ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ಗಾಗಿ ಮನವಿ

|
Google Oneindia Kannada News

ಬೆಂಗಳೂರು, ಮೇ 13: ಲಂಬಾಣಿ (ಬಂಜಾರ) ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಮನವಿ ಮಾಡಲಾಗಿದೆ. ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದ ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ಬಹಳ ತೊಂದರೆಯಾಗಿದ್ದು, ಸರ್ಕಾರ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ತಿಳಿಸಲಾಗಿದೆ.

ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ಗಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯರಿಗೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಕೋವಿಡ್-19 ಅನುದಾನದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಲು ಸರ್ಕಾರದ ಮೇಲೆ ಒತ್ತಡ ಹಾಕಲು ಕೇಳಿಕೊಂಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡೆ ವಿರುದ್ಧ ಗುಟುರು ಹಾಕಿದ ಸಿದ್ದರಾಮಯ್ಯ!ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡೆ ವಿರುದ್ಧ ಗುಟುರು ಹಾಕಿದ ಸಿದ್ದರಾಮಯ್ಯ!

ಬೆಂಗಳೂರಿನ ನಿವಾಸದಲ್ಲಿ ಇಂದು ಸಿದ್ಧರಾಮಯ್ಯಯನ್ನು ಸಮುದಾಯದ ಮುಖಂಡರು ಭೇಟಿ ಮಾಡಿದ್ದಾರೆ. ಶಾಸಕರಾದ ಪರಮೇಶ್ವರ ನಾಯಕ, ಪ್ರಕಾಶ್ ರಾಥೋಡ್, ಮಾಜಿ ಸಚಿವರಾದ ಶಿವಮೂರ್ತಿ ನಾಯಕ್, ಕಾಂತಾ ನಾಯಕ್ ಈ ವೇಳೆ ಹಾಜರಿದ್ದರು.

Lambani Community Leaders Requested For Special Covid 19 Package

ಸರ್ಕಾರ ಕೊರೊನಾ ಲಾಕ್‌ಡೌನ್‌ನಿಂದ ತೊಂದರೆಯಾದ ವಲಸೆ ಕಾರ್ಮಿಕರಿಗೆ ಸ್ಪಂದಿಸಿದೆ. ಅವರಿಗೆ ಹಣಕಾಸಿನ ನೆರವು ನೀಡುತ್ತಿದೆ. ಆದರೆ, ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕೆಂದು ಆಗ್ರಹಿಸಲಾಗಿದೆ.

Lambani Community Leaders Requested For Special Covid 19 Package

ಸರ್ಕಾರದ ಮೇಲೆ ಒತ್ತಡ ಹೇರಿ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಸಬೇಕೆಂದು, ಸಮುದಾಯದ ಮುಖಂಡರು ಸಿದ್ದರಾಮಯ್ಯ ಮೊರೆ ಹೋಗಿದ್ದಾರೆ.

English summary
Lambani community leaders requested to Siddaramaiah for special covid 19 package for their community migrant workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X