ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ; ಅಬಕಾರಿ ಸಚಿವರು ಏನಂದ್ರು?

ಬೆಂಗಳೂರು, ಮಾರ್ಚ್ 30: ದೇಶಾದ್ಯಂತ ಲಾಕ್‌ಡೌನ್ ಜಾರಿ ಇರುವುದರಿಂದ ಎಲ್ಲ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಆದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ಮದ್ಯದ ಅಂಗಡಿಗಳನ್ನು ಕೇರಳದ ರೀತಿ ಕರ್ನಾಟಕದಲ್ಲೂ ತೆರೆಯಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ನಾಗೇಶ್ ಅವರು, ಕೇರಳದ ರೀತಿ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಡಬೇಕು ಎಂಬ ಬೇಡಿಕೆಗಳು ಬಂದಿವೆ. ಆದರೆ, ಪ್ರಸ್ತುತ ಈ ವಿಚಾರದಲ್ಲಿ ನಾನೂ ಏನೂ ಮಾತನಾಡುವುದಿಲ್ಲ ಎಂದಿದ್ದಾರೆ.

ಮದ್ಯ ಮಾರಾಟಕ್ಕೆ ಅನುವು ಮಾಡಿಕೊಡಬೇಕೋ ಬೇಡವೋ ಎಂಬುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಏನನ್ನೂ ಹೇಳುವುದಿಲ್ಲ ಆ ವಿಚಾರದಲ್ಲಿ ಎಂದು ಹೇಳಿದ್ದಾರೆ.

No Reaction For Bar And Vine Store Open Issue Says Excise Minister Nagesh

ಮದ್ಯ ಸಿಗದೇ ರಾಜ್ಯದಲ್ಲಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಕೇರಳದ ರೀತಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಹಾಕಿ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಡಬೇಕು ಎಂಬ ಕೂಗು ಕೇಳಿ ಬಂದಿದೆ. ಆದರೆ, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಲ್ಲಿಯವರೆಗೆ 87 ಜನಕ್ಕೆ ಸೋಂಕು ತಗುಲಿರುವುದು ಖಚಿತವಾಗಿದೆ. ಮೂವರು ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+