Bengaluru Second Airport: 2 ನೇ ಏರ್‌ಪೋರ್ಟ್‌ಗೆ ಸ್ಥಳ ನಿಗದಿ; 2 ರಲ್ಲಿ ಯಾವ ಸ್ಥಳ ಅಂತಿಮ?
ಬೆಂಗಳೂರು, ಜೂನ್ 14: ರಾಜ್ಯ ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಆಯ್ಕೆ ಪ್ರಕ್ರಿಯೆ ತೀವ್ರಗೊಂಡಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಉನ್ನತ ಮಟ್ಟದ ತಂಡವು ಕರ್ನಾಟಕ ಸರ್ಕಾರ ಗುರುತಿಸಿದ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯ ಎರಡು ತಾಣಗಳು ಹಾಗೂ ನೆಲಮಂಗಲ-ಕುಣಿಗಲ್ ರಸ್ತೆಯ ಮತ್ತೊಂದು ಸ್ಥಳವನ್ನು ಈಗಾಗಲೇ ಪರೀಶಿಲಿಸಲಾಗಿದೆ. ಆದರೆ, ಸ್ಥಳ ಆಯ್ಕೆ ಯಾವಾಗ? ಯಾವ ಜಾಗ ಅಂತಿಮ ಎಂಬ ಬಗ್ಗೆ ಸಚಿವರಾದ ಎಂ ಬಿ ಪಾಟೀಲ್ ಅವರು ಉತ್ತರಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಎಂ ಬಿ ಪಾಟೀಲ್ ಅವರು ಮಾತನಾಡಿ, ಬೆಂಗಳೂರಿನ ಸುತ್ತಮುತ್ತ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು 15 ದಿನಗಳಲ್ಲಿ ಅಂತಿಮಗೊಳಿಸಲು ವಿಮಾನ ನಿಲ್ದಾಣ ಪ್ರಾಧಿಕಾರವು ಪರಿಶೀಲನೆ ನಡೆಸುತ್ತಿದೆ. ವಿಜಯಪುರ ವಿಮಾನ ನಿಲ್ದಾಣವು 8-10 ತಿಂಗಳಲ್ಲಿ ಕಾರ್ಯಾರಂಭವಾಗುವ ನಿರೀಕ್ಷೆಯಿದ್ದು, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಅಭಿವೃದ್ಧಿಪಡಿಸಲು ಚಿಂತಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ಬೆಂಗಳೂರಿನ ಸುತ್ತಮುತ್ತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳ ಆಯ್ಕೆ ಸಂಬಂಧ ಪರಿಶೀಲನೆ ನಡೆಸಿದ್ದ ವಿಮಾನ ನಿಲ್ದಾಣ ಪ್ರಾಧಿಕಾರವು 15 ದಿನದೊಳಗೆ ಅಂತಿಮಗೊಳಿಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರವೇ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾಗಲು ಚಿಂತನೆ ನಡೆಸಲಾಗಿದೆ ಎಂದು ಸಚಿವರಾದ ಎಂ ಬಿ ಪಾಟೀಲ್ ಅವರು ತಿಳಿಸಿದರು.
ವಿಮಾನ ನಿಲ್ದಾಣ ಪ್ರಾಧಿಕಾರವು ಸ್ಥಳ ನಿಗದಿಪಡಿಸಿದ ಬಳಿಕ ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು. ಕಾರ್ಯಸಾಧ್ಯತಾ ಅಧ್ಯಯನವನ್ನು ವೃತ್ತಿಪರವಾಗಿ ಸೂಕ್ತ ಕ್ರಮಗಳನ್ನು ವಹಿಸಲಾಗುವುದು. 15 ದಿನದೊಳಗೆ ಪ್ರಾಧಿಕಾರವು ಅಂತಿಮಗೊಳಿಸುವ ನಿರೀಕ್ಷೆ ಇದೆ ಎಂದು ಪುನರುಚ್ಚರಿಸಿದ್ದು, ಕನಕಪುರ ಸಮೀಪ ಎರಡನೇ ವಿಮಾನ ನಿಲ್ದಾಣವಾಗುವ ಸಾಧ್ಯತೆ ಇದೆ.












Click it and Unblock the Notifications