ಬೆಂಗಳೂರಿನ ಉದ್ಯಾನಗಳಲ್ಲಿ ಎಲೆ ಸಂಸ್ಕರಣ ಘಟಕ ಕಡ್ಡಾಯ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
ಬೆಂಗಳೂರು: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ಉದ್ಯಾನಗಳಲ್ಲಿ ಎಲೆ ಸಂಸ್ಕರಣ ಘಟಕಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ಎಂ.ಜಿ. ರಸ್ತೆಯ ಪಿ.ಯು.ಬಿ. ಕಟ್ಟಡದ 10ನೇ ಮಹಡಿಯ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಂಪರ್ಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಉದ್ಯಾನವನಗಳಲ್ಲಿ ಮರಗಳು ಮತ್ತು ಸಸಿಗಳಿಂದ ಉದುರುವ ಎಲೆಗಳನ್ನು ಮೂಲದಲ್ಲಿಯೇ ಸಂಸ್ಕರಿಸಿ ಗೊಬ್ಬರ ತಯಾರಿಸಿ, ಅದೇ ಉದ್ಯಾನವನಗಳ ನಿರ್ವಹಣೆಗೆ ಬಳಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಜಿಬಿಎ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳಲ್ಲಿ ಕಡ್ಡಾಯವಾಗಿ ಎಲೆ ಸಂಸ್ಕರಣ ಘಟಕಗಳನ್ನು ಸ್ಥಾಪಿಸಲು ಸೂಚನೆ ನೀಡಿದ್ದಾರೆ.

ಶೇ.60 ರಷ್ಟು ದೂರುಗಳು ವಾರದೊಳಗೆ ಇತ್ಯರ್ಥ: ಇನ್ನು ಗುರುವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಕಸದ ಸಮಸ್ಯೆ, ಪಾದಚಾರಿ ಮಾರ್ಗ ದುರಸ್ತಿ, ಅನಧಿಕೃತ ಪಾರ್ಕಿಂಗ್, ಡಾಂಬರೀಕರಣ, ಬಿಡಾಡಿ ಹಸುಗಳ ನಿಯಂತ್ರಣ, ವಿದ್ಯುತ್ ದೀಪಗಳ ನಿರ್ವಹಣೆ, ಪಾರ್ಕ್ ನಿರ್ವಹಣೆ, ಅನಧಿಕೃತ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ದೂರುಗಳು ದಾಖಲಾಗಿವೆ. ಸ್ವೀಕರಿಸಲಾದ ದೂರುಗಳಲ್ಲಿ ಶೇ.60 ರಷ್ಟು ದೂರುಗಳನ್ನು ವಾರದೊಳಗಾಗಿ ಇತ್ಯರ್ಥಗೊಳಿಸಲಾಗುವುದು. ಉಳಿದ ಶೇ.40 ರಷ್ಟು ದೂರುಗಳು ದೀರ್ಘಕಾಲಿಕ ಸಮಸ್ಯೆಗಳಾಗಿರುವುದರಿಂದ ಅವುಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ಕಾಂಪ್ಯಾಕ್ಟರ್‌ಗಳ ಪರಿಶೀಲನೆಗೆ ಕ್ರಮ: ನಗರದಲ್ಲಿ ಕಸ ಸಂಗ್ರಹಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕಾಂಪ್ಯಾಕ್ಟರ್‌ಗಳು ವಾಣಿಜ್ಯ ಮಳಿಗೆಗಳಿಂದ ಬಲ್ಕ್ ವೇಸ್ಟ್ ಸಂಗ್ರಹಣೆ ಮಾಡುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರತ್ಯೇಕ ಇಂಜಿನಿಯರ್‌ಗಳನ್ನು ನಿಯೋಜಿಸಿ ಸಮಗ್ರ ಪರಿಶೀಲನೆ ನಡೆಸಿ ಮುಂದಿನ ವಾರದಲ್ಲಿ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಮಾತನಾಡಿ, ಪ್ರಮುಖ ರಸ್ತೆಗಳಲ್ಲಿ ಅನಧಿಕೃತ ಪಾರ್ಕಿಂಗ್ ತಪ್ಪಿಸಲು ಅಭಿಯಾನ ನಡೆಸುವಂತೆ ಜಂಟಿ ಆಯುಕ್ತರಿಗೆ ಸೂಚನೆ ಹಾಗೂ ಸಮರ್ಪಕ ತ್ಯಾಜ್ಯ ನಿರ್ವಹಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂದಿನ ತಿಂಗಳು ಮತ್ತೆ ಸಭೆ
ಫೆಬ್ರವರಿ 26ರ ಗುರುವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ 65 ಮಂದಿ ನಾಗರಿಕರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಸೂಚನೆ ನೀಡಲಾಯಿತು. ಮಾರ್ಚ್ 26ರಂದು ಮತ್ತೊಮ್ಮೆ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಾಗುವುದು. ಸಾರ್ವಜನಿಕರು ಸಮಸ್ಯೆಗಳು ಬಗೆಹರಿಯದಿದ್ದಲ್ಲಿ ಮತ್ತೆ ಸಭೆಯಲ್ಲಿ ಹಾಜರಾಗಿ ದೂರು ಸಲ್ಲಿಸಲು ಸೂಚನೆ ನೀಡಿದ್ದಾರೆ.
ಸಾರ್ವಜನಿಕರಿಂದ ಸ್ವೀಕರಿಸಿದ ಪ್ರಮುಖ ಅಹವಾಲುಗಳು
1. ಸಿ.ವಿ ರಾಮನ್ ನಗರದಲ್ಲಿ ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಜಲಾವೃತ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಸೂಚನೆ
2. ಖಾತಾ ವಿಭಜನೆ ಪ್ರಕ್ರಿಯೆಯಲ್ಲಿ ಉಂಟಾದ ಸಮಸ್ಯೆ ನಿವಾರಣೆಗೆ ಮನವಿ
3. ಅಶೋಕ ಪಿಲ್ಲರ್ ರಸ್ತೆಯಲ್ಲಿ ಬಿಲ್ಡಿಂಗ್ ಲೈನ್ ಉಲ್ಲಂಘನೆಯಿರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮನವಿ.
4. ಪಾದಚಾರಿ ಮಾರ್ಗಗಳ ಮೇಲೆ ದ್ವಿಚಕ್ರ ವಾಹನಗಳ ಪಾರ್ಕಿಂಗ್ ನಿಂದ ಹಿರಿಯ ನಾಗರಿಕರಿಗೆ ತೊಂದರೆ; ಸಮಸ್ಯೆ ನಿವಾರಣೆಗಾಗಿ ಮನವಿ.
5. ಹೊಂಬೇಗೌಡ ನಗರದಲ್ಲಿ ಕಸದ ಸಮಸ್ಯೆ ಪರಿಹರಿಸಲು ಮನವಿ.
6. ಜೀವನ್ ಭೀಮಾ ನಗರ ಹಾಗೂ ಆನಂದಪುರ ಕಾಲೊನಿಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸಲು ಮನವಿ.
7. ಸಿ.ವಿ ರಾಮನ್ ನಗರ ಮೈದಾನದಲ್ಲಿ ಅನಧಿಕೃತ ಚಟುವಟಿಕೆಗಳು ನಡೆಯುತ್ತಿದ್ದು, ವಿದ್ಯುತ್ ದೀಪ ಅಳವಡಿಸಲು ಮನವಿ.
8. ರಾಜರತ್ನಂ ಉದ್ಯಾನವನದಲ್ಲಿ ನೀರಿನ ಸಮಸ್ಯೆ ತಕ್ಷಣ ಬಗೆಹರಿಸಲು ಮನವಿ.
9. ರಸ್ತೆ ಬದಿ, ಪಾದಚಾರಿ ಮಾರ್ಗ ಹಾಗೂ ಮರಗಳಿಂದ ಓ.ಎಫ್.ಸಿ ಕೇಬಲ್ ಗಳು ನೇತಾಡುತ್ತಿದ್ದು, ತೆರವುಗೊಳಿಸಲು ಮನವಿ.
10. ಸುಂಕೇನಹಳ್ಳಿ ವಾರ್ಡ್‌ನ ಗ್ರಂಥಾಲಯದಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಮನವಿ.
11. ಗಾಂಧಿಬಜಾರ್‌ನಲ್ಲಿ ಎಂಎಲ್‌ಸಿಪಿ (ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್) ತ್ವರಿತ ಉದ್ಘಾಟನೆಗಾಗಿ ಮನವಿ.
12. ಲಿಂಗರಾಜಪುರದಲ್ಲಿ ಕೆಳಸೇತುವೆ ನಿರ್ಮಾಣದ ಮೂಲಕ ಸಂಚಾರ ದಟ್ಟಣೆ ನಿವಾರಣೆ ಮಾಡಲು ಮನವಿ.
13. ಕಾಕ್ಸ್ ಟೌನ್‌ನಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಮನವಿ.
14. ಶಾಂತಿನಗರದಲ್ಲಿ ಅರ್ಧಕ್ಕೆ ನಿಂತಿರುವ ಸಮುದಾಯ ಭವನ ಕಾಮಗಾರಿಯನ್ನು ಪೂರ್ಣಗೊಳಿಸಲು ಮನವಿ.
-
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
Bengaluru BMTC: ಡ್ರೈವರ್ ಸಾಹೇಬ್ರೆ ಶಾಲಾ ಮಕ್ಕಳು ಕಾಣಿಸಿದರೆ ಬಸ್ ನಿಲ್ಲಿಸಿ: ಕಂಡಕ್ಟರ್ ವಿಡಿಯೋ ವೈರಲ್ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ?












Click it and Unblock the Notifications