ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ರಾಜಕೀಯ, ಧರ್ಮ ಹಳತಾಗಿದೆ: ವಿಜ್ಞಾನ, ಆಧ್ಯಾತ್ಮ ಒಪ್ಪುವ ಕಾಲ ಬಂದಿದೆ'

|
Google Oneindia Kannada News

ಬೆಂಗಳೂರು, ಜನವರಿ 26 : ಜಾತ್ಯಾತೀತತೆ ಸಂವಿಧಾನದ ಮುಖ್ಯ ಆಶಯಗಳಲ್ಲೊಂದು. ಇದು ಅನ್ಯ ಧರ್ಮವನ್ನು ದ್ವೇಷಿಸದೆ ಸ್ವಂತ ಧರ್ಮವನ್ನು ಪ್ರೀತಿಸುವ ಉದಾತ್ತ ಮಾನವೀಯ ಗುಣ. ಜಾತಿ-ಧರ್ಮವನ್ನು ಮೀರಿ ಮನುಷ್ಯ ಜಾತಿ ತಾನೊಂದೇ ವಲಂ ಎಂಬ ಪಂಪ ಮಹಾಕವಿಯ ವಾಣಿ ಕೂಡಾ ಸಂವಿಧಾನದ ಈ ಆಶಯವನ್ನೇ ನೆನಪುಮಾಡಿ ಕೊಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ ನೀಡಿದರು.

ಆಕಾಶವಾಣಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ವತಂತ್ರ ಭಾರತದ ಇತಿಹಾಸದಲ್ಲಿ ಜನವರಿ 26 ಕ್ಕೆ ವಿಶೇಷವಾದ ಮಹತ್ವವಿದೆ. 1947 ರ ಆಗಸ್ಟ್ 15 ನಾವು ಬ್ರಿಟೀಷರ ಗುಲಾಮಗಿರಿಯಿಂದ ಬಿಡುಗಡೆ ಪಡೆದ ಮಹತ್ವದ ದಿನ.

ಗಣರಾಜ್ಯೋತ್ಸವ ಸಮಾರಂಭಕ್ಕೆ ವಿಶೇಷ ಅತಿಥಿಗಳಾಗಿ 10 ಆಸಿಯಾನ್ ನಾಯಕರುಗಣರಾಜ್ಯೋತ್ಸವ ಸಮಾರಂಭಕ್ಕೆ ವಿಶೇಷ ಅತಿಥಿಗಳಾಗಿ 10 ಆಸಿಯಾನ್ ನಾಯಕರು

1950 ರ ಜನವರಿ 26 ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಸೋದರತ್ವ ಮತ್ತು ಜಾತ್ಯಾತೀತ ಮೌಲ್ಯಗಳ ಆಧಾರದಲ್ಲಿ ದೇಶವನ್ನು ಕಟ್ಟಲು ಸಂಕಲ್ಪ ಮಾಡಿದ ನಿರ್ಣಾಯಕ ದಿನ. ಸಂವಿಧಾನದ ಈ ಮೂಲಭೂತ ಆಶಯಗಳಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ.

ಭಾರತದ ಸಂವಿಧಾನ ಆಧರಿಸಿ ಬರುವುದು ಭಾರತದ ಪ್ರಜಾಪ್ರಭುತ್ವ

ಭಾರತದ ಸಂವಿಧಾನ ಆಧರಿಸಿ ಬರುವುದು ಭಾರತದ ಪ್ರಜಾಪ್ರಭುತ್ವ

ನಮ್ಮಲ್ಲಿ ದೇಶದ ಅರಿವನ್ನೂ ಹಾಗೂ ದೇಶಾಭಿಮಾನದ ಕಿಚ್ಚನ್ನೂ ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧಿ ಅವರ ಮುಂದಾಳತ್ವದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್. ಈ ರಾಷ್ಟ್ರೀಯ ಚಳುವಳಿಯ ಭದ್ರ ಬುನಾದಿ ರೂಪುಗೊಂಡಿದ್ದೇ ಭಾರತದ ಸಂವಿಧಾನ ಮತ್ತು ಅದನ್ನು ಆಧರಿಸಿ ನಡೆದುಕೊಂಡು ಬರುತ್ತಿರುವ ಭಾರತದ ಪ್ರಜಾಪ್ರಭುತ್ವ ಎಂದು ನುಡಿದರು.

ಭಾರತದ ಸಂಪೂರ್ಣ ಅಭಿವ್ಯಕ್ತಿಯ ಘೋಷಣೆಯಾಗಿದೆ

ಭಾರತದ ಸಂಪೂರ್ಣ ಅಭಿವ್ಯಕ್ತಿಯ ಘೋಷಣೆಯಾಗಿದೆ

ನಮ್ಮ ಈ ಸ್ವರಾಜ್ಯ ಬ್ರಿಟೀಷ್ ಸಂಸತ್ತಿನ ಉಡುಗೊರೆಯಾಗಿರುವುದಿಲ್ಲ. ಅದು ನಮ್ಮ ಭಾರತದ ಸಂಪೂರ್ಣ ಅಭಿವ್ಯಕ್ತಿಯ ಘೋಷಣೆಯಾಗಿರುತ್ತದೆ. ಅದು ನಮ್ಮ ದೇಶದ ಉತ್ಕøಷ್ಠ ರಕ್ತದಿಂದ ಪಡೆದ ನಿಧಿಯಾಗಿರುತ್ತದೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಸ್ವಾತಂತ್ರ್ಯಾ ಪೂರ್ವದಲ್ಲಿ ಭವಿಷ್ಯ ನುಡಿದಿದ್ದರು. ಆ ನಿಧಿ ದೇಶದ ಜನರ ಬದುಕಿನಲ್ಲಿ ಸಾಕಾರಗೊಂಡಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಮೂಲಕ ಎಂದರು.

ಭಾರತದ ಎಲ್ಲಾ ನಾಗರೀಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದರು.

ರಾಜಕೀಯ ಪ್ರಜಾಪ್ರಭುತ್ವದ ರಕ್ಷಣೆಯಾಗಬೇಕು

ರಾಜಕೀಯ ಪ್ರಜಾಪ್ರಭುತ್ವದ ರಕ್ಷಣೆಯಾಗಬೇಕು

ಈ ಹಿನ್ನೆಲೆಯಲ್ಲಿ ಗಣರಾಜ್ಯದ ದಿನವಾದ ಇಂದು ನಾವು ಮುಖ್ಯವಾದ ಎರಡು ಜವಾಬ್ದಾರಿಗಳನ್ನು ನೆನಪಿಸಿಕೊಳ್ಳಬೇಕಾಗುತ್ತದೆ. ಮೊದಲನೆಯದು ಈ ದೇಶದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ರಕ್ಷಣೆ. ಆ ಮೂಲಕ ದೇಶದ ಸಾರ್ವಭೌಮತ್ವವನ್ನು ಕಾಪಾಡುವುದು. ಎರಡನೆಯದಾಗಿ ಆರ್ಥಿಕ ಪ್ರಜಾಪ್ರಭುತ್ವವನ್ನು ಸಾಧಿಸುತ್ತಾ ಹೋಗುವುದು.

ದೇಶ ನಿಜಕ್ಕೂ ಬಲಗೊಳ್ಳುವುದು ಮತ್ತು ಸದೃಢಗೊಳ್ಳುವುದು ಆರ್ಥಿಕ ಪ್ರಜಾಪ್ರಭುತ್ವದಿಂದ. ಇದನ್ನು ಸಾಧಿಸಬೇಕೆಂದರೆ ಸಾವಿರಾರು ಜಾತಿಗಳಾಗಿ, ಮೇಲು-ಕೀಳು ಎಂಬ ತಾರತಮ್ಯಗಳಲ್ಲಿ ಛಿದ್ರವಾಗಿರುವ ಈ ದೇಶದಲ್ಲಿ ಸಾಮಾಜಿಕ ನ್ಯಾಯದ ಮೂಲಕ ಆರ್ಥಿಕ ಸಮಾನತೆಯನ್ನು ಸ್ಥಾಪಿಸಿ ದೇಶವನ್ನು ಆಂತರಿಕವಾಗಿ ಸದೃಢಗೊಳಿಸಬೇಕಾಗಿದೆ. ಈ ಪ್ರಯತ್ನದ ಹಾದಿಯಲ್ಲಿ ನಮ್ಮ ಸರ್ಕಾರ ಮುನ್ನಡೆದಿದೆ.

ವಿಜ್ಞಾನ ಮತ್ತು ಆಧ್ಯಾತ್ಮಿಕತೆಯನ್ನು ಒಪ್ಪಿಕೊಳ್ಳುವ ಕಾಲ

ವಿಜ್ಞಾನ ಮತ್ತು ಆಧ್ಯಾತ್ಮಿಕತೆಯನ್ನು ಒಪ್ಪಿಕೊಳ್ಳುವ ಕಾಲ

ರಾಜಕೀಯ ಮತ್ತು ಧರ್ಮ ಎರಡೂ ಹಳತಾಗಿ ಬಿಟ್ಟಿವೆ. ಈ ಕಾಲ ವಿಜ್ಞಾನ ಮತ್ತು ಆಧ್ಯಾತ್ಮಿಕತೆಯನ್ನು ಅಪ್ಪಿಕೊಳ್ಳುವ ಕಾಲ ಎಂದು ಭಾರತದ ಪ್ರಥಮ ಪ್ರಧಾನಿ ಮತ್ತು ಮುತ್ಸದ್ಧಿ ರಾಜಕಾರಣಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಹೇಳಿದ್ದರು. ಈ ಆಶಯಗಳನ್ನು ಸಾಕಾಗೊಳಿಸುವುದು ಜನರಿಂದ ಆಯ್ಕೆಯಾದ ಪ್ರತಿಯೊಂದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಪಾಲನೆ ಮಾಡುವ ನಮ್ಮ ಕೈಗಳಿಗೆ ತಮ್ಮ ಸಹಕಾರ ಮತ್ತು ಸದಾಶಯದ ಬೆಂಬಲ ಸದಾ ಇರಲಿ ಎಂದರು.

ದೇಶಕಟ್ಟಲು ಬಹುಧರ್ಮ, ಬಹು ಭಾಷೆ, ಸಂಸ್ಕೃತಿ ಅಗತ್ಯವಿದೆ

ದೇಶಕಟ್ಟಲು ಬಹುಧರ್ಮ, ಬಹು ಭಾಷೆ, ಸಂಸ್ಕೃತಿ ಅಗತ್ಯವಿದೆ

ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಾಗದು. ಇದು ಬಹು ಧರ್ಮ, ಬಹು ಭಾಷೆ ಮತ್ತು ಬಹು ಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದುದು. ಪ್ರಜಾಪ್ರಭುತ್ವವನ್ನು ನಂಬಿರುವ ಯಾರೂ ಇದನ್ನು ಒಪ್ಪಲು ಸಾಧ್ಯವಿಲ್ಲ. ವೈಚಾರಿಕ ಮತ್ತು ಸಾಮಾಜಿಕ ಸಹಿಷ್ಣುತೆಯೇ ಪ್ರಜಾಪ್ರಭುತ್ವದ ಸೌಂದರ್ಯ. ಇತ್ತೀಚೆಗೆ ಅಸಹಿಷ್ಣುತೆ ಎನ್ನುವುದು ರಾಷ್ಟ್ರೀಯ ಚರ್ಚೆಯ ಕೇಂದ್ರ ಸ್ಥಾನಕ್ಕೆ ಬಂದಿದೆ.

ಪ್ರಜಾಪ್ರಭುತ್ವದ ಆಶಯಗಳಗೆ ಅನುಗುಣವಾಗಿ ಸಾಂಸ್ಕೃತಿಕವಾಗಿ ದೇಶವನ್ನು ಕಟ್ಟಲು ಪ್ರಯತ್ನಿಸುತ್ತಿರುವ ಸಾಹಿತಿಗಳು, ಕಲಾವಿದರು, ಬುದ್ಧಿಜೀವಿಗಳಿಂದ ಹಿಡಿದು ಸಾಮಾನ್ಯ ಮನುಷ್ಯನವರೆಗೆ ಎಲ್ಲರೂ ದೇಶಾದ್ಯಂತ ಅಸಹಿಷ್ಣತೆಯ ವಿರುದ್ಧ ಧ್ವನಿ ಎತ್ತತೊಡಗಿದ್ದಾರೆ. ಈ ರೀತಿ ದನಿ ಎತ್ತುವವರ ದಮನ ಕಾರ್ಯವೂ ನಡೆಯುತ್ತಿದೆ. ಅವರನ್ನು ನಿಂದಿನಿ ಹಂಗಿಸಿ ನೈತಿಕವಾಗಿ ಕುಸಿದು ಹೋಗುವಂತೆ ಮಾಡುವ ಪ್ರಯತ್ನವೂ ಮುಂದುವರೆಯುತ್ತಿದೆ. ಇದು ಪ್ರಜಾತಂತ್ರದ ನಡೆ ಅಲ್ಲ ಎಂದು ಹೇಳಿದರು.

English summary
Chief minister Siddaramaiah asserted that we should live with our own religion and should and must others religion also. He was addressing the citizens of the state through all India radio on the occasion of Republic Day on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X