ಲಾಕ್ ಡೌನ್ ಅಂತ್ಯ; ಬಿಎಂಟಿಸಿ, ಕೆಎಸ್ಆರ್‌ಟಿಸಿ ಸಂಚಾರ ಮಾಹಿತಿ

ಬೆಂಗಳೂರು, ಜುಲೈ 22 : ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ಒಂದು ವಾರದ ಲಾಕ್ ಡೌನ್ ಬುಧವಾರ ಮುಂಜಾನೆ ಅಂತ್ಯಗೊಂಡಿದೆ. ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್‌ ಸಂಚಾರ ಆರಂಭವಾಗಿದೆ.

Recommended Video

      America ನಂತರ Indiaದಲ್ಲಿ ಅತಿ ಹೆಚ್ಚು Covid test | Oneindia Kannada

      ಕರ್ನಾಟಕ ಸರ್ಕಾರ ಜುಲೈ 14ರಿಂದ 22ರ ಬೆಳಗ್ಗೆ 5ಗಂಟೆ ತನಕ ಲಾಕ್ ಡೌನ್ ಘೋಷಣೆ ಮಾಡಿತ್ತು. ಲಾಕ್ ಡೌನ್ ಅವಧಿ ಮುಗಿದಿದ್ದು ಇಂದಿನಿಂದ ಜನ ಜೀವನ ಸಹಜ ಸ್ಥಿತಿಗೆ ಬರಲಿದೆ. ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

      ಲಾಕ್ ಡೌನ್ ಮುಗಿದ ಹಿನ್ನಲೆಯಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಬೆಂಗಳೂರಿನಲ್ಲಿ ಆರಂಭವಾಗಿದೆ. ಬೆಂಗಳೂರು ನಗರದಿಂದ ವಿವಿಧ ಜಿಲ್ಲೆಗಳಿಗೆ ರಾತ್ರಿ 9ರ ತನಕ ಕೆಎಸ್ಆರ್‌ಟಿಸಿ ಬಸ್‌ಗಳು ಸಂಚಾರ ನಡೆಸಲಿವೆ.

      Bengaluru

      1500 ಬಸ್‌ ಸಂಚಾರ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸಂಚಾರ ಬುಧವಾರ 5 ಗಂಟೆಗೆ ಆರಂಭವಾಗಿದೆ. ಇಂದು 1500 ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಬಿಎಂಟಿಸಿ ಹೇಳಿದೆ. ಬಸ್ ನಲ್ಲಿ ಸಂಚಾರ ನಡೆಸುವ ಪ್ರಯಾಣಿಕರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು.

      ಕೆಎಸ್ಆರ್‌ಟಿಸಿ : ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಹೇಳಿದ ಬಳಿಕ ಕೆಎಸ್ಆರ್‌ಟಿಸಿ ಬಸ್ ಸಂಚಾರದ ಬಗ್ಗೆ ಮಾಹಿತಿ ನೀಡಿದೆ. ಬುಧವಾರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರು ನಗರದಿಂದ ಕೆಎಸ್ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ.

      ಬೆಂಗಳೂರು ನಗರದಲ್ಲಿ ಲಾಕ್ ಡೌನ್ ಅಂತ್ಯಗೊಂಡಿದ್ದು ಬಸ್, ಆಟೋ, ಟ್ಯಾಕ್ಸಿಗಳು ಇಂದು ರಸ್ತೆಗೆ ಇಳಿಯಲಿವೆ. ಇದರಿಂದಾಗಿ ನಗರ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+