BBMP: ಲೋಕಸಭಾ ಚುನಾವಣೆ: ಸ್ವಿಪ್ ಚಟುವಟಿಕೆ ಅನುಷ್ಠಾನಕ್ಕೆ ಸೂಚನೆ
ಬೆಂಗಳೂರು, ಫೆಬ್ರವರಿ 17: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನೇ ದಿನೆ ಹೆಚ್ಚಾಗುತ್ತಿದೆ. ಈ ಸಂಬಂಧ ರಾಜ್ಯ ಚುನಾವಣೆ ಆಯೋಗವು ಹೈ ಅಲರ್ಟ್ ಆಗಿದೆ. ಮತದಾರರ ಪಟ್ಟಿ ಕುರಿತು ವಿವಿಧ ಕಾರ್ಯಕ್ರಮ ರೂಪಿಸಲು ಅಧಿಕಾರಿಗಳು ಸೂಚಿಸಿದೆ. ಅಲ್ಲದೇ 'ಸ್ವಿಪ್ ಕಾರ್ಯಚಟುವಟಿ' ಪರಿಣಾಮಕಾರಿ ಅನುಷ್ಠಾನಕ್ಕೆ ತರುವಂತೆ ಹೇಳಿದೆ.
ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಹಿನ್ನಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಮತದಾರರನ್ನು ಜಾಗೃತಿಗೊಳಿಸಲು ಶನಿವಾರ ಸಭೆ ನಡೆಯಿತು.

ಇದೇ ವೇಳೆ ಬಿಬಿಎಂಪಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ವಿಶೇಷ ಚೇತನರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು ಹಾಗೂ ವಲಸೆ ಕಾರ್ಮಿಕರು ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆಗೊಳ್ಳುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉತ್ತಮ ಯೋಜನೆಗಳನ್ನು ರೂಪಿಸಿಕೊಳ್ಳೂವಂತೆ ಸೂಚಿಸಿದರು.
28 ಕ್ಷೇತ್ರಗಳಲ್ಲಿ ಸ್ವಿಪ್ ಚಟುವಟಿಕೆಗೆ ಕ್ರಮ
ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆ- 2023ರಲ್ಲಿ ಎಲ್ಲಾ 28 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರಾಸರಿ ಮತದಾನಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ ಆ ಭಾಗದಲ್ಲಿ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು ಸ್ವಿಪ್ ಚಟುವಟಿಕೆಗಳನ್ನು ನಡೆಸುವ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಸರಾಸರಿ ಮತದಾನಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚು ಅಪಾರ್ಟ್ಮೆಂಟ್ ಪ್ರದೇಶವಾಗಿದ್ದರೆ, ಅದಕ್ಕೆ ಸಂಬಂಧಪಟ್ಟ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿಗಳನ್ನು ಭೇಟಿಯಾಗಿ ಅವರಲ್ಲಿ ಅರಿವು ಮೂಡಿಸಿ ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಪ್ರೇರೇಪಿಸಬೇಕು ಎಂದರು.

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ
ಅಪರ ಜಿಲ್ಲಾ ಚುನಾವಣಾಧಿಕಾರಿಗಳು(ಕೇಂದ್ರ/ಉತ್ತರ/ದಕ್ಷಿಣ/ಬೆಂಗಳೂರು ನಗರ) ತಮ್ಮ ವ್ಯಾಪ್ತಿಗೆ ಬರುವ ವಿಧಾನಸಭಾ ಕೇತ್ರಗಳ ಡೇಡಿಕೆಟೆಡ್ ಸಹಾಯಕ ಮತದಾರರ ನೊಂದಣಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಿ ಮತದಾನದ ಪ್ರಮಾಣ ಹೆಚ್ಚಿಸುವಂತೆ ಅವರು ನಿರ್ದೇಶಿಸಿದರು.
ಸಭೆಯಲ್ಲಿ ಚುನಾವಣಾ ವಿಶೇಷ ಆಯುಕ್ತರಾದ ಸೆಲ್ವಮಣಿ, ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜು, ಪಾಲಿಕೆಯ ಕೇಂದ್ರ, ಉತ್ತರ, ದಕ್ಷಿಣ ವ್ಯಾಪ್ತಿಯ ಅಧಿಕ ಜಿಲ್ಲಾ ಚುನಾವಣಾಧಿಕಾರಿಗಳು, Sveep ನೋಡಲ್ ಅಧಿಕಾರಿ ಹಾಗೂ ಜಂಟಿ ಆಯುಕ್ತರು ಘನತ್ಯಾಜ್ಯ ನಿರ್ವಹಣೆ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.












Click it and Unblock the Notifications