Get Updates
Get notified of breaking news, exclusive insights, and must-see stories!

Lalbagh Flower Show: ಫಲಪುಷ್ಪ ಪ್ರದರ್ಶನಕ್ಕೆ ಜನಸಾಗರ: ಎಷ್ಟು ಕೋಟಿ ರೂಪಾಯಿ ಮೌಲ್ಯದ ಟಿಕೆಟ್‌ ಮಾರಾಟ ತಿಳಿಯಿರಿ

ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನಕ್ಕೆ ಭಾರಿ ಜನಸ್ಪಂದನೆ ವ್ಯಕ್ತವಾಗಿದೆ. ಆಗಸ್ಟ್ 4ರಂದು 214ನೇ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 4 ರಂದು ಉದ್ಘಾಟಿಸಿದ್ದರು. ಆಗಸ್ಟ್ 15ರಂದು ಫಲಪುಷ್ಪ ಪ್ರದರ್ಶನ ಮುಕ್ತಾಯವಾಗಲಿದೆ.

ಇದುವರೆಗೂ ಈ ಫಲಪುಷ್ಪ ಪ್ರದರ್ಶನವನ್ನು 4 ಲಕ್ಷಕ್ಕೂ ಅಧಿಕ ಮಂದಿ ನೋಡಿದ್ದಾರೆ. ಬರಿ ಟಿಕೆಟ್ ಮಾರಾಟದಿಂದಲೆ ತೋಟಗಾರಿಕಾ ಇಲಾಖೆ 1.8 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಡಿಹೆಚ್ ವರದಿ ಮಾಡಿದೆ. ಫಲಪುಷ್ಪ ಪ್ರದರ್ಶನವು ಆಗಸ್ಟ್ 15ರಂದು ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರುತ್ತದೆ.

lalbagh-flower-shows-conclusion

ಲಾಲ್ ಬಾಗ್ ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಹಿರಿಯರಿಗೆ 70 ರೂ., ಮಕ್ಕಳಿಗೆ 30 ರೂ. ನಿಗದಿ ಮಾಡಲಾಗಿದೆ. ಗುರುತಿನ ಚೀಟಿ ಹೊಂದಿರುವ ವಿದ್ಯಾರ್ಥಿಗಳಿಗೆ ಫಲಪುಷ್ಪ ಪ್ರದರ್ಶನಕ್ಕೆ ಉಚಿತ ಪ್ರವೇಶ ನೀಡಲಾಗುವುದು. ಫಲಪುಷ್ಪ ಪ್ರದರ್ಶನಕ್ಕೆ ಭಾನುವಾರ 20,000 ವಿದ್ಯಾರ್ಥಿಗಳು ಸೇರಿದಂತೆ ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದರು.

ವಿಧಾನಸೌಧ ಪ್ರತಿಕೃತಿ

ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು ಕರ್ನಾಟಕದ ಎರಡನೇ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರಿಗೆ ಅರ್ಪಿಸಲಾಗಿದೆ. ವಿಧಾನಸೌಧದ 18 ಅಡಿ ಪ್ರತಿಕೃತಿ, 14 ಅಡಿಯ ಕೆಂಗಲ್ ಹನುಮಂತಯ್ಯ ಪ್ರತಿಮೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಆಕರ್ಷಣೆಯಾಗಿದೆ. 10 ಲಕ್ಷ ಹೂವುಗಳನ್ನು ಬಳಸಿ ವಿಧಾನಸೌಧ ಮತ್ತು ಶಿವಪುರ ಸತ್ಯಾಗ್ರಹ ಸೌಧದ ಪ್ರತಿಕೃತಿ ನಿರ್ಮಾಣ ಮಾಡಲಾಗಿದೆ.

ಲಾಲ್ ಬಾಗ್‌ನಲ್ಲಿ ವರ್ಷಕ್ಕೆ ಎರಡು ಬಾರಿ ಗಣರಾಜ್ಯ ಮತ್ತು ಸ್ವಾತಂತ್ರ್ಯ ದಿನದಂದು ಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತದೆ. ಪುಷ್ಪ ಪ್ರದರ್ಶನವು 200 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಎರಡನೇ ವಿಶ್ವಯುದ್ಧದ ಸಮಯದಲ್ಲಿ, ಕೋವಿಡ್‌-19 ಸಾಂಕ್ರಾಮಿಕ ಸಮಯದಲ್ಲಿ ಎರಡು ಮಾತ್ರ ಫಲಪುಷ್ಪ ಪ್ರದರ್ಶನ ಆಯೋಜಿಸಿಲ್ಲ.

ಆಗಸ್ಟ್ 15ರಂದು ಲಕ್ಷಾಂತರ ಜನ ಫಲಪುಷ್ಪ ವೀಕ್ಷಣೆಗೆ ಆಗಮಿಸುವ ನಿರೀಕ್ಷೆ ಮಾಡಲಾಗಿದೆ. ಇದಕ್ಕಾಗಿಯೇ ಬೆಳಗ್ಗೆ 7 ಗಂಟೆಯಿಂದ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಇನ್ನು ಸಂಚಾರ ದಟ್ಟಣೆ ತಪ್ಪಿಸುವ ದೃಷ್ಟಿಯಿಂದ ಫಲಪುಷ್ಪ ವೀಕ್ಷಣೆಗೆ ಬರುವವರಿಗೆ ಸಾರ್ವಜನಿಕ ಸಾರಿಗೆ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಪಾರ್ಕಿಂಗ್‌ ಬಗ್ಗೆ ಮಾಹಿತಿ

ಲಾಲ್‌ಬಾಗ್‌ನ ಪಶ್ಚಿಮ ಗೇಟ್, ಈಸ್ಟ್ ಗೇಟ್ ಮತ್ತು ಸೌತ್ ಎಂಡ್ ಸರ್ಕಲ್‌ನಿಂದ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ, ಜೆಸಿ ರಸ್ತೆ ಬಿಬಿಎಂಪಿ ಸಂಕೀರ್ಣ ಮತ್ತು ಲಾಲ್ ಬಾಗ್ ರಸ್ತೆಯ ಅಲ್ ಅಮೀನ್ ಕಾಲೇಜಿನಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+