ಮೋದಿ, ಏಂಜೆಲಾ ಮರ್ಕೆಲ್‌ ಬೆಂಗಳೂರು ಭೇಟಿ

ಬೆಂಗಳೂರು, ಅಕ್ಟೋಬರ್ 06 : ಸಾಫ್ಟ್ ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜರ್ಮನ್ ಛಾನ್ಸಲರ್ ಏಂಜೆಲಾ ಮರ್ಕೆಲ್‌ ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಏಂಜೆಲಾ ಮರ್ಕೆಲ್‌ ಅವರು ಇಂದು ಆಡುಗೋಡಿಯಲ್ಲಿರುವ ಬಾಷ್ ಕಂಪನಿಗೆ ಭೇಟಿ ನೀಡಲಿದ್ದಾರೆ.

ಸಾಫ್ಟ್ ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟ (ನಾಸ್ಕಾಂ) ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಜರ್ಮನ್ ಛಾನ್ಸಲರ್ ಏಂಜೆಲಾ ಮರ್ಕೆಲ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. [ಮೋದಿ, ಮಾರ್ಕೆಲ್ ಆಗಮನ : ಸಂಚಾರ ಮಾರ್ಗ ಬದಲು]

narendra modi

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಏಂಜೆಲಾ ಮರ್ಕೆಲ್‌ ಮತ್ತು ನರೇಂದ್ರ ಮೋದಿ ಅವರು ಆಡುಗೋಡಿಯಲ್ಲಿರುವ ಬಾಷ್ ಕಂಪನಿಗೆ ಭೇಟಿ ನೀಡಲಿದ್ದು, ನಂತರ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯುವ ನಾಸ್ಕಾಂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಮಯ 11.30 : ನರೇಂದ್ರ ಮೋದಿ ಅವರು ಬಾಷ್ ಕಂಪನಿಯಿಂದ ಲೀಲಾ ಪ್ಯಾಲೇಸ್ ಹೋಟೆಲ್‌ಗೆ ಆಗಮಿಸಿದ್ದಾರೆ

bengaluru

ಸಮಯ 10.15 : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರನ್ನೇ ತಡೆದು ನಿಲ್ಲಿಸಿದ ಭದ್ರತಾ ಸಿಬ್ಬಂದಿ

ಸಮಯ 9.35 : ಬಾಷ್ ಕಂಪನಿಗೆ ಭೇಟಿ ನೀಡಿದ ಏಂಜೆಲಾ ಮರ್ಕೆಲ್‌, ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಯ 9.15 : ಎಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಬಿಬಿಎಂಪಿ ಸದಸ್ಯರು ಮೋದಿ ಅವರಿಗೆ ಸ್ವಾಗತ ಕೋರಿದರು.

siddaramaiah

ಸಮಯ 9.10 : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಸಮಯ 8.30 : 9.30ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ 2.30ಕ್ಕೆ ದೆಹಲಿಗೆ ವಾಪಸ್ ಆಗಲಿದ್ದಾರೆ.

ಸಮಯ 8.15 : ಬಾಷ್ ಕಂಪನಿಗೆ ಭೇಟಿ ಮತ್ತು ಲೀಲಾ ಪ್ಯಾಲೇಸ್‌ನಲ್ಲಿ ನಡೆಯುವ ನಾಸ್ಕಾಂ ಕಾರ್ಯಕ್ರಮದಲ್ಲಿ ಮಾತ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+