• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೋಕಸಭೆ ಚುನಾವಣೆ: ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಯಾರಿಗೆ ಗೆಲುವು

|

ಬೆಂಗಳೂರು, ಮೇ 23: ಹದಿನೇಳನೇ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬಂದಿದೆ. ಫಲಿತಾಂಶ ಕಾಂಗ್ರೆಸ್‌ ಆಘಾತ ನೀಡಿದ್ದರೆ ಬಿಜೆಪಿಗೆ ಕುಣಿದು ಕುಪ್ಪಳಿಸುವಂತೆ ಮಾಡಿದೆ.

ಒಟ್ಟಿನಲ್ಲಿ ಈ ಬಾರಿ ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲೇ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸ್ಥಾನವನ್ನು ಕರ್ನಾಟಕದಲ್ಲಿ ಗಳಿಸಿದೆ ಹಾಗೂ ದೇಶದಲ್ಲಿ ತಾವು ಅಂದುಕೊಂಡಿದ್ದ ಕ್ಷೇತ್ರದಲ್ಲೂ ಗೆಲುವು ಸಾಧಿಸಿದೆ.

ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು

ಬೆಂಗಳೂರು ಬೆಂಗಳೂರು ಗ್ರಾಮೀಣ ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬೆಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಡಿವಿ ಸದಾನಂದಗೌಡ , ಕೃಷ್ಣ ಬೈರೇಗೌಡ ಎದುರು ಗೆಲುವು ಸಾಧಿಸಿದ್ದರೆ, ಬೆಂಗಳೂರು ಕೇಂದ್ರದಲ್ಲಿ ಪಿಸಿ ಮೋಹನ್ ರಿಜ್ವಾನ್ ಅರ್ಷದ್ ಎದುರು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ , ಕಾಂಗ್ರೆಸ್‌ನ ಬಿಕೆ ಹರಿಪ್ರಸಾದ್ ಅವರನ್ನು ಸೋಲಿಸಿದ್ದಾರೆ. ಒಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಹೇಳಿದಂತೆ ಕರ್ನಾಟಕದಲ್ಲಿ 22 ಸ್ಥಾನವನ್ನು ಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

English summary
Lok sabha election results 2019: BJP won 23 seats in 28 constituencies in Karnataka , Bengaluru urban and rural won 3 out of 4 constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X