Yathindra Siddaramaiah: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ ಬಿಜೆಪಿ
ಬೆಂಗಳೂರು, ಮಾರ್ಚ್ 31: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಇದೇ ವೇಳೆ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಪ್ರಚಾರದಲ್ಲಿ ಪರ ವಿರೋಧ ಚರ್ಚೆಗಳು, ಭಾಷಣಗಳು ಕೇಳಿ ಬರುತ್ತಲೇ ಇದೆ. ಬಿಜೆಪಿಗರು ಕಾಂಗ್ರೆಸ್ ಮೇಲೆ, ಕಾಂಗ್ರೆಸ್ಸಿಗರು ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ.
ಹೀಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದಾರೆ ಎಂದು ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿದ್ದಾರೆ. ಇಷ್ಟೇ ಅಲ್ಲದೆ, ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಾರ್ಚ್ 29ರ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿಯ ರಾಜ್ಯ ಘಟಕವು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆರೋಪ ಹೊರಿಸಿದೆ. ಚುನಾವಣಾ ಆಯೋಗ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಯತೀಂದ್ರ ಸಿದ್ದರಾಮಯ್ಯ ಮಾದರಿ ನೀತಿ ಸಂಹಿತೆ ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದೆ.

"ಇದು ನಮ್ಮ ನಾಯಕರ ಮೇಲಿನ ವೈಯಕ್ತಿಕ ದಾಳಿ. ಯತೀಂದ್ರ ಸಿದ್ದರಾಮಯ್ಯ ಅವರು ಖಂಡನೀಯ ಹೇಳಿಕೆ ನೀಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೇಲೆ ನಡೆದ ವೈಯಕ್ತಿಕ ದಾಳಿ" ಎಂದು ಬಿಜೆಪಿ ಪತ್ರದಲ್ಲಿ ಉಲ್ಲೇಖಿಸಿದೆ.
ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ ಅವರು, ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್‌ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಮೋದಿ ರಾಜಕೀಯ ಮಾಡಿದ್ದಾರೆ" ಎಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ನಾಯಕರು ಹೇಳಿಕೆಯನ್ನು ಖಂಡಿಸಿದ್ದು, ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಪುತ್ರನಾಗಿ ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ, ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.
ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ "ನಮ್ಮ ಹಿರಿಯ ನಾಯಕರಾದ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ರವರ ಬಗ್ಗೆ ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆ ಖಂಡನಾರ್ಹ ಮಾತ್ರವಲ್ಲ, ತೀರಾ ಕೀಳು ಮಟ್ಟದ್ದಾಗಿದೆ. ಒಬ್ಬ ಮಾಜಿ ಶಾಸಕರಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮಗನಾಗಿ ಕನಿಷ್ಠ ಘನತೆಯನ್ನೂ ಕೂಡ ಅವರು ಮರೆತಂತಿದೆ" ಎಂದಿದ್ದರು.
"ಮೈಸೂರು ಹಾಗೂ ಕರ್ನಾಟಕದ ಇನ್ನಿತರ ಭಾಗಗಳಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಚ್ಚಳವಾಗಿದ್ದು, ಹತಾಶೆಯಿಂದ ಯತೀಂದ್ರ ಅವಹೇಳನಕಾರಿ ಪದ ಪ್ರಯೋಗಕ್ಕೆ ಮುಂದಾಗಿದ್ದಾರೆ. ದೇಶದ ಗೃಹ ಸಚಿವರ ಕುರಿತಾದ ಅವರ ಕೀಳು ಮಟ್ಟದ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಅವರು ಕೂಡಲೇ ಕ್ಷಮೆ ಕೇಳಬೇಕು. ಇನ್ನು ಮುಂದಾದರೂ ಸಾರ್ವಜನಿಕ ಜೀವನದಲ್ಲಿ ಸಭ್ಯತೆಯಿಂದ ವರ್ತಿಸುತ್ತಾರೆ ಎಂದು ನಿರೀಕ್ಷಿಸುತ್ತೇನೆ" ಎಂದು ಟೀಕಿಸಿದ್ದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications