ಲಾಕ್ ಡೌನ್; ಗಾರ್ಮೆಂಟ್ಸ್‌ಗೆ ಅವಕಾಶ ಕೊಡಲು ಒತ್ತಾಯ

ಬೆಂಗಳೂರು, ಏಪ್ರಿಲ್ 27; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು 14 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮಂಗಳವಾರ ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ಇದು ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ, "ಲಾಕ್ ಡೌನ್ ಅವಧಿಯಲ್ಲಿ ಗಾರ್ಮೆಂಟ್ಸ್‌ ಹೊರತುಪಡಿಸಿ, ಉತ್ಪಾದಕ ವಲಯ, ಕೃಷಿ ವಲಯಕ್ಕೆ ಲಾಕ್ ಡೌನ್‌ನಿಂದ ವಿನಾಯಿತಿ ಇದೆ" ಎಂದು ಹೇಳಿದ್ದರು.

ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್ ಲಾಕ್ ಡೌನ್ ಅವಧಿಯಲ್ಲಿ ಗಾರ್ಮೆಂಟ್ಸ್‌ಗಳು ಸಹ ಶೇ 50ರಷ್ಟು ಉದ್ಯೋಗಿಗಳ ಜೊತೆ ಕಾರ್ಯ ನಿರ್ವಹಣೆ ಮಾಡಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದೆ.

Lockdown Allow Garment Factories To Work With 50 Per Cent Strength

ಸರ್ಕಾರ ಉತ್ಪಾದಕ ವಲಯಕ್ಕೆ ಅವಕಾಶ ನೀಡಿದೆ. ಗಾರ್ಮೆಂಟ್ಸ್‌ಗಳು ಸಹ ಶೇ 50ರಷ್ಟು ಉದ್ಯೋಗಿಗಳ ಜೊತೆಗೆ, ಕೋವಿಡ್ ಮಾರ್ಗಸೂಚಿ ಅನ್ವಯ ಕಾರ್ಯ ನಿರ್ವಹಣೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದೆ.

ಬೆಂಗಳೂರು ನಗರದಲ್ಲಿಯೇ ಸುಮಾರು 8 ಲಕ್ಷ ಗಾರ್ಮೆಂಟ್ಸ್‌ ಉದ್ಯೋಗಿಗಳು ಇದ್ದಾರೆ. ಉದ್ಯೋಗಿಗಳ ಹಿತದೃಷ್ಟಿಯಿಂದ ಗಾರ್ಮೆಂಟ್ಸ್‌ಗಳು ಸಹ ಕಾರ್ಯ ನಿರ್ವಹಣೆ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿದೆ.

ಗಾರ್ಮೆಂಟ್ಸ್‌ ಕಂಪನಿಗಳು ಈಗ ಹಲವಾರು ಆರ್ಡರ್‌ಗಳನ್ನು ಪಡೆದಿವೆ. ಅವುಗಳನ್ನು ನಿಗದಿತ ಸಮಯದಲ್ಲಿ ಪೂರೈಕೆ ಮಾಡಬೇಕಾದ ಅಗತ್ಯವಿದೆ. ಯುರೋಪಿಯನ್ ರಾಷ್ಟ್ರಗಳು ಈಗ ಆರ್ಡರ್ ಕೊಡುತ್ತಿವೆ. ಆದ್ದರಿಂದ, ಕೆಲಸ ಮಾಡಲು ಅವಕಾಶ ಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಲಾಗಿದೆ.

ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಮಂಗಳವಾರ ರಾತ್ರಿ 9 ರಿಂದ ಲಾಕ್ ಡೌನ್ ಜಾರಿಗೆ ಬರಲಿದೆ. ಗಾರ್ಮೆಂಟ್ಸ್‌ಗಳಲ್ಲಿ ಉದ್ಯೋಗಿಗಳು ಸಾಮಾಜಿಕ ಅಂತರ ಕಾಪಾಡುವುದು ಕಷ್ಟವಾಗಲಿದೆ. ಆದ್ದರಿಂದ, ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಅವಕಾಶವನ್ನು ಸರ್ಕಾರ ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+