ಏಪ್ರಿಲ್ 10 ರಿಂದ ಬೆಂಗಳೂರಿನಲ್ಲಿ ಈ ರೈಲುಗಳು ಭಾಗಶಃ ರದ್ದು; ಕಾರಣ, ಸಂಪೂರ್ಣ ವಿವರ ಇಲ್ಲಿದೆ

ಬೆಂಗಳೂರು, ಏಪ್ರಿಲ್ .07: ಕೆಎಸ್‌ಆರ್ ಬೆಂಗಳೂರು ನಿಲ್ದಾಣದ ಯಾರ್ಡ್‌ನ ಲೈನ್-2 ರಲ್ಲಿ ಗರ್ಡರ್‌ನ (girder) ಅಳವಡಿಕೆಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್‌ನಿಂದಾಗಿ, ಏಪ್ರಿಲ್ 10 ರಿಂದ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತದೆ. ಕೆಲವು ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗುತ್ತದೆ. ಮತ್ತೆ ಕೆಲವನ್ನುರಿ ಶೇಡ್ಯೂಲ್ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

* ಏಪ್ರಿಲ್ 10 ರಂದು ತಿರುಪತಿಯಿಂದ ಹೊರಡುವ ತಿರುಪತಿ - ಚಾಮರಾಜನಗರ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16220) ವೈಟ್‌ಫೀಲ್ಡ್ - ಚಾಮರಾಜನಗರ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.

* ಏಪ್ರಿಲ್ 10 ರಂದು ನಾಂದೇಡ್‌ನಿಂದ ಪ್ರಾರಂಭವಾಗುವ ನಾಂದೇಡ್ - ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 16594) ಯಲಹಂಕ-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳ್ಳುತ್ತದೆ.

List of Train Services Cancelled Across Bengaluru Division

*ದೇವನಹಳ್ಳಿ - ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ (ರೈಲು ಸಂಖ್ಯೆ. 06532) ಏಪ್ರಿಲ್ 10 ರಂದು ದೇವನಹಳ್ಳಿಯಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.

* ಕೆಎಸ್‌ಆರ್ ಬೆಂಗಳೂರು-ದೇವನಹಳ್ಳಿ ಮೆಮು ವಿಶೇಷ (ರೈಲು ಸಂಖ್ಯೆ. 06531) ಕೆಎಸ್‌ಆರ್ ಬೆಂಗಳೂರಿನಿಂದ ಏಪ್ರಿಲ್ 11 ರಂದು ಹೊರಡಲಿದ್ದು, ಕೆಎಸ್‌ಆರ್ ಬೆಂಗಳೂರು-ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದಾಗಲಿದೆ.

* ಎರ್ನಾಕುಲಂ - ಕೆಎಸ್‌ಆರ್ ಬೆಂಗಳೂರು ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 12678) ಎರ್ನಾಕುಲಂನಿಂದ ಏಪ್ರಿಲ್ 10 ರಂದು ಹೊರಡುತ್ತದೆ. ಇದು ಬೈಯ್ಯಪ್ಪನಹಳ್ಳಿ-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ಬೈಯ್ಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ. ಬೆಂಗಳೂರು ಕಂಟೋನ್ಮೆಂಟ್ ನಿಲುಗಡೆಯನ್ನು ತೆಗೆದುಹಾಕುವ ಮೂಲಕ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ಬೆಂಗಳೂರಿಗೆ ತಿರುಗಿಸಲಾಗುತ್ತದೆ.

* ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 12677) ಏಪ್ರಿಲ್ 11 ರಂದು ಕೆಎಸ್‌ಆರ್ ಬೆಂಗಳೂರು-ಬೈಯ್ಯಪ್ಪನಹಳ್ಳಿ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಬೆಳಗ್ಗೆ 6.10 ಕ್ಕೆ ಹೊರಡಲಿದ್ದು, ಬೆಂಗಳೂರಿನಲ್ಲಿ ನಿಲುಗಡೆಯಾಗುತ್ತದೆ.

List of Train Services Cancelled Across Bengaluru Division

*ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್ (ರೈಲು ಸಂಖ್ಯೆ. 01772) ಏಪ್ರಿಲ್ 11 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ. ಅದು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ಕೊನೆಗೊಳ್ಳುತ್ತದೆ.

* ಕೆಎಸ್‌ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು ವಿಶೇಷ (ರೈಲು ಸಂಖ್ಯೆ. 06396) ಏಪ್ರಿಲ್ 11 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಅದು ನಿಗದಿತ ನಿರ್ಗಮನದ ಸಮಯದಲ್ಲಿ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಡಲಿದೆ.

*ರೈಲುಗಳ ತಿರುವುಗಳು*

*ಮೈಸೂರು - ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್‌ಪ್ರೆಸ್: ಏಪ್ರಿಲ್ 10 ರಂದು ಮೈಸೂರಿನಿಂದ ಹೊರಡುವ ಮೂಲಕ ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಬಾಣಸವಾಡಿ, ಬೈಯ್ಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರದ ಮೂಲಕ ಚಲಿಸುವಂತೆ ತಿರುಗಿಸಲಾಗುತ್ತದೆ. ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇರುವುದಿಲ್ಲ.

* ಎಂಜಿಆರ್ ಚೆನ್ನೈ ಸೆಂಟ್ರಲ್: ಏಪ್ರಿಲ್ 10 ರಂದು ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಮೈಸೂರು ಕಾವೇರಿ ಡೈಲಿ ಎಕ್ಸ್‌ಪ್ರೆಸ್ ಅನ್ನು ಕೃಷ್ಣರಾಜಪುರಂ, ಬೈಯ್ಯಪ್ಪನಹಳ್ಳಿ, ಬಾಣಸವಾಡಿ, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ಮಾರ್ಗವಾಗಿ ತಿರುಗಿಸಲಾಗುತ್ತದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇರುವುದಿಲ್ಲ.

*ಕೆಎಸ್‌ಆರ್ ಬೆಂಗಳೂರು - ನಾಂದೇಡ್ ಡೈಲಿ ಎಕ್ಸ್‌ಪ್ರೆಸ್: ಏಪ್ರಿಲ್ 10 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡುವ ಸಮಯವನ್ನು 85 ನಿಮಿಷಗಳ ಕಾಲ ಮುಮದಕ್ಕೆ ಹಾಕಲಾಗಿದೆ. ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ ಮತ್ತು ಯಲಹಂಕ ಮೂಲಕ ಚಲಿಸುವಂತೆ ತಿರುಗಿಸಲಾಗಿದ್ದು, ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆಯನ್ನು ಬಿಟ್ಟು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಕಡೆ ತಿರುಗಿಸಲಾಗುತ್ತದೆ.

*ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವಿಶೇಷ: ಏಪ್ರಿಲ್ 10 ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಡುವ ಮೂಲಕ ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ಮೂಲಕ ಚಲಿಸುವಂತೆ ಮಾಡಲಾಗುವುದು. ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆಯನ್ನು ಬಿಟ್ಟುಬಿಡುತ್ತದೆ.

*ಮೈಸೂರು - ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ವಿಶೇಷ: ಏಪ್ರಿಲ್ 10 ರಂದು ಮೈಸೂರಿನಿಂದ ಹೊರಡುವ ಮೂಲಕ ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ ಮತ್ತು ಎಸ್‌ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆಯನ್ನು ಬಿಟ್ಟುಬಿಡುತ್ತದೆ.

*ಬಂಗಾರಪೇಟೆ - ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ: (ತೃ. ಸಂಖ್ಯೆ 16521) ಏಪ್ರಿಲ್ 10 ರಂದು ಬಂಗಾರಪೇಟೆಯಿಂದ ಹೊರಡುವ ಮೂಲಕ ಕೃಷ್ಣರಾಜಪುರಂ, ಬೈಯ್ಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದ್ದು, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇರುವುದಿಲ್ಲ.

*ರಿ ಶೇಡ್ಯೂಲಿಂಗ್*

ಮೈಲಾಡುತುರೈ - ಮೈಸೂರು ಡೈಲಿ ಎಕ್ಸ್‌ಪ್ರೆಸ್, ಏಪ್ರಿಲ್ 10 ರಂದು ಮೈಲಾಡುತುರೈಯಿಂದ ಹೊರಡುವ ಸಮಯವನ್ನು 90 ನಿಮಿಷಗಳ ಕಾಲ ಮುಂದಕ್ಕೆ ಹಾಕಲಾಗಿದೆ. ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್, ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಏಪ್ರಿಲ್ 10 ರಂದು ಹೊರಡಲಿದ್ದು, ದಕ್ಷಿಣ ರೈಲ್ವೆ ಮಾರ್ಗದಲ್ಲಿ 120 ನಿಮಿಷಗಳ ಕಾಲ ನಿಧಾನವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+