಮನೆಯವರೆಲ್ಲಾ ಮಲಗಿದ್ದಾಗ ವೀಣಾ ಅವರು ನೇಣುಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications