Lok Sabha Election 2024: ಬೆಂಗಳೂರಿನ ಮತದಾರರಿಗೆ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಹೇಳಿದ್ದೇನು ಗೊತ್ತೇ?
ಬೆಂಗಳೂರು, ಏಪ್ರಿಲ್, 26: ಕರ್ನಾಟಕದಲ್ಲಿ ಇಂದು (ಏಪ್ರಿಲ್ 26) ಲೋಕಸಭಾ ಚುನಾವಣೆಯ ಮೋದಲ ಹಂತದ ಮತದಾನ ಆರಂಭವಾಗಿದೆ. ಇನ್ನು ಇಂದು (ಏಪ್ರಿಲ್ 26) ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಮತದಾನ ಮಾಡಿ ಗಮನ ಸೆಳೆದರು. ಹಾಗಾದರೆ ಈ ವೇಳೆ ಅವರು ಬೆಂಗಳೂರಿನ ಮತದಾರರಿಗೆ ಏನು ಸಂದೇಶದ ನೀಡಿದರು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಶುಕ್ರವಾರ (ಏಪ್ರಿಲ್ 26) ಬೆಳಗ್ಗೆಯೇ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರಕ್ಕೆ ಒಳಪಡುವ ಡಾಲರ್ಸ್ ಕಾಲೋನಿಯಲ್ಲಿ ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮತದಾನವು ಸುಗಮವಾಗಿ ನಡೆಯಿತು ಮತ್ತು ಪ್ರಕ್ರಿಯೆಯು ತುಂಬಾ ಸುಲಭವಾಗಿದೆ. ನಮ್ಮ ಪ್ರಜಾಪ್ರಭುತ್ವವನ್ನು ಮುಂದಕ್ಕೆ ಕೊಂಡೊಯ್ಯುವುದು ಮುಖ್ಯವಾಗಿದೆ. ಆದ್ದರಿಂದ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿ," ಎಂದು ಮನವಿ ಮಾಡಿದರು.

"ಬೆಂಗಳೂರಿನಲ್ಲಿ ಈ ಬಾರಿ ಹೆಚ್ಚಿನ ಮತದಾರರು ಮತ ಚಲಾವಣೆ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದೇನೆ. ಅದರಲ್ಲೂ ಯುವಪೀಳಿಗೆಯ ಯುವಕ & ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಿದರೆ ಇನ್ನು ಉತ್ತಮವಾಗಿರುತ್ತದೆ," ಎಂದು ಹೇಳಿದರು.
ಮತ್ತೊಂದೆಡೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಪತ್ನಿ ಸುಧಾ ಮೂರ್ತಿ ಅವರೊಂದಿಗೆ ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದೇ ಮತದಾನ ಮಾಡುವ ಮೂಲಕ ನಗರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವಂತೆ ಬೆಂಗಳೂರಿನ ಮತದಾರರಿಗೆ ಮನವಿ ಮಾಡಿದರು.
"ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ - ಮನೆಯಲ್ಲಿ ಕುಳಿತುಕೊಳ್ಳಬೇಡಿ, ನಿಮ್ಮ ನಾಯಕನನ್ನು ಆಯ್ಕೆ ಮಾಡಿ. ಗ್ರಾಮೀಣ ಪ್ರದೇಶದವರಿಗೆ ಹೋಲಿಸಿದರೆ ನಗರದ ಜನರು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನನಗೆ ಯಾವಾಗಲೂ ಅನಿಸುತ್ತದೆ. ಯುವಕರು ಹೊರಗೆ ಬಂದು ಮತ ಚಲಾಯಿಸಲು ನಾನು ವಿನಂತಿಸುತ್ತೇನೆ" ಎಂದು ಸುಧಾಮೂರ್ತಿ ಅವರು ಹೇಳಿದರು.
ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು 14 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಉಳಿದ 14 ಸ್ಥಾನಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications