ಬೆಂಗಳೂರು ಲಾಕ್ ಡೌನ್; ಕೆಎಸ್ಆರ್ಟಿಸಿ ಬಸ್ಗಳಿಲ್ಲ
ಬೆಂಗಳೂರು, ಜುಲೈ 14 : ಕರ್ನಾಟಕ ಸರ್ಕಾರದ ಆದೇಶದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ಬಂದಿದೆ. ಎರಡೂ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮಂಗಳವಾರ ರಾತ್ರಿ 8ರಿಂದ ಜುಲೈ 22ರ ಬೆಳಗ್ಗೆ 5 ಗಂಟೆಯ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಸ್ಗಳು ಸಂಚಾರ ನಡೆಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಅವಧಿಯಲ್ಲಿ ಬೆಂಗಳೂರು ನಗರದಿಂದ ವಿವಿಧ ಸ್ಥಳಗಳಿಗೆ ಮತ್ತು ಇತರೆ ಸ್ಥಳಗಳಿಂದ ಬೆಂಗಳೂರಿಗೆ ಬರುವ ಬಸ್ಸುಗಳ ಮುಂಗಡ ಟಿಕೆಟ್ ಬುಕ್ಕಿಂಗ್ಗಳನ್ನು ರದ್ದುಪಡಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಹೇಳಿದೆ.
ಕೆಎಸ್ಆರ್ಟಿಸಿ ಸೂಚನೆಗಳು
* ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ.
* ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಡಳಿತದ ಆದೇಶದನ್ವಯ ಬಸ್ಗಳ ಸಂಚಾರ ಇರುತ್ತದೆ.
* ಮಂಗಳವಾರ ರಾತ್ರಿ 8 ಗಂಟೆಯ ತನಕ ಒಟ್ಟು 1300 ಬಸ್ ಬೆಂಗಳೂರಿನಿಂದ ಸಂಚಾರಗೊಳಿಸಿದೆ. 26,000 ಪ್ರಯಾಣಿಕರು ಈಗ ಪ್ರಯಾಣ ಬೆಳೆಸಿದ್ದಾರೆ.
* ಪ್ರಮುಖ ಸ್ಥಳಗಳಾದ ಹೊಸದುರ್ಗ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬಳ್ಳಾರಿ, ಯಾದಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸಂಚಾರ ನಡೆಸಿವೆ.
* ಇಂದು 160 ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿವೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ಹುಬ್ಬಳ್ಳಿ-ಗದಗ ಮಧ್ಯೆ ತಡೆರಹಿತ 'ರಾಜಹಂಸ' ಬಸ್ ಸೇವೆ ಆರಂಭ, ಟಿಕೆಟ್ ದರವೆಷ್ಟು-ವೇಳಾಪಟ್ಟಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್












Click it and Unblock the Notifications