ಸ್ವಾತಂತ್ರೋತ್ಸವ; ಲಾಲ್ ಬಾಗ್ ಫ್ಲವರ್ ಶೋ ರದ್ದು
ಬೆಂಗಳೂರು, ಜುಲೈ 06 : ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ಆಯೋಜನೆ ಮಾಡಲಾಗುತ್ತಿದ್ದ ಸ್ವಾತಂತ್ರೋತ್ಸವ ಫ್ಲವರ್ ಶೋ ಈ ಬಾರಿ ರದ್ದಾಗಿದೆ. ಲಾಲ್ ಬಾಗ್ ಫ್ಲವರ್ ಶೋಗೆ ಲಕ್ಷಾಂತರ ಜನರು ಆಗಮಿಸುತ್ತಿದ್ದರು. ಈ ಬಾರಿ ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ.
Recommended Video
ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ತೋಟಗಾರಿಕಾ ಸಂಘದ ಸಹಯೋಗದಲ್ಲಿ ಪ್ರತಿ ವರ್ಷ ಲಾಲ್ ಬಾಗ್‌ನಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗುತ್ತಿತ್ತು. ಆಗಸ್ಟ್ 9ರಿಂದ ಈ ಬಾರಿಯ ಫ್ಲವರ್ ಶೋ ಆಯೋಜಿಸಲು ದಿನಾಂಕ ನಿಗದಿಯಾಗಿತ್ತು.
ಲಾಲ್ ಬಾಗ್‌ನಲ್ಲಿ ನಡೆಯಬೇಕಿದ್ದ 212ನೇ ಫ್ಲವರ್ ಶೋ ರದ್ದುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೈಸೂರು ತೋಟಗಾರಿಕಾ ಸಂಘ ಹೇಳಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ನಡೆಯುವ ಫ್ಲವರ್ ಶೋ ಲಕ್ಷಾಂತರ ಜನರನ್ನು ಸೆಳೆಯುತ್ತಿತ್ತು.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನ ವೈರಸ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ಕೇಂದ್ರ ಗೃಹ ಇಲಾಖೆ ಹೆಚ್ಚು ಜನರು ಸೇರುವ ಯಾವುದೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಇನ್ನೂ ಅನುಮತಿ ನೀಡಿಲ್ಲ. ಆದ್ದರಿಂದ, ಫ್ಲವರ್ ಶೋ ರದ್ದಾಗಿದೆ.

ಫ್ಲವರ್ ಶೋ ರದ್ದು
"ಕೋವಿಡ್ - 19 ಭೀತಿ ಹಿನ್ನಲೆಯಲ್ಲಿ ಈ ಬಾರಿಯ ಫ್ಲವರ್ ಶೋ ರದ್ದುಗೊಳಿಸಲಾಗಿದೆ. ಮೈಸೂರು ತೋಟಗಾರಿಕಾ ಸಂಘದ ಜೊತೆ ಈ ಕುರಿತು ನಾವು ಸಭೆ ನಡೆಸಲಿದ್ದೇವೆ. ಸಂಘದ ಹಲವು ಸದಸ್ಯರು ಹಿರಿಯ ನಾಗರಿಕರು. ಕೊರೊನಾ ಭೀತಿಯಿಂದ ಅವರು ಸಭೆಗೆ ಹಾಜರಾಗುತ್ತಿಲ್ಲ. ಆದ್ದರಿಂದ, ಸಭೆ ನಡೆಸುವುದು ತಡವಾಗುತ್ತಿದೆ" ಎಂದು ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಡಾ. ಎಂ. ಜಗದೀಶ್ ಹೇಳಿದ್ದಾರೆ.

50 ರಿಂದ 60 ಸಾವಿರ ಜನರ ಭೇಟಿ
ಲಾಲ್ ಬಾಗ್ ಫ್ಲವರ್ ಶೋಗೆ ಪ್ರತಿದಿನ ಸುಮಾರು 50 ರಿಂದ 60 ಸಾವಿರ ಜನರು ಆಗಮಿಸುತ್ತಾರೆ. ರಜೆ ದಿನಗಳಲ್ಲಿ ಈ ಸಂಖ್ಯೆ ಇನ್ನು ಹೆಚ್ಚಾಗುತ್ತದೆ. ಆದ್ದರಿಂದ, ಕೋವಿಡ್ - 19 ಪರಿಸ್ಥಿತಿ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಷ್ಟವಾಗಿದೆ. ಹಾಗಾಗಿ ಫ್ಲವರ್ ಶೋ ಈ ಬಾರಿ ರದ್ದುಗೊಳಿಸಲಾಗಿದೆ.

2ನೇ ಬಾರಿ ರದ್ದಾಗಿದೆ
1912ರಿಂದ ಫ್ಲವರ್ ಶೋ ಆಯೋಜನೆ ಮಾಡಲಾಗುತ್ತಿದೆ. ಇದು 2ನೇ ಬಾರಿಗೆ ಶೋ ರದ್ದುಗೊಳಿಸಲಾಗಿದೆ. 1942ರಲ್ಲಿ 2ನೇ ಮಹಾಯುದ್ಧದ ಸಂದರ್ಭದಲ್ಲಿ ಫ್ಲವರ್ ಶೋ ಆಯೋಜನೆ ಮಾಡಿರಲಿಲ್ಲ. ವರನಟ ಡಾ. ರಾಜ್ ಕುಮಾರ್ ಅಪಹರಣವಾದಾಗ ಯಾವುದೇ ಶುಲ್ಕ ಪಡೆಯದೇ ಜನರು ಫ್ಲವರ್ ಶೋ ವೀಕ್ಷಣೆ ಮಾಡಲು ಅವಕಾಶ ನೀಡಲಾಗಿತ್ತು.

ಎರಡು ಬಾರಿ ಫ್ಲವರ್ ಶೋ
2019ರ ಆಗಸ್ಟ್‌ನಲ್ಲಿ ಜಯಚಾಮರಾಜೇಂದ್ರ ವಡೆಯರ್‌ಗೆ ನಮನ ಎಂಬ ಶೀರ್ಷಿಕೆಯಡಿ ಗಣರಾಜ್ಯೋತ್ಸವ ಆಯೋಜನೆ ಮಾಡಲಾಗಿತ್ತು. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರಿಗೆ ನಮನ ಎಂಬ ಶೀರ್ಷಿಕೆಯಲ್ಲಿ ಫ್ಲವರ್ ಶೋ ನಡೆಸಲಾಗಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications