ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೇಜಸ್ವಿನಿ ಅನಂತ ಕುಮಾರ್ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 26: ಲೋಕಸಭೆಗೆ ಬಿಜೆಪಿಯಿಂದ ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿ ಸೂರ್ಯ ಅಭ್ಯರ್ಥಿ ಎಂದು ಘೋಷಣೆಯಾಗುತ್ತಿದ್ದಂತೆ. ಬೆಳಗ್ಗೆಯೇ ದಿವಂಗತ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈಗಾಗಲೇ ಟ್ವಿಟ್ಟರ್‌ನಲ್ಲಿ ಅವರು ಬರೆದುಕೊಂಡಿರುವಂತೆ ಅನಂತ ಕುಮಾರ್ ಅವರನ್ನು ರಾಜಕೀಯ ಗುರು ಎಂದೇ ಅಂದುಕೊಂಡಿರುವ ತೇಜಸ್ವಿಯವರು ಮೊದಲು ತೇಜಸ್ವಿನಿ ಅನಂತ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದೇಕೆ? ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದೇಕೆ?

ರಾಜ್ಯದ ಬಿಜೆಪಿ ನಾಯಕರಾದ ಆರ್ ಅಶೋಕ್ ಸೇರಿದಂತೆ ಹಲವರು ಕೆಲ ದಿನಗಳ ಹಿಂದೆ ಬೆಂಗಳೂರು ದಕ್ಷಿಣದ ಅಭ್ಯರ್ಥಿಯಾಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ನಿಲ್ಲಿಸಬೇಕು, ಕೇಂದ್ರ ನಾಯಕರಿಗೆ ಮನದಟ್ಟು ಮಾಡಿ ಟಿಕೆಟ್ ಗಿಟ್ಟಿಸುತ್ತೇವೆ ಎಂದು ಹೇಳಿದಾಗ ನಾನು ಕೂಡ ಖುಷಿಪಟ್ಟಿದ್ದೆ.

Lok sabha BJP candidate Tejasvi surya met Tejaswini and praised late Ananth kumar

ಆದರೆ ಇದೀಗ ಪಕ್ಷದ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧಾರ ಮಾಡಿ ನನ್ನನ್ನು ನಿಲ್ಲಿಸಿದ್ದಾರೆ, ಇದು ಯಾಕಾಯಿತು, ಹೇಗಾಯಿತು ಎಂದು ನನಗೂ ಗೊತ್ತಿಲ್ಲ. ಪಕ್ಷದ ನಾಯಕರು ನೀಡಿದ ಜವಾಬ್ದಾರಿಯನ್ನು ಸರಿಯಾಗಿ ಪಾಲಿಸಬೇಕೆನ್ನುವುದಷ್ಟೇ ನನ್ನ ಉದ್ದೇಶ ಎಂದು ಹೇಳಿದರು.

ತೇಜಸ್ವಿನಿಗೆ ತಪ್ಪಿದ ಟಿಕೆಟ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ತೇಜಸ್ವಿನಿಗೆ ತಪ್ಪಿದ ಟಿಕೆಟ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ

ನನಗಂತೂ ಯಾರೂ ಅಭ್ಯರ್ಥಿಯಾಗುತ್ತೀರಿ ಎಂದು ಸೂಚನೆ ಬಂದಿರಲಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನವೇ ಬಿಜೆಪಿಯಲ್ಲಿ ಮುಖ್ಯವಾಗಿರುತ್ತದೆ. ನಾನು ಈ ಸಂದರ್ಭದಲ್ಲಿ ದಿವಂಗತ ಕೇಂದ್ರ ಸಚಿವ ಅನಂತ ಕುಮಾರ್ ಅವರನ್ನು ಸ್ಮರಿಸುತ್ತಾ ತೇಜಸ್ವಿನಿ ಅನಂತ ಕುಮಾರ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

ವ್ಯಕ್ತಿ ಚಿತ್ರ: ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವ್ಯಕ್ತಿ ಚಿತ್ರ: ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ

30 ವರ್ಷಗಳ ಹಿಂದೆ ಆರ್ ಎಸ್ಎಸ್ ಕಾರ್ಯಕರ್ತರಾಗಿದ್ದ ಅನಂತ ಕುಮಾರ್ ಅವರು ಯುವ ನಾಯಕರಾಗಿ ಬಿಜೆಪಿಯಲ್ಲಿ ಕೆಲಸ ಮಾಡಿ ಬೆಳೆದು ನನ್ನಂತಹ ಸಾವಿರಾರು ಕಾರ್ಯಕರ್ತರನ್ನು ಹುಟ್ಟುಹಾಕಿದರು. ನನ್ನನ್ನು ತೇಜಸ್ವಿನಿ ಅವರು ತುಂಬು ಹೃದಯದಿಂದ ಹಾರೈಸಿದ್ದಾರೆ ಎಂದರು.

English summary
Lok sabha elections 2019: Bengaluru south BJP candidate Tejasvi Surya met Tejaswini Ananthkumar. He praised the role of Ananth kumar in his political career.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X