ಲಾಕ್‌ಡೌನ್ ತೆರವು; ಬಿಬಿಎಂಪಿಗೆ ಶುರುವಾಯಿತು ಪರಿಸರ ಮಾಲಿನ್ಯದ ಆತಂಕ
ಬೆಂಗಳೂರು, ಮೇ 14: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಸಂಬಂಧ ಕೂಡಲೇ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮೇಯರ್ ಎಂ ಗೌತಮ್ ಕುಮಾರ್ ತಿಳಿಸಿದ್ದಾರೆ.
Recommended Video
ಪರಿಸರ ಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಂಗಳವಾರ ಪಾಲಿಕೆ ಕೇಂದ್ರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್-19 ಹಿನ್ನೆಲೆ ಲಾಕ್‌ಡೌನ್ ಜಾರಿಯಲ್ಲಿದ್ದ ವೇಳೆ ಕೈಗಾರಿಗೆಗಳು ಸ್ಥಗಿತವಾಗಿದ್ದ ಪರಿಣಾಮ ಮಲಿನ ನೀರು ಕೆರೆಗಳಿಗೆ ಸೇರದೆ ಶುಚಿತ್ವವಾಗಿರುವುದನ್ನು ಕಾಣಬಹುದಾಗಿದೆ ಎಂಬ ಅಭಿಪ್ರಾಯವನ್ನು ಮೇಯರ್ ವ್ಯಕ್ತಪಡಿಸಿದರು.

ಎಲ್ಲ ಪ್ರಕಾರದ ಪರಿಸರ ಮಾಲಿನ್ಯ ತಡೆಗಟ್ಟಬೇಕು
ಎಲ್ಲ ಪ್ರಕಾರದ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಲಮಂಡಳಿ, ಬಿಡಿಎ, ಪೊಲೀಸ್ ಹಾಗೂ ಬೆಸ್ಕಾಂ ಇಲಾಖೆಗಳ ಸಮನ್ವತೆಯಿಂದ ಕಾರ್ಯನಿರ್ವಹಿಸಿ ಪರಿಸರ ಮಾಲಿನ್ಯ ಆಗುವುದನ್ನು ತಡೆಯಲು ಸೂಕ್ತ ಕ್ರಮ ವಹಿಸಬೇಕಿದೆ ಎಂದು ಅಧಿಕಾರಿಗಳಿಗೆ ಮೇಯರ್ ಹೇಳಿದರು.

ಕೆರೆಗಳು ಹಾಳಾಗುತ್ತಿವೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ವೃಷಭಾವತಿ ವ್ಯಾಲಿ, ಹೆಬ್ಬಾಳ ವ್ಯಾಲಿ, ಚೆಲ್ಲಘಟ್ಟ ಹಾಗೂ ಕೋರಮಂಗಲ ವ್ಯಾಲಿ ಮತ್ತು ನೀರುಗಾಲುವೆಗಳಿಗೆ ಕೈಗಾರಿಕೆಗಳು ಮಲಿನ ರಾಸಾಯನಿಕ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೆರೆಗಳು ಹಾಳಾಗುತ್ತಿವೆ ಎಂದು ಮೇಯರ್ ಹೇಳಿದರು.

ಕಾರ್ಖಾನೆಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು
ಪರಿಸರ ಹಾಗೂ ಕೆರೆಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಕೈಗಾರಿಕೆಗಳಿಂದ ರಾಸಯನಿಕಯುಕ್ತ ನೀರನ್ನು ಸಂಸ್ಕರಿಸದೆ ಕಲುಷಿತ ನೀರನ್ನು ಕೆರೆಗಳಿಗೆ ಬಿಟ್ಟರೆ ಅಂತಹ ಕಾರ್ಖಾನೆಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದರು.

ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ವಿಜಯ್ ಕುಮಾರ್ ಗೋಗಿ ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆ, ಲಾಕ್‌ಡೌನ್ ಆಗಿದ್ದರಿಂದ ಕೈಗಾರಿಕೆಗಳು, ಹೋಟೆಲ್‌ಗಳು, ಉದ್ಯಮಗಳು ಕಾರ್ಯನಿರ್ವಹಿಸದ ಪರಿಣಾಮ ವಿಷಪೂರಿತ ಹೊಗೆ ಪರಿಸರಕ್ಕೆ ಸೇರುವ ಪ್ರಮಾಣ ಕಡಿಮೆಯಾಗಿದ್ದು, ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications