Lok Sabha election: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯದ ಬಳಿಕವೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳಿಲ್ವಾ?
ಬೆಂಗಳೂರು, ಮಾರ್ಚ್ 08: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಕಾಂಗ್ರೆಸ್‌ಗೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಗಳು ಸಿಗುತ್ತಿಲ್ಲವೇ ಎಂಬ ಅನುಮಾನ ಶುರುವಾಗಿದೆ. ಅಭ್ಯರ್ಥಿಗಳನ್ನು ಹುಡುಕಲು ತೊಂದರೆಯಾಗುತ್ತಿದೆ ಎಂಬ ವರದಿಗಳಿವೆ.
ಲೋಕಸಭಾ ಚುನಾವಣೆಲ್ಲಿ ಸ್ಪರ್ಧಿಸಲು ರಾಜ್ಯದ ಹಲವು ಸಚಿವರು ಮುಂದೆ ಬರುತ್ತಿಲ್ಲ. ರಾಜ್ಯದಲ್ಲಿ ಅಧಿಕಾರದ ಸ್ಥಾನಗಳನ್ನು ಬಿಟ್ಟು ಅನಿಶ್ಚಿತತೆಗೆ ಧುಮುಕಲು ಯಾರೂ ಬಯಸುವುದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿಗೆ ವರದಿ ಮಾಡಿದೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ ಮತ್ತು ಪ್ರಸ್ತುತ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಚ್‌ಡಿ ಕುಮಾರಸ್ವಾಮಿ ಅವರ ಜಾತ್ಯತೀತ ಜನತಾದಳ ಒಂದು ಸ್ಥಾನವನ್ನು ಗೆದ್ದಿದೆ. ಬಿಜೆಪಿ- ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಒಂದು ಸ್ಥಾನ ಲಭಿಸಿತ್ತು.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ ಜಯಭೇರಿ ಬಾರಿಸಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಆದರೆ, ಇದಕ್ಕೆ ಪಕ್ಷದ ನಾಯಕರೇ ಸಾಥ್ ನೀಡುತ್ತಿಲ್ಲ.
ಕಾಂಗ್ರೆಸ್ ಕೇಂದ್ರ ನಾಯಕತ್ವವು ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ ಕೆಲವು ಸ್ಥಾನಗಳಿಗೆ ಸಿದ್ದರಾಮಯ್ಯ ಸರ್ಕಾರದ ಸಚಿವರು ಸ್ಪರ್ಧಿಸಬೇಕೆಂದು ಬಯಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ನಾಯಕರ ಪಟ್ಟಿಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಬಿ ನಾಗೇಂದ್ರ, ಕೃಷ್ಣ ಬೈರೇಗೌಡ, ಕೆ ಎಚ್ ಮುನಿಯಪ್ಪ, ಎಚ್ ಕೆ ಪಾಟೀಲ್ ಮತ್ತು ಈಶ್ವರ ಖಂಡ್ರೆ ಸೇರಿದ್ದಾರೆ. ಆದರೆ ಇವರ್ಯಾರು ಲೋಕಸಭೆಗೆ ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿಲ್ಲ.
ನೋ ಎಂದ ಲಕ್ಷ್ಮೀ ಹೆಬ್ಬಾಳ್ಕರ್, ಎಸ್.ಸಿ.ಮಹದೇವಪ್ಪ
ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಎಂ.ಎಸ್.ಹೆಬ್ಬಾಳ್ಕರ್ ಅವರು ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದು, ಮಗನಿಗಾಗಿ ಟಿಕೆಟ್ ಕೇಳುತ್ತಿದ್ದಾರೆ. ಇದು ಬೆಳಗಾವಿ ಜನತೆ ಮತ್ತು ಇಲ್ಲಿನ ಮುಖಂಡರ ಆಶಯವಾಗಿದ್ದು, ಅವರ ಹೆಸರನ್ನೂ ಶಿಫಾರಸು ಮಾಡಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನು, ನನ್ನ ಸಹೋದರನನ್ನು ವಿಧಾನಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿದಾಗಲೂ ಜಿಲ್ಲೆಯ ಎಲ್ಲಾ ನಾಯಕರು ಒಟ್ಟಾಗಿ ಈ ನಿರ್ಧಾರ ಕೈಗೊಂಡಿದ್ದರು. ಈಗ ನನ್ನ ಮಗನ ಪರವಾಗಿಯೂ ಜಿಲ್ಲೆಯ ಜನತೆ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ.
ಇತ್ತ, ಸಮಾಜ ಕಲ್ಯಾಣ ಸಚಿವ ಎಸ್.ಸಿ.ಮಹದೇವಪ್ಪ ಯಾವುದೇ ಕಾರಣ ನೀಡದೆ ಸಾರಾಸಗಟಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಮನವಿಯನ್ನು ನಿರಾಕರಿಸಿದ್ದಾರೆ. ನಾನು ಲೋಕಸಭೆ ಅಭ್ಯರ್ಥಿ ಅಲ್ಲ, ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಗೆಲುವಿಗೆ ಪ್ರಯತ್ನಿಸುತ್ತೇನೆ ಎಂದಿದ್ದಾರೆ.
ಸಚಿವರನ್ನು ಚುನಾವಣೆಗೆ ನಿಲ್ಲಿಸುವ ವಿಚಾರದಲ್ಲಿ ಪಕ್ಷ ಕಠಿಣ ನಿಲುವು ತಳೆಯಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಎಲ್ಲರೂ ಒಪ್ಪಿಕೊಳ್ಳಲೇ ಬೇಕು, ನಾನಾದರೂ ಒಪ್ಪಿಕೊಳ್ಳಬೇಕು, ನಾವೆಲ್ಲರೂ ಪಕ್ಷದಿಂದಾಗಿ ಇಲ್ಲಿ ಇದ್ದೇವೆ, ಎಲ್ಲರೂ ಒಪ್ಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ರಾಜ್ಯ ಪಕ್ಷದ ವರಿಷ್ಠ ಡಿಕೆ ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications