Lok Sabha Election 2024: ಬೆಂಗಳೂರಿನಲ್ಲಿ ಈ ದಿನಗಳಂದು ಮದ್ಯ ಮಾರಾಟ ಸಂಪೂರ್ಣ ನಿಷೇಧ-ಯಾವ್ಯಾವಾಗ ಹಾಗೂ ಕಾರಣವೇನು?
ಬೆಂಗಳೂರು, ಏಪ್ರಿಲ್, 18: ಈಗಾಗಲೇ ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಬೆಂಗಳೂರಿನಲ್ಲಿ 2ನೇ ಹಂತಕ್ಕೆ ಅಂದರೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಈ ದಿನಗಳಂದು ಮದ್ಯ ಮಾರಾಟನ್ನು ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಹಾಗಾದರೆ ಯಾವಾಗಿನಿಂದ ಮಧ್ಯ ಮಾರಾಟ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಏಪ್ರಿಲ್ 24ರ ಮಧ್ಯರಾತ್ರಿ 12 ಗಂಟೆಯಿಂದ 26ರ ಮಧ್ಯರಾತ್ರಿ 12 ಗಂಟೆಯವರೆಗೆ, ಬಳಿಕ ಮ ತ ಎಣಿಕೆ ಹಿನ್ನೆಲೆ ಜೂನ್ 3ರ ಮಧ್ಯರಾತ್ರಿ 12ರಿಂದ ಜೂನ್ 4ರ ಮಧ್ಯರಾತ್ರಿ 12 ರವರೆಗೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ವೇಳೆ ಮದ್ಯ ಮಾರಾಟ ಸಂಪೂರ್ಣ ನಿಷೇಧ ಹಾಗೂ ಧ್ವನಿ ವರ್ಧಕಗಳ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗುವುದು. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶದಲ್ಲಿ ಮನವಿ ಮಾಡಿದ್ದಾರೆ.
ಪ್ರಭಾ ಮಲ್ಲಿಕಾರ್ಜುನ ಬೃಹತ್ ರೋಡ್ ಶೋ: ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ನಾಮಪತ್ರ ಸಲ್ಲಿಸುವ ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದ ಜನಸ್ತೋಮ ಮೆರವಣಿಗೆಗೆ ಸಾಕ್ಷಿಯಾಯಿತು.
ನಾಮಪತ್ರ ಸಲ್ಲಿಕೆಗೆ ತೆರಳುವ ಮುನ್ನ ತಮ್ಮ ಗೃಹ ಕಚೇರಿ ಶಿವಪಾರ್ವತಿಯಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಭಾ ಮಲ್ಲಿಕಾರ್ಜುನ ಅವರ ತಾಯಿ ಇದ್ದರು. ಪೂಜೆ ಸಲ್ಲಿಸಿದ ನಂತರ ತಾಯಿ ಕಾಲಿಗೆ ಬಿದ್ದು ಆರ್ಶೀವಾದ ಪಡೆದರು.
ಈ ವೇಳೆ ಹರಪನಹಳ್ಳಿ ತಾಲೂಕಿನ ಕಾಂಗ್ರೆಸ್ ಮುಖಂಡ ಪಿ.ಟಿ.ಪರಮೇಶ್ವರ ನಾಯ್ಕ್ ಸೇರಿದಂತೆ ಇತರರು ಬೃಹತ್ ಹಾರ ಹಾಕುವ ಮೂಲಕ ಶುಭ ಹಾರೈಸಿದರು.
ನಂತರ ಶಾಮನೂರು ಗ್ರಾಮದ ಶ್ರೀ ಆಂಜನೇಯ, ಶ್ರೀ ಈಶ್ವರ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ, ಅಪಾರ ಅಭಿಮಾನಿಗಳಲ್ಲಿ ಮತಯಾಚನೆ ಮಾಡಿದರು. ನಂತರ ಅಲ್ಲಿಂದ ನಿಟುವಳ್ಳಿಯ ಗ್ರಾಮದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಬೃಹತ್ ರೋಡ್ ಶೋನಲ್ಲಿ ಭಾಗಿಯಾದರು.
ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದ ಬಳಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಈ ರೋಡ್ ಶೋಗೆ ಚಾಲನೆ ನೀಡಿದರು. ಈ ರೋಡ್ ಶೋ ನಿಟುವಳ್ಳಿಯ ಹೆಚ್.ಕೆ.ಆರ್. ಸರ್ಕಲ್, ಡಾಂಗೆಪಾರ್ಕ್, ಶಿವಪ್ಪಯ್ಯ ಸರ್ಕಲ್, ತ್ರಿಶೂಲ್ ಟಾಕೀಸ್ ಮೂಲಕ ಪಿ.ಬಿ. ರಸ್ತೆಗೆ ಆಗಮಿಸಿತು.
ಮತ್ತೊಂದೆಡೆ ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಿಂದ ಆರಂಭವಾದ ರೋಡ್ ಶೋಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.
ರೋಡ್ ಶೋ ಹಗೆದಿಬ್ಬ ಸರ್ಕಲ್, ಕಾಳಿಕಾದೇವಿ ರಸ್ತೆ, ಚೌಕಿಪೇಟೆ ರಸ್ತೆ, ಬಕ್ಕೇಶ್ವರ ದೇವಸ್ಥಾನ, ಹಾಸಬಾವಿ ಸರ್ಕಲ್, ಮಾರ್ಕೇಟ್ ರಸ್ತೆ, ಮಂಡಿಪೇಟೆ, ಲಕ್ಷ್ಮೀ ಸರ್ಕಲ್ ಮೂಲಕ ಪಿ.ಬಿ. ರಸ್ತೆಗೆ ಆಗಮಿಸಿತು.
ಈ ಎರಡು ರೋಡ್ ಶೋಗಳು ಪಿ.ಬಿ.ರಸ್ತೆಯಲ್ಲಿ ಒಂದೇ ಕಡೆ ಸೇರಿ ಪಿ.ಬಿ.ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಿತು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರಭಾ ಮಲ್ಲಿಕಾರ್ಜುನ್ ಅವರು ನಾಮಪತ್ರ ಸಲ್ಲಿಸಿದರು.
ಈ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಜಿ.ಮಂಜಪ್ಪ, ಎಸ್. ಎಸ್. ಮಲ್ಲಿಕಾರ್ಜುನ್, ಅವರ ಪುತ್ರ ಸಮರ್ಥ ಶಾಮನೂರು ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.












Click it and Unblock the Notifications