ಕೊನೆಗೂ ಲಿಂಗಾಯತ ಅಲ್ಪಸಂಖ್ಯಾತ ಮಾನ್ಯತೆಗೆ ತಜ್ಞರ ಸಮಿತಿ ರಚನೆ

ಬೆಂಗಳೂರು, ಡಿಸೆಂಬರ್ 22: ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಕೊನೆಗೂ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ವೇದಿಕೆಯೊಂದನ್ನು ಸಿದ್ದಪಡಿಸಿದೆ.

ಲಿಂಗಾಯತ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆಗೆ 7 ಜನರ ತಜ್ಞರ ಸಮಿತಿಯನ್ನು ರಚಿಸಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಏಳು ಜನ ತಜ್ಞರ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಆಸೆ ಚಿಗುರೊಡೆದಿದೆ.

ಸಮಿತಿಯಲ್ಲಿರುವವರು: * ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ * ಪ್ರೊ. ಮುಜಾಫರ್ ಅಸಾದಿ, * ಪ್ರೊ. ಜಿ.ಎಸ್ ಸಿದ್ದರಾಮಯ್ಯ, * ಪುರುಷೋತ್ತಮ್ ಬಿಳಿಮಲೆ, * ಡಾ. ಸಿ.ಎಸ್ ದ್ವಾರಕನಾಥ್,* ಸರಾಜು ಕಾಟ್ಕರ್ ಸೇರಿದಂತೆ ಒಟ್ಟು ಏಳು ಜನರ ಸಮಿತಿಯನ್ನು ರಚಿಸಲಾಗಿದೆ.

Lingayat as separate religion : Siddaramaiah forms committee

ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಶಿಫಾರಸು ಮಾಡುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ಲಿಂಗಾಯಿತ ಪ್ರತ್ಯೇಕ ಧರ್ಮ ಎನ್ನುವ ಸಣ್ಣ ಕೂಗು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯಿಂದಾಗಿ ಈಗ ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ.

ಜನಸಂಖ್ಯೆಯ ಆಧಾರದಲ್ಲಿ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿರುವ ಲಿಂಗಾಯಿತ ಸಮುದಾಯವನ್ನು ಒಡೆದು 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಮೈಲೇಜ್ ಪಡೆದುಕೊಳ್ಳುಲು ಕಾಂಗ್ರೆಸ್ ಮುಂದಾಗುತ್ತಿದೆ ಎನ್ನುವುದು ಕೆಲವರ ಆರೋಪ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+