ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಶೋಭಾ ಕರಂದ್ಲಾಜೆ
ಬೆಂಗಳೂರು, ಜುಲೈ 8: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಪೊಲೀಸ್ ವ್ಯವಸ್ಥೆಯೂ ವಿಫಲವಾಗಿದೆ ಎಂದು ಕರ್ನಾಟಕ ರಾಜು ಬಿಜೆಪಿ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದರು.
ಜುಲೈ 4ರಂದು ಮಂಗಳೂರಿನ ಬಿ.ಸಿ. ರೋಡಿನಲ್ಲಿ ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಿಸದೆ ನಿನ್ನೆ(ಜುಲೈ 7) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆಗೆ ಪ್ರತಿಕ್ರಿಯಿಸಿದ ಅವರು, ಯುವಕನ ಸಾವಿಗೆ ಸಂತಾಪ ಸೂಚಿಸಿದರು.

ಶರತ್ ಸಾವು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಕುಸಿದು ಬಿದ್ದಿದೆ ಎಂಬುದಕ್ಕೆ ಕನ್ನಡಿ ಹಿಡಿದಿದೆ. ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನ್ಡ ಜಿಲ್ಲೆಯ ಜನರ ಬಗ್ಗೆ ಕಾಳಜಿ ಇದ್ದರೆ ತಕ್ಷಣವೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಆರೆಸ್ಸೆಸ್ ಮುಖಂಡ ಪ್ರಭಾಕರ್ ಭಟ್ ಅವರಿಗೆ ಫೇಸ್ ಬುಕ್ ಮೂಲಕ ಕೊಲೆ ಬೆದರಿಕೆ ಹಾಕಿರುವ ಮಂಬಗಳೂರು ಮುಸ್ಲಿಂ ಪೇಜ್ ನ ಮುಖ್ಯಸ್ಥರ ವಿರುದ್ಧ ಸೈಬರ್ ಕ್ರೈಂ ಕಾಯಿದೆಯಡಿ ದೂರು ದಾಖಲಿಸಿಕೊಂಡು ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕು ಎಂದೂ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಅವರ ಮೇಲೆ ತಂಡವೊಂದು ದಾಳಿ ನಡೆಸಿ ಚೂರಿಯಿಂದ ಇರಿದು ಮಂಗಳವಾರ ರಾತ್ರಿ ಪರಾರಿಯಾಗಿತ್ತು. ಬಿ.ಸಿ ರೋಡಿನಲ್ಲಿ ಈ ಘಟನೆ ನಡೆದಿತ್ತು.












Click it and Unblock the Notifications