leopard: ಬೆಂಗಳೂರಿನ ಪ್ರತಿಷ್ಠಿತ ಏರಿಯಾಗೆ ಚಿರತೆ ಎಂಟ್ರಿ, ನಿವಾಸಿಗಳಲ್ಲಿ ನಡುಕ

ಉದ್ಯಾನನಗರಿ ಬೆಂಗಳೂರಿನಲ್ಲಿ ಆಗಾಗ ಚಿರತೆ ಪ್ರತ್ಯಕ್ಷವಾಗಿ ಅಟ್ಟಹಾಸ ಮೆರೆಯುತ್ತಿವೆ. ಸಾಮಾನ್ಯವಾಗಿ ಅರಣ್ಯಪ್ರದೇಶಗಳ ಸಮೀಪದ ಜಾಗಗಳಿಗೆ ಚಿರತೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸುತ್ತಿತ್ತು. ಇದೀಗ ಬೆಂಗಳೂರಿನ ಹೆಸರಾಂತ ಪ್ರದೇಶವಾದ ಬನಶಂಕರಿ 6ನೇ ಹಂತದ ಮೊದಲ ಬ್ಲಾಕ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಚಿರತೆ ಹಾಗೂ ಅದರ ಮರಿಗಳು ಈ ಪ್ರದೇಶದಲ್ಲಿ ಓಡಾಡಿದದ್ದು, ಇದರಿಂದ ಸ್ಥಳೀಯ ನಿವಾಸಿಗಳು ಜೀವ ಕೈಯಲ್ಲಿ ಹಿಡಿದಿದ್ದಾರೆ.

ಬನಶಂಕರಿ 6ನೇ ಹಂತದ ಮೊದಲ ಬ್ಲಾಕ್‌ನ ಅಪಾರ್ಟ್‌ಮೆಂಟ್‌ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ದೃಶ್ಯಗಳು ಸೆರೆಯಾಗಿವೆ. ಅಲ್ಲದೆ ಸ್ಥಳೀಯರು ಕೂಡ ತಮ್ಮ ಮೊಬೈಲ್‌ಗಳಲ್ಲಿ ಚಿರತೆ ಚಲನವನಲವನ್ನು ಸೆರೆ ಹಿಡಿದಿದ್ದಾರೆ. ಈ ಪ್ರದೇಶಕ್ಕೆ ಹೊಂದಿಕೊಂಡಿರುವ ತುರಹಳ್ಳಿ ಅರಣ್ಯದಿಂದಲೇ ಚಿರತೆಗಳು ಬಂದಿವೆ ಎಂದು ಹೇಳಲಾಗುತ್ತಿದೆ.

Leopard Sighted In Banashankari 6th Stage Bengaluru Prestigious Area

ಈ ಪ್ರದೇಶವು ತುರಹಳ್ಳಿ ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಚಿರತೆಗಳು ಹೆಚ್ಚಾಗಿ ಜನವಸತಿ ಪ್ರದೇಶಕ್ಕೆ ನುಗ್ಗುತ್ತವೆ. ಮತ್ತು ಮತ್ತೆ ಕಾಡಿಗೆ ಹೋಗುತ್ತವೆ. ಚಿರತೆ ಕಾಣಿಸಿಕೊಂಡ ಬಗ್ಗೆ ಕಗ್ಗಲೀಪುರ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದೇವೆ ಬನಶಂಕರಿ 6ನೇ ಹಂತದ ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ತಿಳಿಸಿದೆ.

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರದೇಶದಲ್ಲಿ ಮತ್ತೊಬ್ಬ ನಿವಾಸಿಯ ಮನೆಯ ಸಮೀಪ ಚಿರತೆ ಕಾಣಿಸಿಕೊಂಡಿರುವುದಾಗಿ ಹೇಳಿದ್ದರು. ಮೊದಲಿಗೆ ಇದನ್ನು ನಾವು ನಂಬಿರಲಿಲ್ಲ. ಆದರೆ ಅಪಾರ್ಟ್‌ಮೆಂಟ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರವೇ ಚಿರತೆಗಳು ಪ್ರತ್ಯಕ್ಷವಾಗಿರುವುದು ನಂಬಿದೆವು. ಈಗ ಪದೇ ಪದೇ ಈ ಭಾಗದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಸಂಜೆಯಾದ ನಂತರ ನಮಗೆ ಮನೆಯಿಂದ ಹೊರಹೋಗಲು ಹೆದರಿಕೆಯಾಗುತ್ತೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

Leopard Sighted In Banashankari 6th Stage Bengaluru Prestigious Area

ಇಲ್ಲಿ ಚಿರತೆ ಮರಿಗಳು ಇರುವ ಬಗ್ಗೆ ಇನ್ನೂ ಖಾತ್ರಿಯಾಗಿಲ್ಲ. ಇದಕ್ಕೆ ಸಂಬಂಧಿಸಿ ಯಾವುದೇ ಫೋಟೋ ಅಥವಾ ವಿಡಿಯೋ ಸಾಕ್ಷಿಗಳು ಕೂಡ ಸಿಕ್ಕಿಲ್ಲ. ನಾವು ಈಗಾಗಲೇ ಸಂಶಯಾಸ್ಪದ ಪ್ರದೇಶವನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಚಿರತೆ ಇರುವುದು ನೀಡಿದ್ದಾರೆ. ತುರಹಳ್ಳಿ ಅರಣ್ಯದ ಬಂಡೆ ಮೇಲೆ ಚಿರತೆ ಕುಳಿತಿರುವುದನ್ನು ನೋಡಿದ್ದಾರೆ. ಇದು ಕಳೆದ ವಾರಗಳಿಂದಲೇ ಕಂಡುಬಂದಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ಚಿರತೆಯು ತನ್ನ ಮರಿಗಳೊಂದಿಗೆ ಅಲೆದಾಡುತ್ತಿದ್ದರೆ ಸಾರ್ವಜನಿಕರು ಅವುಗಳಿಗೆ ತೊಂದರೆ ಕೊಡಬೇಡಿ. ಒಂದು ವೇಳೆ ಚಿರತೆಗಳು ಬಂದರೂ ಮತ್ತೆ ಕಾಡಿಗೆ ಮರಳುತ್ತವೆ. ಮರಿಗಳ ಮೇಲೆ ಯಾವ ಕಾರಣಕ್ಕೂ ಸ್ಪರ್ಶಿಸಬೇಡಿ. ಹಾಗೂ ಮರಿಗಳನ್ನು ಎತ್ತಿಕೊಂಡು ಹೋಗಬೇಡಿ ಎಂದು ನಿವಾಸಿಗಳಿಗೆ ಮನವಿ ಮಾಡಿದ್ದಾರೆ.

ತುರಹಳ್ಳಿ ಅರಣ್ಯ ಪ್ರದೇಶಕ್ಕೆ ಅಂಟಿಕೊಂಡಿರುವ ಈ ಪ್ರದೇಶದಲ್ಲಿ ಎರಡು ಚಿರತೆಗಳು ಆಗಾಗ ಪ್ರತ್ಯಕ್ಷವಾಗುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಆಟೋ, ಕ್ಯಾಬ್ ಹಾಗೂ ಡೆಲಿವರಿ ಬಾಯ್ಸ್‌ ಕೂಡ ರಾತ್ರಿ ವೇಳೆ ಈ ಪ್ರದೇಶಕ್ಕೆ ಬರಲು ಹಿಂಜರಿಯುತ್ತಾರೆ. ಇತ್ತೀಚೆಗೆ ಈ ಪ್ರದೇಶದಲ್ಲಿ ಹಲವು ಬೀದಿನಾಯಿಗಳು ಕೂಡ ಮಿಸ್ಸಿಂಗ್‌ ಆಗಿವೆ ಎಂದು ಹೇಳಲಾಗುತ್ತಿದೆ. ಸದ್ಯ ಚಿರತೆಗಳಿಂದ ರಕ್ಷಣೆ ಒದಗಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+