ಲೋಕಸಭಾ ಚುನಾವಣೆ 2024: ಬೆಂಗಳೂರು ಮತ ಎಣಿಕೆ ಕೇಂದ್ರಗಳ ಸ್ಥಿತಿಗತಿ

ಬೆಂಗಳೂರು, ಮಾರ್ಚ್ 02: ಲೋಕಸಭಾ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆ ಆಗಲಿದೆ. ವಿವಿಧ ಪಕ್ಷಗಳು ಟಿಕೆಟ್ ಫೈನಲ್ ಮಾಡುತ್ತಿವೆ. ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವ ಪ್ರಯುಕ್ತ ಬೆಂಗಳೂರಿನಲ್ಲಿ ಎಷ್ಟು ಮತ ಎಣಿಕೆ ಕೇಂದ್ರಗಳ ಅಪ್ಡೇಟ್ ಮಾಹಿತಿ ಬಿಬಿಎಂಪಿ ಕೊಟ್ಟಿದೆ.

ಮುಂಬರುವ ಲೋಕಸಭಾ ಚುನಾವಣೆ-2024ಕ್ಕೆ ನಿಗಧಿಪಡಿಸಲಾಗಿರುವ ಮತ ಎಣಿಕೆ ಕೇಂದ್ರಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಪರಿಶೀಲಿಸಿದರು.

Lok Sabha Election 2024 Bengaluru Countig Center Current Situation Inspect BBMP Chief

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟು ಮೂರು ಲೋಕಸಭಾ ಕ್ಷೇತ್ರಗಳಿವೆ. ಇವುಗಳಿಗೆ ಮೂರು ಮತ ಎಣಿಕೆ ಕೇಂದ್ರಗಳಿವೆ. ಚುನಾವಣಾ ಆಯೋಗದ ನಿರ್ದೇಶನದಂತೆ ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಇಂದು ಮೂರು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿದ್ಧತೆ, ಆಯೋಗದ ನಿಯಮ ಪಾಲನೆಗೆ ಸೂಚನೆ

ಲೋಕಸಭಾ ಚುನಾವಣೆಯ ಸಂಬಂಧ ಮತ ಎಣಿಕೆ ಕೇಂದ್ರಗಳ ಬಳಿ‌ ಏನೆಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಚಾಚು ತಪ್ಪದೆ ಪಾಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮತ ಎಣಿಕೆ ಕೇಂದ್ರಗಳು ಯಾವ ರೀತಿ ಇರಬೇಕು, ಬ್ಯಾರಿಕೇಟ್ ಅನ್ನು ಯಾವ ರೀತಿ ಅಳವಡಿಸಬೇಕು, ಆರ್.ಒ‌ ಕಛೇರಿ, ಮಾಧ್ಯಮ ಕೇಂದ್ರ ಸ್ಥಾಪನೆ, ಅಧಿಕಾರಿಗಳು ಹಾಗೂ‌ ನಾಗರೀಕರು ಹೋಗುವ/ಬರುವ ವ್ಯವಸ್ಥೆ, ಮೂರು ಹಂತದ ಭದ್ರತೆ, ಸ್ಟ್ರಾಂಗ್ ರೂಂ, ಮತ ಎಣಿಕೆ ಕೊಠಡಿಗಳಲ್ಲಿ ಟೇಬಲ್ ಗಳ ಅಳವಡಿಕೆ, ಸಿಸಿ‌ ಟಿವಿ ಅಳವಡಿಕೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳು ಸರಿಯಾದ ಕ್ರಮದಲ್ಲಿರಬೇಕೆಂದು ನಿರ್ದೇಶಿಸಿದರು.

ಈ ಬಾರಿಯ ಲೋಕ ಸಭಾ ಚುನಾವಣೆಯು ಯಾವುದೇ ಗೊಂದಲಗಳಿಗೆ ಆಸ್ಪದ ನೀಡಲು ಅವಕಾಶ ನೀಡಬಾರದು. ಯಾವುದೆ ತೊಂದರೆಗಳಿಲ್ಲದೆ ಸುಸೂತ್ರವಾಗಿ‌ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

Lok Sabha Election 2024 Bengaluru Countig Center Current Situation Inspect BBMP Chief

ಮೂರು ಮತ ಎಣಿಕೆ ಕೇಂದ್ರಗಳ ಮಾಹಿತಿ
* ಬೆಂಗಳೂರು ಕೇಂದ್ರ: ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರ, ಬೆಂಗಳೂರು.
* ಬೆಂಗಳೂರು ನಗರ : ಸೆಂಟ್ ಜೋಸೆಫ್ ಕಾಲೇಜು, ಮಲ್ಯ ರಸ್ತೆ, ಬೆಂಗಳೂರು.
* ಬೆಂಗಳೂರು ದಕ್ಷಿಣ : ಎಸ್.ಎಸ್.ಎಂ.ಆರ್.ವಿ ಕಾಲೇಜು, 9ನೇ ಬ್ಲಾಕ್, ಜಯನಗರ, ಬೆಂಗಳೂರು.

ಪರಿಶೀಲನೆಯ ವೇಳೆ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ಡಾ. ದಯಾನಂದ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+