ಯುನೈಟೆಡ್ ಬೆಂಗಳೂರಿನಿಂದ ಶನಿವಾರ ಕೆರೆಗಳ ಪರಿಶೀಲನೆ
ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ ಕೆರೆಗಳ ಉಳಿವಿಗಾಗಿ ಹಾಗೂ ಅವುಗಳ ಸ್ವಚ್ಛತೆಗಾಗಿ ಉತ್ತಮ ಕೆಲಸ ಮಾಡುತ್ತಿರುವ ಯುನೈಟೆಡ್ ಬೆಂಗಳೂರು ಸಂಸ್ಥೆಯಿಂದ ಜೂನ್ ಹದಿನೇಳರ ಶನಿವಾರ ಕೂಡ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಕೆರೆಗಳನ್ನು ಉಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮಗಳ ಉದ್ದೇಶ ಕೆರೆಗಳ ಪರಿಶೀಲನೆ.
ಬೆಳಗ್ಗೆ ಹತ್ತು ಗಂಟೆಗೆ ಗುಬ್ಬಲಾಳ ಕೆರೆ, ಹನ್ನೊಂದು ಗಂಟೆಗೆ ತಲಘಟ್ಟಪುರ ಕೆರೆ ಹಾಗೂ ಮಧ್ಯಾಹ್ನ ಹನ್ನೆರಡಕ್ಕೆ ಸೋಮಪುರ ಕೆರೆಯ ಪರಿಶೀಲನೆ ನಡೆಸಲಾಗುತ್ತದೆ. ಶನಿವಾರದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರೆಲ್ಲ ಪಾಲ್ಗೊಳ್ಳಲು ಅವಕಾಶವಿದೆ. ಬೆಂಗಳೂರಿನ ಕೆರೆಗಳನ್ನು ಉಳಿಸಲು ನೀವೂ ಕೈ ಜೋಡಿಸಬಹುದು.

ಇತ್ತೀಚೆಗಷ್ಟೇ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹಲಗೆವಡೇರಹಳ್ಳಿ ಕೆರೆಯನ್ನು ಸ್ವಚ್ಛಗೊಳಿಸಿದ ಯುನೈಟೆಡ್ ಬೆಂಗಳೂರು ಸದಸ್ಯರು, ಅಲ್ಲಿ ಗಿಡಗಳನ್ನು ನೆಟ್ಟಿದ್ದರು. ಅಂದಿನ ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದರಾದ ಗಣೇಶ್, ಮಾಳವಿಕಾ ಅವಿನಾಶ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.












Click it and Unblock the Notifications