ಬೆಂಗಳೂರಿನ ಈ ಆಸ್ತಿದಾರರಿಗೆ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ!
ಬೆಂಗಳೂರಿನ ವಿವಿಧ ಭಾಗದ ಆಸ್ತಿದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈಗಾಗಲೇ ಒಂದು ಶಾಕ್ ಕೊಟ್ಟಿದೆ. ಬೆಂಗಳೂರಿನಲ್ಲಿ ಕೆಲವು ಆಸ್ತಿದಾರರು ಸಾವಿರಾರು ಕೋಟಿ ರೂಪಾಯಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಈ ರೀತಿ ಆಸ್ತಿ ಬಾಕಿ ಉಳಿಸಿಕೊಂಡಿರುವವರು ಇನ್ನು ಎರಡು ದಿನದ ಒಳಗಾಗಿ ಆಸ್ತಿ ತೆರಿಗೆಯನ್ನು ಪಾವತಿ ಮಾಡದೆ ಇದ್ದರೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳಲಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. ಅದೇನು ಎನ್ನುವ ವಿವರ ನೋಡೋಣ...
ಬಿಬಿಎಂಪಿಗೆ ಕೋಟ್ಯಾಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿದಿದೆ. ಆದರೆ ಹಲವು ಆಸ್ತಿದಾರರು ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡದೆ ಇರುವುದರಿಂದ ಬಿಬಿಎಂಪಿಗೆ ಆದಾಯ ಕೊರತೆ ಹಾಗೂ ಆದಾಯ ಬರುವುದು ಕಡಿಮೆಯಾಗುತ್ತಿದೆ. ಇದೀಗ ಇದನ್ನು ತಪ್ಪಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವೊಂದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈಚೆಗೆ ಬೆಂಗಳೂರಿನ 600ಕ್ಕೂ ಹೆಚ್ಚು ಆಸ್ತಿಗಳನ್ನು ಹರಾಜು ಹಾಕುವುದಾಗಿ ಬಿಬಿಎಂಪಿ ಹೇಳಿತ್ತು. ಇದೀಗ ಈ ಆಸ್ತಿದಾರರಿಗೆ ನೀಡಿದ್ದ ಗಡುವು ಮುಕ್ತಾಯವಾಗುವುದಕ್ಕೆ ಬಂದಿದ್ದು. ಆಸ್ತಿ ಪಾವತಿ ಮಾಡದೆ ಇರುವವರು ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ. ಬೆಂಗಳೂರಿನ ಈ ಭಾಗದ ಆಸ್ತಿಗಳ ಹರಾಜಿಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿವೆ.

ಬಿಬಿಎಂಪಿಗೆ ಹೆಚ್ಚು ಆದಾಯ ಹರಿದು ಬರುವುದೇ ಕೆಲವು ನಿರ್ದಿಷ್ಟ ವಲಯಗಳಿಂದ ಅದರಲ್ಲೂ ಆಸ್ತಿ ತೆರಿಗೆಯಿಂದ ಕೋಟ್ಯಾಂತರ ರೂಪಾಯಿ ಹರಿದು ಬರುತ್ತದೆ. ಆದರೆ ಕಳೆದ ಹಲವು ವರ್ಷಗಳಿಂದ ಕೆಲವರು ಆಸ್ತಿ ತೆರಿಗೆಯನ್ನೇ ಪಾವತಿ ಮಾಡಿಲ್ಲ. ಈ ರೀತಿ ದೀರ್ಘಕಾಲದ ಆಸ್ತಿ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ಕೊಡಲಾಗಿತ್ತು. ಇದೀಗ ಈ ಆಸ್ತಿಗಳ ಹರಾಜು ಪ್ರಕ್ರಿಯೆಯನ್ನು ಫೆಬ್ರವರಿ 13ರಿಂದ ಶುರು ಮಾಡುವುದಾಗಿ ಬಿಬಿಎಂಪಿ ಹೇಳಿತ್ತು. ಇದಕ್ಕೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ.
ಕೊನೆಯ ಎಚ್ಚರಿಕೆ: ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 608 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡುವುದಕ್ಕೆ ನಿರ್ಧರಿಸಿದೆ. ಇದರ ಪ್ರಕ್ರಿಯೆಗೆ ಕೊನೆಯ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನು ಎರಡು ದಿನಗಳ ಒಳಗಾಗಿ ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡದೆ ಇದ್ದರೆ ಆಸ್ತಿಯನ್ನು ಹರಾಜು ಹಾಕುವುದಾಗಿ ಬಿಬಿಎಂಪಿಯು ಕೊನೆಯ ಎಚ್ಚರಿಕೆಯನ್ನು ಕೊಟ್ಟಿದೆ.
ವಲಯ - ಹರಾಜು ಆಸ್ತಿಗಳ ಸಂಖ್ಯೆ
1. ಪೂರ್ವ ವಲಯ - 118
2. ಪಶ್ಚಿಮ ವಲಯ - 120
3. ದಕ್ಷಿಣ ವಲಯ - 109
4. ಮಹದೇವಪುರ ವಲಯ - 60
5. ಬೊಮ್ಮನಹಳ್ಳಿ ವಲಯ - 70
6. ಯಲಹಂಕ ವಲಯ - 40
7. ಆರ್.ಆರ್ ನಗರ ವಲಯ - 50
8. ದಾಸರಹಳ್ಳಿ ವಲಯ - 41
ಒಟ್ಟು: 608
ಯಾವ ವಲಯದಲ್ಲಿ ಯಾವಾಗ ಹರಾಜು ಪ್ರಕ್ರಿಯೆ ಶುರು
* ಪೂರ್ವ ವಲಯ 13ನೇ ಫೆಬ್ರವರಿ
* ಪಶ್ಚಿಮ ವಲಯ 13ನೇ ಫೆಬ್ರವರಿ
* ದಕ್ಷಿಣ ವಲಯ 14ನೇ ಫೆಬ್ರವರಿ
* ಮಹದೇವಪುರ ವಲಯ 13ನೇ ಫೆಬ್ರವರಿ
* ಬೊಮ್ಮನಹಳ್ಳಿ ವಲಯ 14ನೇ ಫೆಬ್ರವರಿ
* ಯಲಹಂಕ ವಲಯ 13ನೇ ಫೆಬ್ರವರಿ
ಹಾಗೂ ದಾಸರಹಳ್ಳಿ ವಲಯದಲ್ಲಿ 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications