ನಾಳೆ ಮತ ಎಣಿಕೆ: ಗಮನಿಸಿ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್, ಸಂಚಾರ ನಿಷೇಧ: BTP
ಬೆಂಗಳೂರು, ಜೂನ್ 03: ಲೋಸಕಭಾ ಚುನಾವಣೆ ಪೂರ್ಣಗೊಂಡಿದ್ದು, ನಾಳೆ ಮಂಗಳವಾರ ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಈ ಪ್ರಯುಕ್ತ ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಿಗೆ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧಿಸಿ ಸೂಚನೆ ಹೊರಡಿಸಿದ್ದಾರೆ.
ಜೂನ್ 04 ರಂದು ಮಂಗಳವಾರ ಬೆಳಗ್ಗೆಯಿಂದ ಸಂಜೆವರೆಗೆ ಮತ ಎಣಿಕೆ ಆರಂಭವಾಗಲಿದೆ. ಈ ಸಂಬಂಧ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ಬೆಳಗ್ಗೆ 6ಗಂಟೆಯಿಂದ ಕೆಲವು ಬದಲಾವಣೆಗಳು ಆಗಿವೆ. ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಮತ ಎಣಿಕೆ ಮುಗಿಯುವವರೆಗೆ ಸದರಿ ಕಾಲೇಜಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಈ ಕಳಕಂಡ ರಸ್ತೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಬದಲೀ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವಂತೆ ಮನವಿ ಮಾಡಲಾಗಿದೆ.
ವಾಹನಗಳ ಪಾರ್ಕಿಂಗ್ ನಿಷೇಧಿತ ರಸ್ತೆಗಳ ವಿವರ
* ಕೆ ಜಿ ರಸ್ತೆ: ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್ ವರೆಗೆ.
* ವಿಠಲ್ ಮಲ್ಯ ರಸ್ತೆ : ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಚಂಡ್ ಜಂಕ್ಷನ್ ವರೆಗೆ.
* ಆರ್.ಆರ್.ಎಂ.ಆರ್ ರಸ್ತೆ- ರಿಡ್ಕಂಡ್ ಸರ್ಕಲ್ ನಿಂದ ಹಡ್ನನ್ ಜಂಕ್ಷನ್ ವರೆಗೆ
* ಎನ್ ಆರ್ ರಸ್ತೆ: ಹಡ್ನನ್ ಸರ್ಕಲ್ ನಿಂದ ಟೌನ್ ಹಾಲ್ ಜಂಕ್ಷನ್ ವರೆಗೆ
* ಕೆ ಬಿ ರಸ್ತೆ: ಹೆಚ್ ಎಲ್ ಡಿ ಜಂಕ್ಷನ್ ನಿಂದ ಕ್ಷೀನ್ಸ್ ಜಂಕ್ಷನ್ ವರೆಗೆ.
* ಸೆಂಟ್ರಲ್ ಸ್ಟ್ರೀಟ್ ರಸ್ತೆ- ಬಿ.ಆರ್.ವಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ
* ಎಂ.ಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಕ್ರೀನ್ಸ್ ಜಂಕ್ಷನ್ ವರೆಗೆ
* ನೃಪತುಂಗ ರಸ್ತೆ: ಕೆ ಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್ ವರೆಗೆ.
* ಕ್ಷೀನ್ಸ್ ರಸ್ತೆ: ಬಾಳೇಕುಂದ್ರಿ ಸರ್ಕಲ್ ನಿಂದ ಸಿ.ಟಿ.ಓ ಸರ್ಕಲ್ ವರೆಗೆ.
ವಾಹನಗಳ ಪಾರ್ಕಿಂಗ್ ಸ್ಥಳ
* ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳ
* ಸೇಂಟ್ ಜೋಸೆಫ್ ಕಾಲೇಜು ಮೈದಾನ

ದಿನಾಂಕ 04.06.2024 ರಂದು ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಎಸ್,ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಲೋಕಸಭೆ ಚುನಾವಣೆ-2024ರ ಮತ ಎಣಿಕೆ ನಡೆಯುವುದರಿಂದ ಮತ ಎಣಿಕೆಯ ಸ್ಥಳದಲ್ಲಿ ಸೂಕ್ತ ಸಂಚಾರ ಬಂದೋಬಸ್ತ್ ಏರ್ಪಡಿಸುವ ಸಲುವಾಗಿ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.
"Traffic Advisory/ಸಂಚಾರ ಸಲಹೆ" pic.twitter.com/NJxh7zD1yc
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 1, 2024
ಸಂಚಾರ ನಿರ್ಬಂಧ
ಮತ ಎಣಿಕೆ ಸಂಬಂಧ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಈ ಕೆಳಕಂಡ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಬೆಳಗ್ಗೆ 06:00 ಗಂಟೆಯಿಂದ ಸಂಜೆ ವರೆಗೆ ನಿಬಂಧಿಸಲಾಗಿದೆ. ಅದರ ವಿವರ ಇಲ್ಲಿವೆ.
* 32ನೇ ಇ ಕ್ರಾಸ್ ರಸ್ತೆ ಮತ್ತು 39ನೇ ಕ್ರಾಸ್ ರಸ್ತೆ ಜಂಕ್ಷನ್ ನಡುವೆ ಬರುವ 26ನೇ ಮುಖ್ಯ ರಸ್ತೆ.
* 18ನೇ ಮುಖ್ಯ ರಸ್ತೆ ಮತ್ತು 28ನೇ ಮುಖ್ಯ ರಸ್ತೆಯ ಮಧ್ಯದಲ್ಲಿ ಬರುವ 36ನೇ ಕ್ರಾಸ್.
ನಿರ್ಬಂಧಿಸಿದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು
* 18ನೇ ಮುಖ್ಯ ರಸ್ತೆ.
* ಈಸ್ಟ್ ಎಂಡ್ ಮುಖ್ಯ ರಸ್ತೆ.
* 32ನೇ ಇ ಕ್ರಾಸ್ ರಸ್ತೆ
* 39ನೇ ಕ್ರಾಸ್ ರಸ್ತೆ ಬಳಸಬಹುದಾಗಿರುತ್ತದೆ.
ನಾಳೆ ಬೆಳಗ್ಗೆ 8ಗಂಟೆಗೆ ಚುನಾವಣೆ ಮತ ಎಣಿಕೆ ಆರಂಭವಾಗಲಿದೆ. ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಇಂದು ಬಿಬಿಎಂಪಿ ತುಷಾರ್ ಗಿರಿನಾಥ್ ಅವರು ಕೇಂದ್ರ ಪರಿಶೀಲಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications