ಬೆಂಗಳೂರಿನ ಪಿ.ಜಿಗಳಿಗೆ ಲಾಸ್ಟ್ ವಾರ್ನಿಂಗ್: ಇಂದಿನಿಂದ ಜಿಬಿಎ ವಿಶೇಷ ಅಭಿಯಾನ
ಬೆಂಗಳೂರಿನ ಕೆಲವು ಪಿಜಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವ ಕೆಲವು ಅಪರಾಧ ಪ್ರಕರಣಗಳನ್ನು ಬೆಂಗಳೂರು ಪೊಲೀಸರು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಬೆಂಗಳೂರಿನ ಪಿಜಿಗಳಿಗೆ ಕೆಲವೊಂದು ಕಠಿಣ ನಿಯಮಗಳನ್ನು ರೂಪಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘನೆ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿಯೂ ಎಚ್ಚರಿಕೆ ನೀಡಲಾಗಿದೆ. ಇದೀಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮುಂದಾಗಿದ್ದಾರೆ.
ನಗರದಲ್ಲಿ ಅನಧಿಕೃತ ಹಾಗೂ ನಿಯಮಬಾಹಿರ ಪೇಯಿಂಗ್ ಗೆಸ್ಟ್/ವಸತಿಗೃಹಗಳ ಪರವಾನಗಿ ಹಾಗೂ ನಿಯಂತ್ರಣಕ್ಕಾಗಿ ಕ್ರಮ ತೆಗೆದುಕೊಳ್ಳುವುದಾಗಿ ಹೇಳಲಾಗಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಹಾಗೂ ನಿಯಮಬಾಹಿರ ಪೇಯಿಂಗ್ ಗೆಸ್ಟ್ (PG) ಮತ್ತು ವಸತಿಗೃಹಗಳ ಪರವಾನಗಿ ಹಾಗೂ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ, ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ. ಕಾಯ್ದೆ, 2024ರ ಅನ್ವಯ ವಿಧಿಸಿರುವ ಷರತ್ತು ಹಾಗೂ ನಿಬಂಧನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ ಹಾಗೂ ವಸತಿಗೃಹಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.
ಅಲ್ಲದೇ ಈ ನಿಟ್ಟಿನಲ್ಲಿ ಪೂರ್ವ ನಗರ ಪಾಲಿಕೆಯಿಂದ ವಲಯದ ಆರೋಗ್ಯ ವೈದ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಿ, ಅವರ ನೇತೃತ್ವದಲ್ಲಿ ತಪಾಸಣಾ ತಂಡಗಳನ್ನು ರಚಿಸಿ, ನಿಗದಿತ ವೇಳಾಪಟ್ಟಿಯನ್ವಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ತಪಾಸಣೆ ವೇಳಾಪಟ್ಟಿ ಮತ್ತು ಉಪವಿಭಾಗಗಳು:
ಮಹದೇವಪುರ ವಲಯ: ನೋಡಲ್ ಅಧಿಕಾರಿ ಡಾ. ರಾಕೇಶ್ ಎನ್ ಅವರ ನೇತೃತ್ವದಲ್ಲಿ ಹೂಡಿ, ವೈಟ್‌ಫೀಲ್ಡ್ ಹಾಗೂ ಮಾರತಹಳ್ಳಿ ಉಪವಿಭಾಗಗಳಲ್ಲಿ ಕ್ರಮವಾಗಿ ನವೆಂಬರ್ 12, 13 ಹಾಗೂ 14 ರಂದು ಬೆಳಿಗ್ಗೆ 9 ಗಂಟೆಯಿಂದ ಕಾರ್ಯಾಚರಣೆ ಪ್ರಾರಂಭವಾಗಲಿದೆ.
ಕೆ.ಆರ್.ಪುರ ವಲಯ: ನೋಡಲ್ ಅಧಿಕಾರಿ ಡಾ.ಕೆ.ಎಂ. ವಿಶ್ವೇಶ್ವರಯ್ಯ ಅವರ ನೇತೃತ್ವದಲ್ಲಿ ಹೊರಮಾವು, ಕೆ.ಆರ್.ಪುರ ಹಾಗೂ ಹೆಚ್.ಎ.ಎಲ್ ಉಪವಿಭಾಗಗಳಲ್ಲಿ ಕ್ರಮವಾಗಿ ನವೆಂಬರ್ 12, 13 ಹಾಗೂ 14 ರಂದು ಬೆಳಿಗ್ಗೆ 9ಗಂಟೆಯಿಂದ ಕಾರ್ಯಾಚರಣೆ ನಡೆಸುವುದಾಗಿ ಹೇಳಿದ್ದಾರೆ.
ನಿಯಮಬಾಹಿರ ಪೇಯಿಂಗ್ ಗೆಸ್ಟ್ ಹಾಗೂ ವಸತಿಗೃಹಗಳ ವಿರುದ್ಧದ ನಿಯಂತ್ರಣ ಮತ್ತು ಕಾರ್ಯಾಚರಣೆಯನ್ನು ಪ್ರಮಾಣಿತ ಕಾರ್ಯಾಚರಣೆ ವಿಧಾನದ (Standard Operating Procedures) ಅನ್ವಯ ನಿಗದಿತ ದಿನಾಂಕಗಳಲ್ಲಿ, ಪೂರ್ವ ನಿರ್ಧರಿತ ಮಾರ್ಗನಕ್ಷೆಯ ಪ್ರಕಾರ ಸಮನ್ವಯದೊಂದಿಗೆ ಜಾರಿಗೆ ತರುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು. ಈ ಅಭಿಯಾನವು ಇಂದಿನಿಂದಲೇ ಪ್ರಾರಂಭವಾಗುತ್ತಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications