ಲ್ಯಾಂಡ್ ಜಿಹಾದ್: ಪಶುಸಂಗೋಪನೆ ಎಕರೆ 2 ಜಾಗ ಮುಸ್ಲಿಮರಿಗೆ ಮಂಜೂರು: ಬಿಜೆಪಿ ಆಕ್ರೋಶ
ಬೆಂಗಳೂರು, ಫೆಬ್ರವರಿ 29: ಕಾಂಗ್ರೆಸ್ ಸರ್ಕಾರದ 'ಲ್ಯಾಂಡ್ ಜಿಹಾದ್' ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಗುರುವಾರ ಟ್ವೀಟ್ ಮಾಡಿರುವ ಆರ್.ಅಶೋಕ್ ಅವರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ? ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನು ಮುಚ್ಚಿಸಿ ಅದನ್ನ ಮುಸ್ಲಿಂರಿಗೆ ಕೊಡುವ ಅನಿವಾರ್ಯತೆ ಆದರೂ ಏನಿತ್ತು? ಎಂದು ಅವರು ಕಿಡಿ ಕಾರಿದ್ದಾರೆ.

ಆ ಪಶು ಚಿಕಿತ್ಸಾಲಯವನ್ನು ಜಾನುವಾರುಗಳಿಗೆ ಮಾತ್ರ ಆ ಚಿಕಿತ್ಸಾಲಯ ಸ್ಥಾಪಿಸಿಲ್ಲ. ಇತರೆ ಸಾಕು ಪ್ರಾಣಿಗಳ ಚಿಕಿತ್ಸೆಗೂ ಸ್ಥಾಪಿಸಲಾಗಿದೆ. ನಗರದ ಹೃದಯಭಾಗದಲ್ಲಿರುವ 500 ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ಹಸ್ತಾಂತರ ಮಾಡಲು ನಾವು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರದ 'ಲ್ಯಾಂಡ್ ಜಿಹಾದ್' ಎಂದು ಕರೆಯಬಹುದೇ? ಎಂದು ಅವರು ಕುಟುಕಿದ್ದಾರೆ.
ಸರ್ಕಾರದ ಆದೇಶದಲ್ಲಿ ಏನಿದೆ?
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೂಲಕ 126 ವಸತಿ ಶಾಲೆಗಳು, 314 ವಿದ್ಯಾರ್ಥಿ ನಿಲಯಗಳು 200 ಮೌಲಾನಾ ಆಜಾದ್ ಮಾದರಿ ಶಾಲೆಗಳು, 101 ವಸತಿ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ.
ನಗರದಲ್ಲಿ ಜಾನುವಾರುಗಳ ಸಾಕಣೆ ಕಡಿಮೆ
ವಸತಿ, ವಕ್ಫ್ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಟಿಪ್ಪಣಿಯಲ್ಲಿ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚಲುವಾಧಿಪಾಳ್ಯ ವಾರ್ಡ್, ಮೈಸೂರು ರಸ್ತೆ ಹಾಗೂ ಗೂಡ್‌ಶೆಡ್ ರಸ್ತೆ ಹೊಂದಿಕೊಂಡಂತೆ ಪಶುಸಂಗೋಪನಾ ಇಲಾಖೆಯ ಪಶು ಚಿಕಿತ್ಸಾಲಯ ಇದೆ. ಬೆಂಗಳೂರು ನಗರ ಪ್ರದೇಶದಲ್ಲಿ ಜಾನುವಾರುಗಳ ಸಾಕಣೆ ಕಡಿಮೆ ಇವೆ ಎಂದು ಸರ್ಕಾರ ತಿಳಿಸಿದೆ.

ಹೀಗಾಗಿ ಬೆಂಗಳೂರು ಕೇಂದ್ರ ಭಾಗದಲ್ಲಿರುವ ಪಶು ಚಿಕಿತ್ಸಾಲಯವು ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದಾಗಿದೆ. ಆದುದ್ದರಿಂದ ಪಶುಚಿಕಿತ್ಸಾಲಯವನ್ನು ಬೆಂಗಳೂರು ಹೊರ ವಲಯಕ್ಕೆ ಸ್ಥಳಾಂತರಿಸಿ, ಸದರಿ ಸ್ಥಳದಲ್ಲಿ ಅಲ್ಪಸಂಖ್ಯಾತರ ಮಕ್ಕಳ ಶೈಕ್ಷಣಿಕ ಉದ್ದೇಶಕ್ಕೆ ಬಳಸಿಕೊಳ್ಳಲು ಸೂಚಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್
— R. Ashoka (ಆರ್. ಅಶೋಕ) (@RAshokaBJP) February 29, 2024
ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ @siddaramaiah ನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ?
ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನ… pic.twitter.com/r8G4sph0Qa
ಜಾಗಕ್ಕೆ ಬೇಡಿಕೆ ಇದೆ: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಒಂದು ಲಕ್ಷದ ಇಪ್ಪತೈದು ಸಾವಿರ ಅಲ್ಪಸಂಖ್ಯಾತರ ಜನಸಂಖ್ಯೆ ಹೊಂದಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆ/ಮೊರಾರ್ಜಿ ದೇಸಾಯಿ ವಸತಿ ಶಾಲೆ/ವಿದ್ಯಾರ್ಥಿ ನಿಲಯಗಳು ಇರುವುದಿಲ್ಲ. ಸದರಿ ಪ್ರದೇಶದಲ್ಲಿ ಜೈನ ವಿಶ್ವವಿದ್ಯಾಲಯ, ಬೆಂಗಳೂರು ವೈದ್ಯಕೀಯ ಕಾಲೇಜು ಇನ್ನೂ ಹಲವಾರು ಶೈಕ್ಷಣಿಕ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ.
ಹೀಗಾಗಿ ವಿದ್ಯಾರ್ಥಿ ನಿಲಯಗಳ ಹೆಚ್ಚಿನ ಬೇಡಿಕೆ ಇರುತ್ತದೆ. ಅಲ್ಪಸಂಖ್ಯಾತರ ಸಮುದಾಯದ ಹೆಚ್ಚಿನ ಜನರು ವಾಸಿಸುತ್ತಿರುವ ಕಾರಣ ಮೌಲಾನಾ ಆಜಾದ್/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬೇಡಿಕೆಯು ಹೆಚ್ಚಾಗಿರುತ್ತದೆ.
ಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಜಾಗ ಮಂಜೂರು
ಈ ಮೇಲಿನ ಎಲ್ಲಾ ಕಾರಣಗಳು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಚಾಮರಾಜಪೇಟೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಚಲವಾಧಿಪಾಳ್ಯ ವಾರ್ಡ್, ಮೈಸೂರು ರಸ್ತೆ ಹಾಗೂ ಗೂಡ್‌ಶೆಡ್ ರಸ್ತೆಗೆ ಹೊಂದಿಕೊಂಡಂತೆ ಪಶುಸಂಗೋಪನಾ ಇಲಾಖೆಯ ಪಶುಚಿಕಿತ್ಸಾಲಯಕ್ಕೆ ಸೇರಿದ 2-00 ಎಕರೆ ಜಾಗವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮಂಜೂರು ಮಾಡಲು ಕೋರಿದ್ದಾರೆ.
ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆಗೆ ಸರ್ಕಾರ ಆದೇಶಿಸಿದೆ. ಈ ಮೂಲಕ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದೆ ಎಂದು ಆರ್.ಅಶೋಕ್ ಅವರು ನಡವಳಿ ಪತ್ರ ಪೋಸ್ಟ್ ಮಾಡಿ ಸರ್ಕಾರದ ನಡೆ ಖಂಡಿಸಿದರು.












Click it and Unblock the Notifications