ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಚಿರತೆ ಆತಂಕ, ಬೆಂಗಳೂರು ವಿವಿ ರಸ್ತೆ ಬಂದ್

|
Google Oneindia Kannada News

ಬೆಂಗಳೂರು, ಜನವರಿ 15; ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂಬ ಸುದ್ದಿ ಜನರು, ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ಈ ಹಿನ್ನಲೆಯಲ್ಲಿ ವಿವಿ ಆವರಣ ಸಂಪರ್ಕಿಸುವ ಕೆಲ ರಸ್ತೆ ಬಂದ್ ಮಾಡಲಾಗಿದೆ.

ನಾಗರಬಾವಿ ಸರ್ಕಲ್‌ನಿಂದ ವಿಶ್ವವಿದ್ಯಾಲಯಕ್ಕೆ ತೆರಳುವ ರಸ್ತೆಯನ್ನು ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆಯ ತನಕ ಮುಚ್ಚಲಾಗಿದೆ. ಯಾರೂ ಸಹ ಈ ರಸ್ತೆಯಲ್ಲಿ ಸಂಚಾರ ನಡೆಸಬಾರದು ಎಂದು ಸೂಚನೆ ನೀಡಲಾಗಿದೆ.

ಚಿರತೆ ಪ್ರತ್ಯಕ್ಷ: ಜಾಗರೂಕವಾಗಿರುವಂತೆ ಬೆಂಗಳೂರು ವಿವಿ ಸೂಚನೆ ಚಿರತೆ ಪ್ರತ್ಯಕ್ಷ: ಜಾಗರೂಕವಾಗಿರುವಂತೆ ಬೆಂಗಳೂರು ವಿವಿ ಸೂಚನೆ

ವಾಹನ ಸವಾರರು ಈ ಮಾರ್ಗ ಬಳಸದಂತೆ ಸೂಚನೆ ನೀಡಲಾಗಿದೆ. ರಾಜರಾಜೇಶ್ವರಿ ನಗರ ಕಡೆಯ ರಸ್ತೆಯ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

 ಕೆಆರ್‌ಎಸ್ ಬೃಂದಾವನದಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ, ನಷ್ಟದ ವಿವರ ಇಲ್ಲಿದೆ ಕೆಆರ್‌ಎಸ್ ಬೃಂದಾವನದಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ, ನಷ್ಟದ ವಿವರ ಇಲ್ಲಿದೆ

Leopard Creates Panic In Bangalore University Road Closed

ಬೆಂಗಳೂರು ವಿವಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಗುರುವಾರದಿಂದ ಸುದ್ದಿ ಹಬ್ಬಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಅದು ಚಿರತೆಯಲ್ಲ. ಅದೇ ಆಕಾರ ಹೋಲುವ ಕಾಡುಬೆಕ್ಕು ಎಂದು ಹೇಳುತ್ತಿದೆ.

ಹುಲಗಿನ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷಹುಲಗಿನ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷ

ಕನ್ನಳ್ಳಿ ಸಮೀಪದ ಗಂಗಾಡಿಪುರ ಗ್ರಾಮದ ಮಹಿಳೆಯೊಬ್ಬರು ಬೆಂಗಳೂರು ನಗರದ ಆರ್‌ಎಫ್​ಒ ಕಚೇರಿಯನ್ನು ಸಂಪರ್ಕಿಸಿದ್ದರು. ತಮ್ಮ ಬಳಿ ಇದ್ದ ವಿಡಿಯೋ ತುಣುಕು ಹಂಚಿಕೊಂಡಿದ್ದರು.

ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ಈ ಪ್ರಾಣಿ ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಇದು ಕಾಡುಬೆಕ್ಕು ಎಂದು ಹೇಳುತ್ತಿದ್ದಾರೆ.

ಈ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ ಗುರುವಾರದಿಂದ ಚಿರತೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಹಬ್ಬಿದೆ. ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

ಬೆಂಗಳೂರು ನಗರದ ಹೊರವಲಯದಲ್ಲಿ ಚಿರತೆಗಳು ಪ್ರತ್ಯಕ್ಷವಾಗುವುದು ಹೊಸದಲ್ಲ. ಆದರೆ ಇದೇ ಮೊದಲ ಬಾರಿಗೆ ಬೆಂಗಳೂರು ವಿವಿ ಆವರಣದಲ್ಲಿ ಕಾಣಿಸಿಕೊಂಡಿದೆ. ಪ್ರತ್ಯಕ್ಷವಾಗಿರುವುದು ಚಿರತೆ ಹೌದೋ ಅಲ್ಲವೋ ಎಂಬುದು ಖಚಿತವಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ರಸ್ತೆ ಬಂದ್ ಮಾಡಲಾಗಿದೆ.

English summary
After leopard found news Nagarbhavi circle to Bangalore university road closed from night 8 pm to 6 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X