ಪರಿಷತ್ ಸಭಾಪತಿ ಶಂಕರಮೂರ್ತಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೆಂಗಳೂರು, ಜೂನ್ 13: ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅಸ್ವಸ್ಥರಾಗಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಭಾಪತಿ ಕೊಠಡಿಯಲ್ಲಿದ್ದ ವೇಳೆ ಶಂಕರಮೂರ್ತಿ ಸಿಬ್ಬಂದಿಗಳ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಉಪಚರಿಸಿದ ವೈದ್ಯರು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನು ಇಂದು ವಿಧಾನಪರಿಷತ್ ನಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ಸಭಾಪತಿ ಶಂಕರಮೂರ್ತಿ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಿದ್ದರು.
ಈ ಸಂದರ್ಭ "ಅವಿಶ್ವಾಸ ನಿರ್ಣಯದಲ್ಲಿ ಸೂಕ್ತ ಕಾರಣಗಳಿಲ್ಲ," ಎಂದು ಹೇಳಿಯೂ ಶಂಕರಮೂರ್ತಿ ಅವಿಶ್ವಾಸ ನಿರ್ಣಯಕ್ಕೆ ಒಪ್ಪಿಕೊಂಡಿದ್ದರು.












Click it and Unblock the Notifications