ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ; ವಾಹನ ಸಂಚಾರ ಮಾರ್ಗ ಬದಲು
ಬೆಂಗಳೂರು, ಜನವರಿ 17: ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕಾ ಇಲಾಖೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ 2024 ಆಯೋಜಿಸಿದೆ. ಜನವರಿ 18 ರಿಂದ 28ರ ತನಕ ಈ ಪ್ರದರ್ಶನ ನಡೆಯಲಿದೆ.
ಜನವರಿ 18ರ ಗುರುವಾರ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024ನೇ ಸಾಲಿನ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ. ಒಟ್ಟು 11 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಲಕ್ಷಾಂತರ ಜನರು ವೀಕ್ಷಣೆಗೆ ಆಗಮಿಸಲಿದ್ದಾರೆ.

215ನೇ ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡಲು ಸುಮಾರು 8 ರಿಂದ 10 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಬೆಂಗಳೂರು ಪೊಲೀಸರು ಅಂದಾಜಿಸಿದ್ದಾರೆ. ಗಣ್ಯರು, ವಿದೇಶಿ ಪ್ರೇಕ್ಷಕರು, ಶಾಲಾ ಮಕ್ಕಳು ಆಗಮಿಸುವುದರಿಂದ ಸಂಚಾರಿ ಪೊಲೀಸರು ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ.
ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು
* ಡಾ: ಮರಿಗೌಡ ರಸ್ತೆ : ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
* ಕೆ. ಹೆಚ್. ರಸ್ತೆ: ಕೆ. ಹೆಚ್. ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
* ಲಾಲ್‌ಬಾಗ್ ರಸ್ತೆ: ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ ಎರಡು ರಸ್ತೆಯ ಬದಿಗಳಲ್ಲಿ
* ಸಿದ್ದಯ್ಯ ರಸ್ತೆ: ಊರ್ವಶಿ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ ಎರಡು ರಸ್ತೆಯ ಬದಿಗಳಲ್ಲಿ
* ಐ.ಟಿ.ಎಸ್. ರಸ್ತೆ : ಬಿಎಂಟಿಸಿ ಜಂಕ್ಷನ್‌ನಿಂದ ಪೋಸ್ಟ್ ಆಫೀಸ್ ಕಡೆಗೆ ರಸ್ತೆಯ ಎರಡೂ ಬದಿಗಳಲ್ಲಿ
* ಟಿ.ಮರಿಯಪ್ಪ ರಸ್ತೆ: ಸಿದ್ದಾಪುರ ಜಂಕ್ಷನ್‌ನಿಂದ ಅಶೋಕ ಪಿಲ್ಲರ್, ಆರ್.ವಿ. ಟೀಚರ್ಸ್ ಕಾಲೇಜ್ ರಸ್ತೆಯ ಎರಡೂ ಬದಿಗಳಲ್ಲಿ.
ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು
* ಡಾ: ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
* ಕೆ.ಹೆಚ್.ರಸ್ತೆ: ಶಾಂತಿನಗರ, ಬಿ.ಎಂ.ಟಿ.ಸಿ. ಡಿಪೋ ಮೇಲೆ ನಾಲ್ಕು ಚಕ್ರ ಮತ್ತು ದ್ವಿಚಕ್ರ
ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
* ಡಾ.ಮರೀಗೌಡ ರಸ್ತೆ; ಹಾಪ್‌ಕಾಮ್ಸ್ ಇಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
* ಜೆ. ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ: ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಡಾ. ಮರೀಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆಹೆಚ್ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಸಾರ್ವಜನಿಕ ಸಮೂಹ ಸಾರಿಗೆ ವಾಹನಗಳಾದ ಬಿಎಂಟಿಸಿ ಬಸ್‌ಗಳು, ಮೆಟ್ರೋ, ಕ್ಯಾಬ್‌ಗಳ ಮುಖಾಂತರ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬರಲು ಪೊಲೀಸರು ಮನವಿ ಮಾಡಿದ್ದಾರೆ.
2.85 ಕೋಟಿ ರೂ. ವೆಚ್ಚದಲ್ಲಿ ಒಟ್ಟು 32 ಲಕ್ಷ ಹೂಗಳನ್ನು ಬಳಕೆ ಮಾಡಿಕೊಂಡು 215ನೇ ಫಲಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6.30ರ ತನಕ ಜನರು ಭೇಟಿ ನೀಡಿ, ಪ್ರದರ್ಶನವನ್ನು ವೀಕ್ಷಣೆ ಮಾಡಬಹುದು. ಲಾಲ್‌ಬಾಗ್ 4 ಗೇಟ್‌ಗಳಲ್ಲಿಯೂ ಪ್ರವೇಶ ಶುಲ್ಕವನ್ನು ನೀಡಿ ಟಿಕೆಟ್ ಪಡೆಯಬಹುದು. ತೋಟಗಾರಿಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಸಹ ಟಿಕೆಟ್ ಲಭ್ಯವಿದೆ.
ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಮವಸ್ತ್ರ ಧರಿಸಿ ಬರುವ 10ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ. ಉಳಿದಂತೆ ವಯಸ್ಕರಿಗೆ 80, ಮಕ್ಕಳಿಗೆ (12 ವರ್ಷದೊಳಗೆ) 30 ರೂ. ಶುಲ್ಕವಿದೆ. ರಜಾ ದಿನಗಳಲ್ಲಿ ಪ್ರವೇಶ ಶುಲ್ಕ 100 ರೂ.ಗಳು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications