ಬೆಂಗಳೂರಿನ ಚುಮುಚುಮು ಚಳಿಗೆ ಮಳೆಯ ಸಿಂಚನ

ಬೆಂಗಳೂರು, ಜನವರಿ 6: ಬೆಂಗಳೂರಿನ ಚುಮುಚುಮು ಚಳಿಗೆ ಮಳೆಯ ಸಿಂಚನವಾಗಿದೆ. ಸೋಮವಾರ ಬೆಳಗ್ಗೆ ತುಂತುರು ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬೆಂಗಳೂರಲ್ಲಿ ಚಳಿ ಕಡಿಮೆ ಇದೆ.

ಚೆನ್ನೈನಲ್ಲೂ ಕೂಡ ಮುಂದಿನ 24 ಗಂಟೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತದ ಜೊತೆಗೆ ಮಳೆಯೂ ಕೂಡ ಬರುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲಿ ಜನವರಿ 8ರವರೆಗೂ ಮೋಡಕವಿದ ವಾತಾವರಣ ಮುಂದುವರೆಯಲಿದ್ದು ಮಳೆಯಾಗುವ ಸಾಧ್ಯತೆಗಳಿವೆ. ಶ್ರೀನಿವಾಸನಗರ, ಜಯನಗರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ.

ಬೆಂಗಳೂರು ಹೊರವಲಯ, ದೊಡ್ಡಬಳ್ಳಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 11.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅರುಣಾಚಲ ಪ್ರದೇಶದಲ್ಲಿ ಜನವರಿ 4 ರಂದು 3.9 ತೀವ್ರತೆಯ ಭೂಕಂಪ ಸಂಭವಿಸಿದೆ.

Light Rain In Bengaluru

ತಮಿಳುನಾಡಿನಲ್ಲೂ ಮೋದಕವಿದ ವಾತಾವರಣ ನಿರ್ಮಾಣವಾಗಿದ್ದು ಮಳೆ ಮರುವ ಸಾಧ್ಯತೆಗಳಿವೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ.

ಮುಂಗಾರು ಮುಂದುವರೆದಿರುವುದರಿಂದ ಚಳಿಗಾಲವೂ ಕೂಡ ತಡವಾಗಿದೆ. ಕಾಂಚೀಪುರಂ ಸೇರಿದಂತೆ ಹಲವೆಡೆ ಮುಂದಿನ ಎರಡು ದಿನವೂ ಇದೇ ರೀತಿ ವಾತಾವರಣವಿರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+