ಕೊಡಗಿಗೆ 1 ಕೋಟಿ ನೆರವು ನೀಡಿದ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್
ಬೆಂಗಳೂರು, ಆಗಸ್ಟ್ 24: ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಅವರು ತಮ್ಮ ನಿಧಿಯಿಂದ ಪ್ರವಾಹ ಕೊಡಗಿಗೆ ಒಂದು ಕೋಟಿ ರೂಪಾಯಿ ನೆರವು ನೀಡಿದರು.
ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದ ಲೆಹರ್ ಸಿಂಗ್ ಅವರು, ವಿಧಾನಪರಿಷತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಂದು ಕೋಟಿ ರೂಪಾಯಿಯ ಚೆಕ್ ಅನ್ನು ನೀಡಿದರು.

ಚೆಕ್ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲೆಹರ್ ಸಿಂಗ್ ಅವರು, ಕೊಡಗಿನ ಪುನರ್ ನಿರ್ಮಾಣಕ್ಕೆ ಹೆಚ್ಚಿನ ಧನ ಸಹಾಯದ ಅಗತ್ಯವಿದೆ, ಎಲ್ಲ ವಿಧಾನಪರಿಷತ್ ಸದಸ್ಯರು ತಮ್ಮ ನಿಧಿಯಿಂದ ಹೆಚ್ಚಿನ ನೆರವು ನೀಡಬೇಕು ಎಂದು ಅವರು ಹೇಳಿದರು.
ಯಡಿಯೂರಪ್ಪ ಅವರ ಆಪ್ತರಾಗಿರುವ ಲೆಹರ್ ಸಿಂಗ್ ಅವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಳ್ಳುತ್ತಾರೆ. ಆದರೆ ಅವರು ಮುಖ್ಯಮಂತ್ರಿಗಳಿಗೆ ಚೆಕ್ ವಿತರಿಸಿರುವುದು ಉತ್ತಮ ಬೆಳವಣಿಗೆ ಎನ್ನಲಾಗಿದೆ.












Click it and Unblock the Notifications