Lok Sabha Election 2024: ಬೆಂಗಳೂರು ಕೇಂದ್ರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಮೋಹನ್ ಎದುರು ಅಲಿಖಾನ್ ಮಾಡ್ತಾರಾ ಕಮಾಲ್?
ಬೆಂಗಳೂರು,ಮಾರ್ಚ್ 23: ನಾಡಿನ ಶಕ್ತಿಕೇಂದ್ರ ವಿಧಾನಸೌಧ ಸುತ್ತ ವ್ಯಾಪಿಸಿಕೊಂಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಅಧಿಪತಿ ಯಾರು ಎಂಬ ಕುತೂಹಲ ಹೆಚ್ಚಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಜಾತಿ, ಧರ್ಮ, ಭಾಷೆ ಎಲ್ಲವೂ ಮೀರಿ ಫಲಿತಾಂಶ ಬಂದಿದೆ. ಈ ಬಾರಿಯೂ ಅಂತಹ ಕೌತುಕ ಬೆಂಗಳೂರು ಕೇಂದ್ರ ಕ್ಷೇತ್ರ ಕಾಪಾಡಿಕೊಂಡಿದೆ. ಬಿಜೆಪಿ ಹಾಲಿ ಸಂಸದ ಪಿ ಸಿ ಮೋಹನ ಮತ್ತೊಮ್ಮೆ ಜಯ ದಾಖಲಿಸಲು ಕಸರತ್ತು ನಡೆಯುತ್ತಿದೆ. ಇತ್ತ ಕಾಂಗ್ರೆಸ್ ಮನ್ಸೂರ್ ಅಲಿಖಾನ್ ಅವರಿಗೆ ಟಿಕೆಟ್ ನೀಡಿದೆ. ಹಾಗಾದ್ರೆ ಈ ಬಾರಿ ಬೆಂಗಳೂರು ಕೇಂದ್ರದ ರಣ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.
2008 ರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತು. ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕೆಲವು ಕ್ಷೇತ್ರಗಳನ್ನು ವಿಭಜಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಸೃಷ್ಟಿ ಆಯಿತು. 2009ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಎಚ್. ಟಿ ಸಾಂಗ್ಲಿಯಾನ ವಿರುದ್ದ ಬಿಜೆಪಿ ಪಿಸಿ ಮೋಹನ್ 35 ಸಾವಿರ ಮತಗಳ ಅಂತರದಿಂದ ಜಯ ದಾಖಲಿಸಿದ್ದರು. 2014 ಮತ್ತು 2019 ರ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ವಿರುದ್ದ ಪಿ ಸಿ ಮೋಹನ್ ಜಯಗಳಿಸಿದ್ದಾರೆ.

ಇನ್ನೂ, ಇದೀಗ 2024ರ ಚುನಾವಣೆಯಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಹಾಲಿ ಸಂಸದರಾದ ಪಿಸಿ ಮೋಹನ್ ರೆಡಿಯಾಗಿದ್ದಾರೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಮುಸ್ಲಿಂ ನಾಯಕ ಮನ್ಸೂರ್ ಅಲಿಖಾನ್ ಅವರನ್ನ ಕಣಕ್ಕಿಳಿಸಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಬಿಜೆಪಿ ಹಾಗೂ ಕಾಂಗ್ರೆಸ್ ಹಲವು ತಂತ್ರಗಾರಿಕೆಯನ್ನ ನಡೆಸಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರ ಕೋಟೆ. ಈ ಕ್ಷೇತ್ರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ ಶಾಸಕರೇ ಇದ್ದಾರೆ. ಇನ್ನೂ ಐವರು ಕಾಂಗ್ರೆಸ್ ಶಾಸಕರ ಫೈಕಿ ನಾಲ್ವರು ಸಿದ್ದರಾಮಯ್ಯ ಅವರ ಸಂಪುಟದ ಸಚಿವರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಅಲೆಯಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳು ಕಾಂಗ್ರೆಸ್ ಪಾಲಾಗಿದ್ದು, ಅದೇ ಹುಮ್ಮಸ್ಸಿನಲ್ಲಿ ಲೋಕಸಭಾ ಕ್ಷೇತ್ರವನ್ನೂ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸರ್ವಜ್ಞ ನಗರ, ಶಿವಾಜಿನಗರ, ಶಾಂತಿನಗರ, ಗಾಂಧಿನಗರ, ಚಾಮರಾಜಪೇಟೆ, ಈ ಐದೂ ಕ್ಷೇತ್ರಗಳಲ್ಲಿ ಕೆಜೆ ಜಾರ್ಜ್, ರಿಜ್ವಾನ್ ಅರ್ಷದ್, ಹ್ಯಾರಿಸ್, ಮತ್ತು ಗುಂಡೂರಾವ್, ಕೆ ಜೆ ಜಾರ್ಜ್, ಜಮೀರ್ ಅಹಮದ್ ಅಂತಹಾ ಕಾಂಗ್ರೆಸ್ ನ ಘಟಾನುಘಟಿಗಳು ಶಾಸಕರಾದ್ರೆ, ಮೂರು ಕ್ಷೇತ್ರಗಳಾದ ಸಿವಿ ರಾಮನ್ ನಗರದಲ್ಲಿ ಎಸ್ ರಘು , ರಾಜಾಜಿನಗರದಲ್ಲಿ ಸುರೇಶ್ ಕುಮಾರ್, ಮಹದೇವಪುರದಲ್ಲಿ ಮಂಜುಳಾ ಲಿಂಬಾವಳಿ ಬಿಜೆಪಿಯ ಶಾಸಕರಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಈ ಕ್ಷೇತ್ರವನ್ನ ಪಡೆಯುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಈ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಐದೂವರೆ ಲಕ್ಷ ತಮಿಳಿಗರು, ನಾಲ್ಕೂವರೆ ಲಕ್ಷ ಮುಸಲ್ಮಾನರು, ಎರಡು ಲಕ್ಷ ಕ್ರೈಸ್ತರು ಮತದಾರರಾಗಿದ್ದಾರೆ. 2019 ರ ಚುನಾವಣಾ ಸಮೀಕ್ಷೆ ಪ್ರಕಾರ ಈ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2204817. ಚಿಕ್ಕಪೇಟೆ ಮತ್ತು ಗಾಂಧಿ ನಗರದಲ್ಲಿ ಗುಜರಾತಿಗಳು ಮತ್ತು ಮಾರವಾಡಿಗಳ ಸಂಖ್ಯೆ ಹೆಚ್ಚಾಗಿದೆ. ಶಿವಾಜಿನಗರ ಚಾಮರಾಜಪೇಟೆಯಲ್ಲಿ ಮುಸಲ್ಮಾನರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇದೆ. ವಿವಿಧ ವ್ಯಾಪಾರ ಇವರ ಪ್ರಮುಖ ಆದಾಯದ ಮೂಲ. ಶಿವಾಜಿನಗರ, ಗಾಂಧಿನಗರ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲ ಮತದಾರರನ್ನು ಹೊಂದಿರುವ ಕ್ಷೇತ್ರಗಳಾಗಿವೆ.
ಇನ್ನೂ ಬಿಜೆಪಿಯ ಹಾಲಿ ಸಂಸದ ಪಿಸಿ ಮೋಹನ್ ಕ್ಷೇತ್ರದ ಮೇಲೆ ಸಂಪೂರ್ಣ ಹಿಡಿತವನ್ನ ಹೊಂದಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಾಗಿತ್ತು. ಹೀಗಾಗಿ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ವಿರುದ್ದ ಪಿ ಸಿ ಮೋಹನ್ ಜಯಗಳಿಸಿದ್ದರು. ಬೆಂಗಳೂರು ಕೇಂದ್ರದಲ್ಲಿ ಜೆಡಿಎಸ್ ಕೇವಲ ಆಟಕ್ಕುಂಟು ಲೆಕ್ಕಕ್ಕಿಲ್ಲ . ಈ ಸಲ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಕೂಡಾ ಅದೇನೂ ಅಷ್ಟರ ಮಟ್ಟಿಗೆ ಪರಿಣಾಮ ಬೀರುವಂತಿಲ್ಲ. ನಟ ಪ್ರಕಾಶ್ ರೈ ಕಳೆದ ಸಲ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರಾದ್ರೂ ಮೋದಿ ಅಲೆಯಲ್ಲಿ ಅವರು ಮೂರನೆಯ ಸ್ಥಾನದಲ್ಲಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಪಿಸಿ ಮೋಹನ್ ಗೆ ಟಿಕೆಟ್ ಸಿಕ್ಕಿದ್ದು, ಕಾಂಗ್ರೆಸ್ ನಿಂದ ಮನ್ಸೂರುಅಲಿಖಾನ್ ಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಎನ್ನುವ ನಿಯಮ ಮಾಡಿಕೊಂಡ ಕಾಂಗ್ರೆಸ್, ಮುಸ್ಲಿಂ ನಾಯಕರನ್ನೇ ಕಣಕ್ಕಿಳಿಸಿದ್ದು, ಈ ಬಾರಿಯ ಫಲಿತಾಂಶ ಅತ್ಯಂತ ಕುತೂಹಲ ಮೂಡಿಸಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭದ್ರವಾದ ಮತ ಬ್ಯಾಂಕ್ ಹೊಂದಿದೆ. ಕಾಂಗ್ರೆಸ್ ಕೂಡಾ ತನ್ನ ಸಾಂಪ್ರದಾಯಿಕ ಮತಗಳಾದ ನಾಲ್ಕೂವರೆ ಲಕ್ಷ ಅಲ್ಪ ಸಂಖ್ಯಾತರ ಮತಗಳನ್ನು ನೆಚ್ಚಿಕೊಂಡಿದೆ. ಜೊತೆಗೆ ಐದು ಜನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರಿದ್ದಾರೆ. ಆ ಶಾಸಕರು ಮುಂದೆ ನಿಂತು ಅಭ್ಯರ್ಥಿಯನ್ನ ಗೆಲ್ಲಿಸುತ್ತಾರೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮನ್ಸೂರುಅಲಿಖಾನ್ ಅವರಿಗೆ ಟಿಕೆಟ್ ನೀಡಿದೆ . ಚಿಕ್ಕಪೇಟೆ, ಗಾಂಧಿನಗರ, ಶಿವಾಜಿ ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎನ್ನುವ ಆರೋಪ ಪಿಸಿ ಮೋಹನ್ ಹೊಂದಿದ್ದಾರೆ. ಮೋದಿ ಪರ ಅಲೆಯಲ್ಲಿ ಮತ್ತೊಮ್ಮೆ ಜಯ ದಾಖಲಿಸಲು ಪಿಸಿ ಮೋಹನ್ ಉಮ್ಮಸ್ಸಿನಲ್ಲಿದ್ದರೇ, ಇತ್ತ ಗ್ಯಾರಂಟಿಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವನ್ನ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾ ಎಂಬುದನ್ನ ಕಾದುನೋಡ್ಬೇಕಾಗಿದೆ.
2019 ರಲ್ಲಿ ಅಭ್ಯರ್ಥಿಗಳು ಪಡೆದ ಮತಗಳು
* ಪಿಸಿ ಮೋಹನ್ 601170
* ರಿಜ್ವಾನ್ ಕಾಂಗ್ರೆಸ್ 531196
* ಪ್ರಕಾಶ್ ರಾಜ್ ಸ್ವತಂತ್ರ 28822
2014ರಲ್ಲಿ ಅಬ್ಯರ್ಥಿಗಳು ಪಡೆದ ಮತಗಳು
* ಪಿಸಿ ಮೋಹನ್ 556710
* ರಿಜ್ವಾನ್ ಕಾಂಗ್ರೆಸ್ 419476
* ನಂದಿನಿ ಆಳ್ವ ಜೆಡಿಎಸ್ 20357
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳು
1.ಶಿವಾಜಿನಗರ - ರಿಜ್ವಾನ್ ಅರ್ಷದ್.
2. ಗಾಂಧಿನಗರ - ದಿನೇಶ್ ಗುಂಡೂರಾವ್
3. ಚಾಮರಾಜಪೇಟೆ - ಜಮೀರ್ ಅಹಮದ್ ಖಾನ್
4. ಶಾಂತಿನಗರ - ಹ್ಯಾರಿಸ್
5. ರಾಜಾಜಿ ನಗರ - ಸುರೇಶ್ ಕುಮಾರ್
6. ಸರ್ವಜ್ಞ ನಗರ - ಕೆ ಜೆ ಜಾರ್ಜ್.
7. ಸಿ ವಿ ರಾಮನ್ ನಗರ - ರಘು
8.ಮಹದೇವಪುರ - ಮಂಜುಳಾ ಲಿಂಬಾವಳಿ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications