ಬೆಂಗಳೂರಿನ ಜನತೆಗೆ ಮತ್ತೆ ನಡುಕ ಹುಟ್ಟಿಸಿದ ಚಿರತೆ
ಬೆಂಗಳೂರು, ಅಕ್ಟೋಬರ್, 30: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆಯಷ್ಟೇ ಚಿರತೆ ಪ್ರತ್ಯಕ್ಷ ಆಗಿ ಜನರಲ್ಲಿ ನಡುಕ ಹುಟ್ಟಿಸಿತ್ತು. ಮತ್ತೆ ಇದೀಗ ನಗರದ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿ ಭಾಗದಲ್ಲಿ ಚಿರತೆ ಸಂಚಾರ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಇದನ್ನು ಕಂಡ ನಗರದ ಜನ ಬೆಚ್ಚಿಬಿದ್ದಿದ್ದಾರೆ.
ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷ
ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಇದೀಗ ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಹುಡುಕಾಟ ಮುಂದುವರೆಸಿದ್ದಾರೆ. ಅಲ್ಲದೆ ಮೈಕ್ ಮೂಲಕ ಚಿರತೆ ಇದೆ, ಜನ ಎಚ್ಚರಿಕೆಯಿಂದ ಇರುವಂತೆ ಸಂದೇಶ ನೀಡಿದೆ.

ಇತ್ತೀಚಿನ ದಿನಗಳಲ್ಲಿ ಮಾನವರು ತಮ್ಮ ತಮ್ಮ ಸ್ವಾರ್ಥಕ್ಕಾಗಿ ಮರಗಳನ್ನು ಕಡಿದು ಕಾಡು ನಾಶ ಮಾಡುತ್ತಿದ್ದಾರೆ. ಇದರ ಪರಿಣಾಮ ಕಾಡು ಪ್ರಾಣಿಗಳೆಲ್ಲ ನಾಡಿನತ್ತ ಮುಖ ಮಾಡುತ್ತಿವೆ. ಹಾಗೆಯೇ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೂಡ ಮರಗಳ ಮಾರಣಹೋಮ ಆಗುತ್ತಿದೆ. ಅದರಲ್ಲೂ ಈ ಬಾರಿ ಮಳೆಯಿಲ್ಲದೆ ಜಲಮೂಲಗಳೆಲ್ಲ ಖಾಲಿಯಾಗುತ್ತಿದ್ದು, ಇದರಿಂದ ನೀರು ಅರಸಿ ಕಾಡುಪ್ರಾಣಿಗಳು ನಾಡಿನತ್ತ ಮುಖ ಮಾಡುವುದು ಸಾಮಾನ್ಯವಾಗಿದೆ.












Click it and Unblock the Notifications