ಬೆಂಗಳೂರು ಉಪನಗರ ಯೋಜನೆಗೆ ಭೂಸ್ವಾಧೀನ: ಭೂಮಾಲೀಕರಿಗೆ 4ರಿಂದ 6 ಕೋಟಿ ನಿರೀಕ್ಷೆ!
ಬೆಂಗಳೂರಿನ ಮೇಲೆ ಆಗುತ್ತಿರುವ ಒತ್ತಡವನ್ನು ತಪ್ಪಿಸುವ ಉದ್ದೇಶದಿಂದ ಬಿಡದಿ ಟೌನ್‌ಶಿಪ್ ನಿರ್ಮಾಣ ಮಾಡುವುದಕ್ಕೆ / ಬೆಂಗಳೂರಿನ ಸಮೀಪದಲ್ಲೇ ಉಪ ನಗರಗಳನ್ನು ಅಭಿವೃದ್ಧಿ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಬಿಡದಿ ಟೌನ್‌ಶಿಪ್ ನಿರ್ಮಾಣವಾಗಲಿರುವ ಪ್ರದೇಶಗಳಲ್ಲಿ ಭೂಮಿಗೆ ಎಷ್ಟು ಕೋಟಿ ಬರಲಿದೆ ಎನ್ನುವ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಚುರುಕು ಪಡೆದುಕೊಂಡಿದ್ದು ಇಲ್ಲಿ ಭೂಮಿ ಇರುವವರಿಗೆ ಎಷ್ಟು ಕೋಟಿ ಸಿಗಲಿದೆ ಎನ್ನುವ ಲೆಕ್ಕಾಚಾರ ಜೋರಾಗಿದೆ.
ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಮಂಚೆ ಈ ಭಾಗದಲ್ಲಿ ಭೂಮಿ ಇರುವವರಿಗೆ 4ರಿಂದ 6 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎನ್ನುವ ವಿಚಾರವೂ ಭಾರೀ ಚರ್ಚೆಯಾಗುತ್ತಿದೆ. ಈ ಭಾಗದಲ್ಲಿ ಮಧ್ಯವರ್ತಿಗಳು ಹಾಗೂ ದಲ್ಲಾಳಿಗಳು ಜನರಲ್ಲಿ ಗೊಂದಲದ ವಾತಾವರಣವನ್ನು ನಿರ್ಮಿಸುತ್ತಿದ್ದು. ಇದರಿಂದ ಈ ಭಾಗದಲ್ಲಿ ಭೂಮಿ ಹೊಂದಿರುವವರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಬೆಂಗಳೂರಿಗೆ ಪರ್ಯಾಯವಾಗಿ 9 ಉಪ ನಗರಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಇದರ ಭಾಗವಾಗಿ ಇದೀಗ ಭೂಸ್ವಾಧೀನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಇನ್ನು ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ 10 ಗ್ರಾಮಗಳು ಸೇರಿದಂತೆ ಒಟ್ಟು 9,178.29 ಎಕರೆ ಪ್ರದೇಶದಲ್ಲಿ ಬಿಡದಿ ಉಪನಗರವನ್ನು ನಿರ್ಮಿಸುವುದಕ್ಕೆ ಪ್ರಾಯೋಗಿಕವಾಗಿ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದಕ್ಕೆ 2007ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಇದು ನಡೆದಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ.
ಇದೀಗ ಈ ಯೋಜನೆಯನ್ನು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದ ಬಿಡದಿಯಲ್ಲಿ ಉಪನಗರ ನಿರ್ಮಾಣ ಆಗುವುದರಿಂದ ಬೆಂಗಳೂರು ವಿಸ್ತರಣೆ ಹಾಗೂ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎನ್ನುವ ಲೆಕ್ಕಾಚಾರ ಇದೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ಯೋಜನೆಗೆ ಜಮೀನುಗಳನ್ನು ಭೂಸ್ವಾಧೀನ ಪಡೆಸಿಕೊಳ್ಳಲು ಸಿದ್ಧತೆಗಳು ನಡೆದಿವೆ. ಇದೀಗ ಈ ಭಾಗದಲ್ಲಿ ಒಂದು ಎಕರೆ ಭೂಮಿಗೆ 4ರಿಂದ 6 ಕೋಟಿ ರೂಪಾಯಿ ಕೊಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ಇನ್ನು ಮಂಜೂರಾತಿ ಜಮೀನುಗಳ ಎಸ್‌ಆರ್ ಬೆಲೆಯು ಕೇವಲ 25 ರಿಂದ 30 ಲಕ್ಷ ರೂಪಾಯಿ ಇದೆ. ಇದು ಸಾಕಾಗುವುದಿಲ್ಲ. ಈ ಭಾಗದಲ್ಲಿ ಬಡವರು ಹಾಗೂ ಹಿಂದೂಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಭೂಸ್ವಾಧೀನಕ್ಕೆ ಹೆಚ್ಚು ಹಣ ಕೊಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
ಯಾವ ಭಾಗದಲ್ಲಿ ಭೂಸ್ವಾಧೀನ ?
ಬನ್ನಿಗಿರಿ, ಕೆಂಪಯ್ಯನಪಾಳ್ಯ, ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಮಂಡಲಹಳ್ಳಿ, ಭೈರಮಂಗಲ, ಹೊಸೂರು, ಹಾರೋಹಳ್ಳಿ ತಾಲ್ಲೂಕಿನ ವಡೇರಹಳ್ಳಿ ಸೇರಿದಂತೆ ವಿವಿಧ ಭಾಗದಲ್ಲಿ ಭೂಸ್ವಾಧೀನ ನಡೆಯಲಿದೆ ಎಂದು ಹೇಳಲಾಗಿದೆ.












Click it and Unblock the Notifications