ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ: ತನಿಖೆ ನಡೆಸಲು ಸಿಎಂ ಬೊಮ್ಮಾಯಿ ಸೂಚನೆ

|
Google Oneindia Kannada News

ಬೆಂಗಳೂರು, ಆಗಸ್ಟ್ 19: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಪೂರ್ಣವಾಗಿ ತನಿಖೆ ನಡೆಸುವುದಾಗಿ ಸಿದ್ದರಾಮಯ್ಯ ಅವರಿಗೆ ಭರವಸೆ ನೀಡಿದ್ದೇನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ನಾನೇ ಖುದ್ದಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ, ಸಿದ್ದರಾಮಯ್ಯ ಮತ್ತು ಅವರ ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ವಿವರಗಳನ್ನು ನೀಡುವಂತೆ ಕೇಳಿದ್ದೇನೆ ಎಂದು ತಿಳಿಸಿದರು.

ಧರ್ಮದ ವಿಚಾರಕ್ಕೆ ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ: ರಂಭಾಪುರಿ ಶ್ರೀಧರ್ಮದ ವಿಚಾರಕ್ಕೆ ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ: ರಂಭಾಪುರಿ ಶ್ರೀ

ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಜಿ ಅವರನ್ನು ಕರೆದು ಚರ್ಚೆ ಮಾಡಿದ್ದೇನೆ. ಯಾರೂ ಕೂಡ ಕಾನೂನು ಸುವ್ಯವಸ್ಥೆಯನ್ನು ಕೈಗೆ ತೆಗೆದುಕೊಳ್ಳಬಾರದು. ಎರಡೂ ಕಡೆ ಇದು ನಡೆಯುತ್ತಿದ್ದು, ಇನ್ನೊಬ್ಬರನ್ನು ಕೆರಳಿಸುವಂತ ಹೇಳಿಕೆಯನ್ನು ಕೊಡಬಾರದು. ಈ ಬಗ್ಗೆ ಕಟ್ಟು ನಿಟ್ಟಾದ ಆದೇಶವನ್ನು ನೀಡಿ, ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Life Threat For Former Cm Siddaramaiah: Cm Bommai Instructs For Investigation

ಘಟನೆ ಬಗ್ಗೆ ಸಿಎಂ ಬೊಮ್ಮಾಯಿ ಬೇಸರ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘಟನೆಯನ್ನು ಖಂಡಿಸಿದ್ದರು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು, ಎಂದು ಹೇಳಿದ್ದರು.

Life Threat For Former Cm Siddaramaiah: Cm Bommai Instructs For Investigation

ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ ಘಟನೆಯ ನಂತರ ವಿವಾದ ಶುರುವಾಗಿತ್ತು. ಮುಸ್ಲಿಂ ಏರಿಯಾಗಳಲ್ಲಿ ಸಾವರ್ಕರ್ ಫ್ಲೆಕ್ಸ್ ಏಕೆ ಹಾಕಬೇಕಿತ್ತು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಬಿಜೆಪಿ ನಾಯಕರು, ಹಿಂದೂ ಪರ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಕಾಶೀಹಾರ ಚುನಾವಣೆ ತನಕ ನಿಮ್ಮ ಕೊರಳಲ್ಲೇ ಇರಲಿ: ಸಿದ್ದರಾಮಯ್ಯಗೆ ಶ್ರೀಗಳ 'ಶ್ರೀರಕ್ಷೆ'ಕಾಶೀಹಾರ ಚುನಾವಣೆ ತನಕ ನಿಮ್ಮ ಕೊರಳಲ್ಲೇ ಇರಲಿ: ಸಿದ್ದರಾಮಯ್ಯಗೆ ಶ್ರೀಗಳ 'ಶ್ರೀರಕ್ಷೆ'

ಮಳೆಹಾನಿ ವೀಕ್ಷಣೆ ಮಾಡಲು ಮಡಿಕೇರಿ ಜಿಲ್ಲಾ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ವೇಳೆ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಮೊಟ್ಟೆ ಎಸೆದಿದ್ದರು. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮಾಯವಾಗಿದೆ ಎಂದು ಬಿಜೆಪಿ ವಿರುದ್ಧ ಟೀಕೆ ಮಾಡಿದ್ದರು.

Recommended Video

ಬಡವರ ಪಾಲಿನ ಭಾಗ್ಯದಾತ ಡಿ.ದೇವರಾಜ ಅರಸು ಜನ್ಮದಿನ | OneIndia Kannada

English summary
The government has taken seriously the issue of death threats to former Chief Minister and Leader of Opposition Siddaramaiah. Chief Minister Basavaraja Bommai said that he has assured Siddaramaiah that he direct to Police for conduct a investigation into the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X